PUC ವಿಜ್ಞಾನ ವಿಭಾಗದಲ್ಲಿ ಶೇ.91.69ರಷ್ಟು ದಾಖಲೆ ಫಲಿತಾಂಶ: ಇವರೇ 599 ಅಂಕ ಗಳಿಸಿದ ಟಾಪರ್
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳು ಎಂದಿನಂತೆ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಬಾರಿ ಶೇಕಡಾ 88.5ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಲವು ಮಂದಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಾಂತ್ರಿಕ ಮತ್ತು ವೈದ್ಯಕೀಯದಂತಹ ವೃತ್ತಿಪರ ಕೋರ್ಸ್ಗಳಿಗೆ ಸೇರಲು ಬಯಸುವವರಿಗೆ ಇದು ದೊಡ್ಡ ಉತ್ತೇಜನ ನೀಡಿದೆ. ಎಷ್ಟು ಮಂದಿ ಟಾಪರ್ಸ್, ಅವರು ಪಡೆದ ಅಂಕಗಳು, ಕಳೆದ ವರ್ಷದ ಸಾಧನೆ, ಅಂಕಿ ಅಂಶ ಇಲ್ಲಿದೆ.
ದ್ವಿತೀಯ ಪಿಯಸಿ ವಿಜ್ಞಾನ ವಿಭಾಗವು ಇತರ (ಕಲಾ ಮತ್ತು ವಾಣಿಜ್ಯ) ವಿಭಾಗಗಳಿಗಿಂತ ಅತಿ ಹೆಚ್ಚು ಅಂದರೆ ಶೇ. 91.69ರಷ್ಟು ಫಲಿತಾಂಶ ದಾಖಲಿಸಿದ್ದು, ಹಿಂದಿನ ವರ್ಷಕ್ಕಿಂತ ಇದು ಗರಿಷ್ಠ ಸಾಧನೆ ಆಗಿದೆ. ಪಿಯು ವಿಜ್ಞಾನ ಪರೀಕ್ಷೆಗೆ ಒಟ್ಟು 2,90,194 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ 2,66,071 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಮಂಗಳೂರಿನ 'ದಿ ಲರ್ನಿಂಗ್ ಸೆಂಟರ್' ಪಿಯು ಕಾಲೇಜಿನ ಪ್ರಿಸ್ಸಿಲ್ಲಾ ಕಾರ್ಡೋಜಾ ಅವರು 599 ಅಂಕಗಳನ್ನು ಪಡೆಯುವ ಮೂಲಕ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಪುತ್ತೂರಿನ ವಿವೇಕಾನಂದ ಪಿಯು ಕಾಲೇಜಿನ ಅಭಿರಾಮ್ ವಿ.ಭಟ್, ಬೆಂಗಳೂರಿನ ಬೇಸ್ ಪಿಯು ಕಾಲೇಜಿನ ಏಂಜೆಲ್ ತಿವಾರಿ ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳು 598 ಅಂಕ ಗಳಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಶಿಕ್ಷಣ ಇಲಾಖೆ ಪ್ರಕಾರ, ಒಟ್ಟು 32 ಮಂದಿ ಅತ್ಯಧಿಕ ಅಂಕ ಪಡೆದಿದ್ದಾರೆ.
ಕಳೆದ ಸಾಲಿನ ವಿಜ್ಞಾನ ವಿದ್ಯಾರ್ಥಿಗಳ ಸಾಧನೆ?
ಕಳೆದ ವರ್ಷ 2024-25ರಲ್ಲಿ ಬರೋಬ್ಬರಿ 2,80,433 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 2,31, 461ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಅಂದು ಒಟ್ಟು ಫಲಿತಾಂಶ 82.54ರಷ್ಟಿತ್ತು. ಇಂದು ವಿಜ್ಞಾನ ವಿದ್ಯಾರ್ಥಿಗಳು 91,63 ರಷ್ಟಾಗುವ ಮೂಲಕ ಮೈಲಿಗಲ್ಲು ಸಾಧನೆ ಮಾಡಿದ್ದಾರೆ.
ಪಿಯುಸಿ ಪರೀಕ್ಷೆ-2 ದಿನಾಂಕ ಘೋಷಣೆ
ಒಟ್ಟಾರೆ ನೋಡುವುದಾದರೆ ರಾಜ್ಯಾದ್ಯಂತ ಒಟ್ಟು 6,32,200 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಬಾರಿ ಒಟ್ಟು ಶೇ.86.48 ರಷ್ಟಾಗಿದೆ. 2025ರಲ್ಲಿ ಶೇ. 73.45ರಷ್ಟಾಗಿತ್ತು. ಪ್ರತಿ ವರ್ಷದಂತೆ ಬಾಲಕಿಯರು (ಶೇ. 88.70) ಬಾಲಕರಿಗಿಂತ (ಶೇ. 83.65) ಉತ್ತಮ ಸಾಧನೆ ಪ್ರದರ್ಶಿಸಿದ್ದಾರೆ. ಇನ್ನೂ ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ (ಶೇ. 85.95) ಗ್ರಾಮೀಣ ಭಾಗದ ವಿದ್ಯಾರ್ಥಿಗಳು (ಶೇ. 87.62) ಕಲಿಕೆ ಮುಂದುವರಿದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಏಪ್ರಿಲ್ 30ರಿಂದ ಮೇ 13ರವರೆಗೆ ನಡೆಸಲು ಮಂಡಳಿ ನಿರ್ಧರಿಸಿದ್ದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
-
PUC Result 2026: ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟ -
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
2nd PUC Result: ದ್ವಿತೀಯ ಪಿಯು ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟ: ನೋಡುವುದು ಹೇಗೆ? -
ದ್ವಿತೀಯ PUC ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಪಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
ನಿಮ್ಮ ದ್ವಿತೀಯ PUC ಅಂಕಗಳ ಬಗ್ಗೆ ಅಸಮಾಧಾನವೇ? ಮರುಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
PUC ಕಾಮರ್ಸ್ ಪಾಸ್ ಆದ ವಿದ್ಯಾರ್ಥಿಗಳಿಗೆ ಮುಂದೇನು? ಕೈತುಂಬಾ ಸಂಬಳ ತರುವ ಬೆಸ್ಟ್ ಕೋರ್ಸ್ಗಳ ವಿವರ ಇಲ್ಲಿದೆ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
PUC ಕಲಾ ವಿಭಾಗದಲ್ಲಿ ಪಾಸ್ ಆದವರಿಗೆ ಮುಂದೇನು? ಇಲ್ಲಿವೆ ಭವಿಷ್ಯ ರೂಪಿಸುವ ಬೆಸ್ಟ್ ಕೋರ್ಸ್ಗಳು -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ













Click it and Unblock the Notifications