ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು.

ದ್ವಿತೀಯ ಪಿಯು ಫಲಿತಾಂಶ: ಸ್ಪಂದನಾ ಮೈಸೂರು ಜಿಲ್ಲೆಗೆ ಪ್ರಥಮದ್ವಿತೀಯ ಪಿಯು ಫಲಿತಾಂಶ: ಸ್ಪಂದನಾ ಮೈಸೂರು ಜಿಲ್ಲೆಗೆ ಪ್ರಥಮ

Karnataka 2nd PUC Supplementary Result 2020 Announced

Recommended Video

Rain Alert : ರಾಜ್ಯದಂತ ಭಾರಿ ಮಳೆ ಸಾಧ್ಯತೆ | Oneindia Kannada

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.41.28ರಷ್ಟು ಫಲಿತಾಂಶ ಬಂದಿರುವುದಾಗಿ ತಿಳಿಸಿದೆ.
ಸೆಪ್ಟೆಂಬರ್ 7 ರಿಂದ ಪೂರಕ ಪರೀಕ್ಷೆಗಳು ನಡೆದಿದ್ದವು. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕಿತರು ಇರಲಿಲ್ಲ. ಜುಲೈ 14 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿತ್ತು.
ಸೆ. 7 ಉರ್ದು, ಸಂಸ್ಕೃತ ಪರೀಕ್ಷೆ
ಸೆ. 8 ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ
ಸೆ. 9 ತೃತೀಯ ಭಾಷೆ ಹಿಂದಿ, ಸೆ. 10 ಇಂಗ್ಲೀಷ್
ಸೆ. 11 ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಸೆ. 12 ಅರ್ಥ ಶಾಸ್ತ್ರ, ಭೌತಶಾಸ್ತ್ರ
ಸೆ. 14 ವ್ಯವಹಾರ ಅಧ್ಯಯನ, ರಸಾಯನ ಶಾಸ್ತ್ರ
ಸೆ. 15 ಕನ್ನಡ, ಸೆ. 16 ರಾಜ್ಯ ಶಾಸ್ತ್ರ ಮತ್ತು ಬೇಸಿಕ್​ ಗಣಿತಶಾಸ್ತ್ರ
ಸೆ.18 ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ
ಸೆ. 19 ಭೂಗೋಳ ಶಾಸ್ತ್ರ ಮತ್ತು ಮನಶಾಸ್ತ್ರ ಪರೀಕ್ಷೆ ನಡೆದಿತ್ತು.

English summary
Karnataka PU Board declared 2nd PUC supplementary exams results on Friday.Karnataka 2nd PUC Supplementary exams 2020 commenced on September 7, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X