ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ17ರ ಬದಲು ಮೇ18ರಂದು ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ

By Mahesh
|
Google Oneindia Kannada News

ಬೆಂಗಳೂರು, ಮೇ 15: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಭಾನುವಾರ(ಮೇ.17)ರ ಬದಲಾಗಿ ಸೋಮವಾರ, ಮೇ 18ರಂದು ಪ್ರಕಟಗೊಳ್ಳಲಿದೆ. ಬೆಂಗಳೂರು ನಗರದಲ್ಲಿರುವ ಕರ್ನಾಟಕ ಪರೀಕ್ಷಾ ಮಂಡಳಿಯಲ್ಲಿ ಬೆಳಗ್ಗೆ 11 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಪರೀಕ್ಷಾ ಫಲಿತಾಂಶ ಪ್ರಕಟಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದ್ದು, ಸೋಮವಾರ ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸುವಂತೆ ಪದವಿ ಪೂರ್ವ ಶಿಕ್ಷಣ ಮಂಡಳಿ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. [ಜೂನ್ 15ರಿಂದ ಪ್ರಥಮ ಪಿಯುಸಿ ತರಗತಿಗಳು ಆರಂಭ]

Karnataka 2nd PUC Results To Be Declared on May 17

ವಿಳಂಬ ಸಾಧ್ಯತೆ ಇಲ್ಲ: ಪ್ರಶ್ನೆ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದ್ದು, ಫಲಿತಾಂಶ ಪ್ರಕಟಿಸಲು ಮಂಡಳಿ ಎಲ್ಲ ರೀತಿಯ ಸಿದ್ಧತೆ ಮುಗಿಸಿದೆ. ಹೀಗಾಗಿ ಮೇ.18ರಂದೇ ಫಲಿತಾಂಶ ಹೊರಬೀಳಲಿದೆ. ವಿಳಂಬವಾದರೂ ಮೇ.19ರೊಳಗೆ ಫಲಿತಾಂಶ ನಿರೀಕ್ಷೆ ಇಟುಕೊಳ್ಳಬಹುದು. [ಪಿಯು ಪ್ರಶ್ನೆ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರ]

ಕಳೆದ ಮಾರ್ಚ್ 12ರಿಂದ 28ರ ವರೆಗೆ ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ನಡೆದಿತ್ತು. ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ ಸೇರಿದಂತೆ ಒಟ್ಟು 6,10,939ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. [ಕಾಲೇಜು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ]

3.1 ಲಕ್ಷ ವಿದ್ಯಾರ್ಥಿಗಳು ಹಾಗೂ 3 ಲಕ್ಷಕ್ಕೂ ಅಧಿಕ ಮಹಿಳೆಯರು ಪರೀಕ್ಷೆ ಬರೆದಿದ್ದರು. ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಗಿದಿದ್ದು, ಫಲಿತಾಂಶ ಮೇ.26ಕ್ಕೆ ಹೊರ ಬೀಳುವ ಸಾಧ್ಯತೆಯಿದೆ.

English summary
The Karnataka 2nd PUC results 2015 is to be declared on May 18, 2015. The results shall be available on the official of Department of Pre-University Education.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X