ಏಪ್ರಿಲ್ ಕೊನೆಯ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ: ತನ್ವೀರ್ ಸೇಠ್
ಬೆಂಗಳೂರು, ಮಾರ್ಚ್ 21: ಈ ಬಾರಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಸ್ ಎಸ್ ಎಸ್ ಸಿ ಮತ್ತು ಪಿಯುಸಿ ಪರೀಕ್ಷೆಯ ಫಲಿತಾಂಶಗಳೂ ಬೇಗನೇ ಹೊರಬೀಳುವ ನಿರೀಕ್ಷೆ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ದ್ವಿತಿಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ ಕೊನೆಯ ವಾರದಲ್ಲೇ ಪ್ರಕಟಗೊಳ್ಳುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಮುಕ್ತಾಯವಾಗಿದ್ದು, ಒಟ್ಟು 1004 ಪರೀಕ್ಷಾ ಕೇಂದ್ರಗಳಲ್ಲಿ, 6.90 ಲಕ್ಷ ವಿದ್ಯಾರ್ಥಿಗಳು ತಮ್ಮ ಬದುಕಿನ ಪ್ರಮುಖ ಘಟ್ಟವಾದ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಪೈಕಿ 3.52 ಲಕ್ಷ ವಿದ್ಯಾರ್ಥಿಗಳು ಹಾಗೂ 3.37 ವಿದ್ಯಾರ್ಥಿನಿಯರಿದ್ದಾರೆ.

ಮಾ.1 ರಿಂದ 16 ರವರೆಗೆ ನಡೆದ ಪರೀಕ್ಷೆಯ ಮೌಲ್ಯಮಾಪನ ಮಾ.26 ರಂದು ಆರಂಭವಾಗಲಿದೆ. ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಪ್ರತಿವರ್ಷ ನಡೆಯುತ್ತಿದ್ದ ಉಪನ್ಯಾಸಕರ ಮುಷ್ಕರಗಳು ಈ ಬಾರಿ ನಡೆಯದಿರುವುದು ವಿದ್ಯಾರ್ಥಿಗಳನ್ನು ನಿರಾಳವಾಗಿಸಿದೆ. ಒಟ್ಟಿನಲ್ಲಿ ಎಲ್ಲವೂ ಅಂದುಕೊಂಡಂತೇ ಆದರೆ ಏಪ್ರಿಲ್ ಅಂತ್ಯದ ಹೊತ್ತಿಗೆ ಫಲಿತಾಂಶ ಹೊರಬೀಳಲಿದೆ.











Click it and Unblock the Notifications