2nd PUC Results 2023 Toppers: ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ಟಾಪರ್‌ಗಳು
2022-23ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಶುಕ್ರವಾರ, ಏಪ್ರಿಲ್ 21) ಪ್ರಕಟವಾಗಿದ್ದು, ರಾಜ್ಯದ ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡಕ್ಕೆ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಮತ್ತು ಕೊಡಗು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.
ರಾಜ್ಯದ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉನ್ನತ ಶ್ರೇಣಿಯಲ್ಲಿ 1,09,509 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, ಪ್ರಥಮ ದರ್ಜೆಯಲ್ಲಿ 2,47,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು 90,014 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸ್ ಆಗಿದ್ದರೆ, 77,371 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದ ಟಾಪರ್
ದ್ವಿತೀಯ ಪಿಯುಸಿ ಫಲಿತಾಂಶದ ಕಲಾ ವಿಭಾಗದಲ್ಲಿ ತಬಸುಮ್ ಶೇಖ್ ಅವರು ಮೊದಲ ರ್‍ಯಾಂಕ್ ಗಳಿಸಿದ್ದಾರೆ. ಬೆಂಗಳೂರಿನ ಎನ್ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್ ಅವರು 600 ಅಂಕಗಳಿಗೆ 593 ಅಂಕಗಳನ್ನು ಗಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿಯೇ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಕಾಲೇಜಿಗೆ ಮತ್ತು ಪೋಷಕರಿಗೆ ಹೆಮ್ಮೆ ತಂದಿದ್ದಾರೆ.

ವಾಣಿಜ್ಯ ವಿಭಾಗದ ಟಾಪರ್
2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ಅವರು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಅನನ್ಯಾ ಅವರು ಒಟ್ಟು ಒಟ್ಟು 600 ಅಂಕಗಳಿಗೆ 600 ಅಂಕಗಳನ್ನು ಪಡೆದು ಅತ್ಯುತ್ತಮ ಶ್ರೇಯಾಂಕಕ್ಕೆ ಭಾಜನರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಇಬ್ಬರು ಟಾಪರ್
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ವಿಜ್ಞಾನ ವಿಭಾಗದಲ್ಲಿ ಸುರಭಿ ಎಂಬ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಬೆಂಗಳೂರಿನ ಆರ್‌ವಿ ಕಾಲೇಜಿನ ವಿದ್ಯಾರ್ಥಿನಿ ಸುರಭಿ ಅವರು ಒಟ್ಟು 600 ಅಂಕಗಳಿಗೆ 596 ಅಂಕಗಳನ್ನು ಪಡೆದು ಮೊದಲ ರ್‍ಯಾಂಕ್ ಗಳಿಸಿದ್ದಾರೆ.
ಇದೇ ವೇಳೆ ಮತ್ತೊಬ್ಬ ವಿದ್ಯಾರ್ಥಿ ಕೌಶಿಕ್ ಎಂಬುವವರು ಕೂಡ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಕೌಶಿಕ್ 600 ಅಂಕಗಳಿಗೆ 596 ಅಂಕಗಳನ್ನು ಪಡೆದಿದ್ದಾರೆ.
2022-23ನೇ ಸಾಲಿನಲ್ಲಿ ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.80.25 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದರೆ, ಶೇ.69.05ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆ ಶೇ.95.33 ಫಲಿತಾಂಶ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. 2022ರಲ್ಲಿ 88.02 ಫಲಿತಾಂಶ ಗಳಿಸಿ ಪ್ರಥಮ ಸ್ಥಾನ ಗಳಿಸಿತ್ತು.
ವಾಣಿಜ್ಯ ವಿಭಾಗದ ಆರು ಮಂದಿ ಟಾಪರ್‌ಗಳಲ್ಲಿ ಮೂಡಬಿದಿರೆ ಆಳ್ವಾಸ್ ಪಿಯು ಕಾಲೇಜಿನ ಅನನ್ಯಾ 600ಕ್ಕೆ 600 ಅಂಕ ಪಡೆದಿದ್ದಾರೆ. ಮೂಡಬಿದಿರೆಯ ಎಕ್ಸೆಲೆಂಟ್ ಪಿಯು ಕಾಲೇಜಿನ ಖುಷಿ ವೈ ಬಾಗಲಕೋಟೆ 596 ಅಂಕ ಪಡೆದಿದ್ದಾರೆ.
ಮಂಗಳೂರಿನ ವಿಕಾಸ್ ಪಿಯು ಕಾಲೇಜಿನ ಸ್ವಾತಿ ಎಸ್ ಪೈ 596 ಅಂಕ ಪಡೆದಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ. ದಿಶಾ ರಾವ್ 596 ಅಂಕ ಪಡೆದಿದ್ದಾರೆ. ಮಂಗಳೂರಿನ ಕೆನರಾ ಪಿಯು ಕಾಲೇಜಿನ ಎನ್. ಪ್ರತೀಕ್ ಮಲ್ಯ 595 ಅಂಕ ಪಡೆದಿದ್ದಾರೆ. ಪುತ್ತೂರು ವಿವೇಕಾನಂದ ಪಿಯು ಕಾಲೇಜಿನ ಆದಿತ್ಯ ನಾರಾಯಣ ಪಿ.ಎಸ್ 595 ಅಂಕ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಪುತ್ತೂರಿನ ವಿವೇಕಾನಂದ ಪಿಯು ಕಾಲೇಜಿನ ಮಂಜುಶ್ರೀ 591 ಅಂಕ ಪಡೆದು ಟಾಪರ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಳಿಕೆಯ ಸತ್ಯಸಾಯಿ ಲೋಕಸೇವಾ ಪಿಯು ಕಾಲೇಜಿನ ಯೋಗೇಶ್ ತುಕರಾಮ ಬಡಚಿ 594 ಅಂಕ ಪಡೆದಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಪ್ರಚಿತಾ ಎಂ. 594 ಅಂಕ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಆಳ್ವಾಸ್ ಕಾಲೇಜಿನ ಅನನ್ಯಾ ಮಾತನಾಡಿ, "ಈ ಫಲಿತಾಂಶಕ್ಕೆ ಹೆತ್ತವರು, ಸ್ನೇಹಿತರು ಕಾಲೇಜು ಕಾರಣ. ಕಾಲೇಜಿನಲ್ಲಿ ಮಾಡಿದ ಪಾಠವನ್ನು ಹಾಸ್ಟೆಲ್‌ನಲ್ಲಿ ಪ್ರತಿದಿನ ಅಧ್ಯಯನ ಮಾಡುತ್ತಿದ್ದೆ. ಪ್ರತಿಶತ ನೂರು ಅಂಕ ಬರುವ ಯಾವುದೇ ವಿಶ್ವಾಸ ಇರಲಿಲ್ಲ. ಟಾಪರ್ ಲಿಸ್ಟ್‌ನಲ್ಲಿ ಹೆಸರು ನೋಡಿದಾಗ ಸಂತೋಷವಾಗಿದೆ. ಪ್ರೋತ್ಸಾಹ ನೀಡಿದ ಕಾಲೇಜಿಗೆ ಅಭಾರಿಯಾಗಿದ್ದೇನೆ," ಎಂದು ಹೇಳಿದ್ದಾರೆ.












Click it and Unblock the Notifications