Karnataka 2nd PUC Result: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವಾಗ? ಪರಿಶೀಲಿಸುವುದೇಗೆ?
Karnataka 2nd PUC Result: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ರಂದು ಪ್ರಾರಂಭವಾಗಿದ್ದು, ಮಾರ್ಚ್ 20ವರೆಗೆ ನಡೆದಿತ್ತು. ಇನ್ನು ಇದೀಗ ಫಲಿತಾಂಶ ಯಾವಾಗ ಎನ್ನುವ ಬಿಗ್ ಅಪ್ಡೇಟ್‌ವೊಂದು ಲಭ್ಯವಾಗಿದೆ. ಹಾಗಾದ್ರೆ ಪಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ವಿದ್ಯಾರ್ಥಿಗಳಲ್ಲಿ ಇತ್ತು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಪ್ರಕಾರ, ಈ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿಲ್ಲ. ಮತ್ಯಾವಾಗ ಪ್ರಕಟ ಮಾಡಲಾಗುತ್ತದೆ ಎನ್ನುವ ಮಾಹಿತಿ ಇಲ್ಲಿದೆ ಗಮನಿಸಿ.

ಇದೀಗ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಮೌಲ್ಯಮಾಪನ ಮುಗಿದ ಬಳಿಕ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ರಂದು ಪ್ರಾರಂಭವಾಗಿ ಮಾರ್ಚ್ 20ವರೆಗೆ ನಡೆದಿತ್ತು. ಎಲ್ಲಾ ಪರೀಕ್ಷಾ ದಿನಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಪರೀಕ್ಷೆಗಳು ನಡೆದಿದ್ದವು.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯ ನಿಖರ ದಿನಾಂಕ ಇನ್ನೂ ಅಂತಿಮ ಆಗಿಲ್ಲ. ಪ್ರಸ್ತುತ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವ ಕಾರಣದಿಂದ ಫಲಿತಾಂಶ ಬರುವುದು ವಿಳಂಬವಾಗಬಹುದು. ಕಳೆದ ವರ್ಷ ಏಪ್ರಿಲ್ 10ರಂದು ಫಲಿತಾಂಶ ಘೋಷಣೆ ಮಾಡಲಾಗಿತ್ತು. ಈ ವರ್ಷವೂ ಇದೇ ರೀತಿ ಆಗಬಹುದು. ಆದ್ದರಿಂದ ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಫಲಿತಾಂಶ ಪ್ರಕಟವಾದ ಬಳಿಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್ kseab.karnataka.gov.inನಲ್ಲಿ ಪರಿಶೀಲನೆ ಮಾಡಬಹುದಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸುವುದೇಗೆ?
* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
* ಮೈನ್ ಪೇಜ್‌ನಲ್ಲಿ 2nd PUC Result 2025 ಎಂಬುದರ ಮೇಲೆ ಕ್ಲಿಕ್ ಮಾಡಿ ಲಿಂಕ್ ಓಪನ್ ಮಾಡಿ.
* ಲಾಗಿನ್ ವಿವರಗಳನ್ನು ನಮೂದಿಸಿ (ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಮತ್ತು ಕ್ಯಾಪ್ಚಾ ಕೋಡ್).
* ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶ ಪರಿಶೀಲಿಸಿ.
* ಪುಟದಲ್ಲಿ ನಿಮ್ಮ ಫಲಿತಾಂಶ ಕಾಣಲಿದ್ದು, ಆ ಪುಟವನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಬಹುದು.
* ಅಂಕಪಟ್ಟಿ ತಡವಾಗಿ ಸಿಗುವುದರಿಂದ ಇದನ್ನು ಪ್ರಿಂಟ್ ಮಾಡಿಟ್ಟುಕೊಳ್ಳಿ. ಇದು ನಿಮಗೆ ಭವಿಷ್ಯದಲ್ಲಿ ಬೇಕಾಗಬಹುದು.
* ಕರ್ನಾಟಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ, ಒಟ್ಟು ಅಂಕಗಳು, ವಿಷಯವಾರು ಅಂಕಗಳು ಹಾಗೂ ಫಲಿತಾಂಶ ಇರುತ್ತದೆ.
* ಕಳೆದ ವರ್ಷ ಏಪ್ರಿಲ್ 10ರಂದು ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಶೇಕಡ 81.15ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು.












Click it and Unblock the Notifications