ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 20ರ ವೇಳೆಗೆ ಬರಲಿದೆ ದ್ವಿತೀಯ ಪಿಯುಸಿ ಫಲಿತಾಂಶ

|
Google Oneindia Kannada News

ಬೆಂಗಳೂರು, ಜುಲೈ 9: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರ ವೇಳೆಗೆ ಹೊರ ಬೀಳಲಿದೆ.

Recommended Video

Facebook , Instagram , tinder ಸೇರಿದಂತೆ ಬಾರತೀಯ ಸೇನೆಯು 89 ಆ್ಯಪ್‌ಗಳನ್ನು ನಿಷೇಧಿಸಿದೆ.| Oneindia Kannada

ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿ ಈ ಕುರಿತು ಮಾಹಿತಿ ನೀಡಿದ್ದಾರೆ. ಜುಲೈ ಕೊನೆಯ ವಾರದೊಳಗೆ ಪಿಯುಸಿ ಫಲಿತಾಂಶವನ್ನು ವಿದ್ಯಾರ್ಥಿಗಳು ನಿರೀಕ್ಷೆ ಮಾಡಬಹುದು ಎಂದಿದ್ದಾರೆ.

ಕೊರೊನಾ ಭೀತಿ ನಡುವೆಯೇ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಕೊರೊನಾ ಭೀತಿ ನಡುವೆಯೇ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ

ಒಟ್ಟು 5.95 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ.ಏಪ್ರಿಲ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಬಾಕಿ ಉಳಿದಿದ್ದ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್‌ನಲ್ಲಿ ನಡೆಸಲಾಯಿತು.

Karnataka 2nd PUC Results To Be Announced By July 20

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ 13,528 ಹೆಚ್ಚುವರಿ ಕೊಠಡಿಗಳ ವ್ಯವಸ್ಥೆ ಮಾಡಲಾಗಿತ್ತು. ಲಾಕ್‌ಡೌನ್‌ಗೂ ಮುನ್ನ 23,064 ಕೊಠಡಿಗಳಲ್ಲಿ ಪರೀಕ್ಷೆ ನಡೆದಿದ್ದವು.

ಫಲಿತಾಂಶವು kseeb.nic.in ಹಾಗೂ result.bspucpa.com ಹಾಗೆಯೇ SuVidya ಪೋರ್ಟಲ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ.ಮೊದಲು ನಿಮ್ಮ ರೋಲ್‌ ನಂಬರ್ ರಿಜಿಸ್ಟರ್ ಮಾಡಿ, ಪೂರ್ಣ ಹೆಸರು ಬರೆಯಿರಿ, ಮೊಬೈಲ್ ನಂಬರ್, ಇ-ಮೇಲ್, ಗಂಡು/ಹೆಣ್ಣು, ಫ್ಯೂಚರ್ ಇಂಟರೆಸ್ಟ್ ಯಾವುದು ಎಂದು ಬರೆದು ರಿಜಿಸ್ಟರ್ ಮಾಡಿದರೆ ಫಲಿತಾಂಶ ಬಂದ ಬಳಿಕ ನಿಮಗೆ ಅಲರ್ಟ್ ಬರುತ್ತದೆ.

2019ರ ಪಿಯು ಫಲಿತಾಂಶದ ಪ್ರಕಾರ ಶೇ.61.73 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ.66.58ರಷ್ಟು ವಿಜ್ಞಾನ ವಿದ್ಯಾರ್ಥಿಗಳು, ಶೇ.66.39ರಷ್ಟು ವಾಣಿಜ್ಯ ವಿದ್ಯಾರ್ಥಿಗಳು, ಶೇ.50.53ರಷ್ಟು ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

English summary
The Department of Pre-University Education (PUE) will declare the result of PU-II or class 12 Karnataka board exams by July 20, the state education minister S Suresh Kumar informed via a tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X