ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಪರಿಶೀಲಿಸುವುದು ಹೇಗೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 29: ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ಪರೀಕ್ಷೆಗಳ ಮರುಮೌಲ್ಯಮಾಪನದ ಫಲಿತಾಂಶಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಶುಕ್ರವಾರ ಪ್ರಕಟಿಸಿದೆ.

ಪಿಯು ವಿಷಯಗಳ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು pue.kar.nic.in ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಪದವಿಪೂರ್ವ ಪರೀಕ್ಷೆಗಳ ಫಲಿತಾಂಶವು ಜುಲೈ 14ರಂದು ಪ್ರಕಟವಾಗಿತ್ತು. ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅವರಲ್ಲಿ ಶೇ 69.2ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

 Karnataka 2nd PUC Revaluation Result 2020 Announced. Here Is How To Check

ಈ ಫಲಿತಾಂಶದಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕಗಳನ್ನು ಪಡೆದಿದ್ದವರು ಪ್ರತಿ ವಿಷಯಕ್ಕೆ ನಿಗದಿತ ಶುಲ್ಕ ಪಾವತಿಸಿ ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ಮರುಮೌಲ್ಯಮಾಪನದಲ್ಲಿ ಪಡೆದ ಅಂಕಗಳನ್ನು ಪಿಯು ಮಂಡಳಿ ಪ್ರಕಟಿಸಿದೆ. ಇನ್ನು ಪರೀಕ್ಷೆಗೆ ಗೈರಾದವರು ಮತ್ತು ಅನುತ್ತೀರ್ಣರಾದವರು ಸೆ. 7ರಿಂದ 18ರವರೆಗೆ ನಿಗದಿಯಾಗಿರುವ ಪೂರಕ ಪರೀಕ್ಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ.

ಇನ್ನು ಕನ್ನಡದಲ್ಲಿಯೂ ವಿಜ್ಞಾನ ಕಲಿಕೆ: ಕನ್ನಡ ಭಾಷೆಯಲ್ಲಿ ಪಿಸಿಎಂಬಿ ಪುಸ್ತಕಇನ್ನು ಕನ್ನಡದಲ್ಲಿಯೂ ವಿಜ್ಞಾನ ಕಲಿಕೆ: ಕನ್ನಡ ಭಾಷೆಯಲ್ಲಿ ಪಿಸಿಎಂಬಿ ಪುಸ್ತಕ

ಫಲಿತಾಂಶ ಪರಿಶೀಲಿಸುವುದು ಹೇಗೆ?

* ಕರ್ನಾಟಕ ಪಿಯುಸಿ ಫಲಿತಾಂಶದ ಅಧಿಕೃತ ವೆಬ್‌ಸೈಟ್‌ pue.kar.nic.inಗೆ ಭೇಟಿ ನೀಡಿ

* ಹೋಮ್ ಪೇಜ್‌ನಲ್ಲಿ 'ರಿವ್ಯಾಲ್ಯುಯೇಷನ್ ರಿಸಲ್ಟ್ಸ್ ಮಾರ್ಚ್ 2020' ಲಿಂಕ್ ಮೇಲೆ ಕ್ಲಿಕ್ ಮಾಡಿ

* ಮೂರು ಪ್ರತ್ಯೇಕ ಲಿಂಕ್ ಗಳಿರುವ ಹೊಸ ಪುಟವೊಂದು ತೆರೆದುಕೊಳ್ಳುತ್ತದೆ.

* ಆ ಲಿಂಕ್‌ಗಳಲ್ಲಿ ನಿಮ್ಮ ಆಯ್ಕೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ

* ಬಳಿಕ ಹೊಸ ಪಿಡಿಎಫ್ ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರು ಅಥವಾ ಪ್ರವೇಶ ಸಂಖ್ಯೆಯ ಮೂಲಕ ನಿಮ್ಮ ಫಲಿತಾಂಶ ವೀಕ್ಷಿಸಿ.

* ನಿಮ್ಮ ಮುಂದಿನ ಬಳಕೆಗಾಗಿ ಅದನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ತೆಗೆಯಿರಿ.

English summary
Karnataka 2nd PUC revaluation result 2020 announced. Here is how to check the result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X