ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 17ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

|
Google Oneindia Kannada News

ಬೆಂಗಳೂರು, ಏ.11: ಏಪ್ರಿಲ್ 17ರಂದು 2019ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.

ಸಿಇಟಿ ಪರೀಕ್ಷೆಯು ಏ.29ರಿಂದ ಮೇ 1ರವರೆಗೆ ನಡೆಯಲಿದೆ. ಪಿಯುನಲ್ಲಿ ವಿಜ್ಞಾನ ವಿಷಯ ವ್ಯಾಸಂಗ ಮಾಡಿರುವ ಬಹುತೇಕ ವಿದ್ಯಾರ್ಥಿಗಳು ಸಿಇಟಿ ಬರೆಯುವುದರಿಂದ ವಿದ್ಯಾರ್ಥಿಗಳಿಗೆ ಒತ್ತಡ ಕಡಿಮೆಯಾಗಲಿದೆ.

ಏಪ್ರಿಲ್ 23,24ರಂದು ಸಿಇಟಿ ಪರೀಕ್ಷೆ, ವಿದ್ಯಾರ್ಥಿಗಳೇ ಸಿದ್ಧರಾಗಿ ಏಪ್ರಿಲ್ 23,24ರಂದು ಸಿಇಟಿ ಪರೀಕ್ಷೆ, ವಿದ್ಯಾರ್ಥಿಗಳೇ ಸಿದ್ಧರಾಗಿ

ಇದೇ ಮೊದಲ ಬಾರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸಿಇಟಿ ಪರೀಕ್ಷೆ ಆರಂಭಕ್ಕೂ ಮುನ್ನವೇ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಿದೆ.

Karnataka class 12 results to be declared on April 17

ಈ ಸಾಲಿನಿಂದ ಮೌಲ್ಯಮಾಪಕರು ಅಂಕಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿರುವುದರಿಂದ ಫಲಿತಾಂಶದ ಸಿದ್ಧತೆ ಕೆಲಸ ಪಿಯು ಇಲಾಖೆಗೆ ಸರಳವಾಗಿದೆ. 2019ನೇ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು.

ಸಿಇಟಿ ಮೊದಲಿಗೆ ಪಿಯು ಫಲಿತಾಂಶ ಪ್ರಕಟವಾಗುವುದರಿಂದ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಕೊಂಚ ಕಡಿಮೆಯಾಗುತ್ತದೆ.

ಪಿಯುನಲ್ಲಿ ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಳ್ಳಬೇಕೆ ಬೇಡವೇ ಎಂದು ತೀರ್ಮಾನಿಸಲು ಕಾಲವಕಾಶ ಇರುತ್ತದೆ.

karresults.nic.in and kseeb.kar.nic.in ಫಲಿತಾಂಶ ವೀಕ್ಷಿಸಬಹುದು

ಸಿಇಟಿ ಫಲಿತಾಂಶದ ವೇಳೆ ಶೇ.50ರಷ್ಟು ಪಿಯು ಮತ್ತು ಶೇ.50ರಷ್ಟು ಸಿಇಟಿ ಅಂಕಗಳನ್ನು ಪರಿಗಣಿಸಲಾಗುತ್ತದೆ.

English summary
The Karnataka PUC result will be announced by the Department of Pre University Examination in April 17. The KAR PUC result can also be declared in May as teachers will be assigned election duties.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X