ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ 2nd PUC ಪೂರಕ ಫಲಿತಾಂಶ ಪ್ರಕಟ: ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

|
Google Oneindia Kannada News

ಬೆಂಗಳೂರು, ಸೆಪ್ಟಂಬರ್ 12: ದ್ವಿತೀಯ ಪರೀಕ್ಷೆಯ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗದೆ. ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು karresults.nic.in ವೆಬ್ ಸೈಟ್‌ ನಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ.

ಕರ್ನಾಟಕ 2 ನೇ ಪಿಯುಸಿ ಪೂರಕ ಪರೀಕ್ಷೆಯು ಕಳೆದ ತಿಂಗಳು ಆಗಸ್ಟ್ 12 ರಿಂದ 25ರವರೆಗೆ ನಡೆದಿತ್ತು.185415. ವಿದ್ಯಾರ್ಥಿಗಳು ನೋಂದಣಿ ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳು 175,905 ವಿದ್ಯಾರ್ಥಿಗಳು. ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 65,233, ಪರೀಕ್ಷೆಯಲ್ಲಿ ಗೈರಾದ ವಿದ್ಯಾರ್ಥಿಗಳ ಸಂಖ್ಯೆ 9,510, ಶೇಕಡವಾರು ಫಲಿತಾಂಶ 37.08ರಷ್ಟು ಬಂದಿದೆ.

ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ, ಇಲಾಖೆ ಅಧಿಕೃತ ವೆಬ್‌ಸೈಟ್ (karresults.nic.in) ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ನಾಗೇಶ್ ತಿಳಿಸಿದ್ದಾರೆ. ಆನ್‌ಲೈನ್‌ ಮೂಲಕ ಹೇಗೆ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ನೋಡಬೇಕು ಎಂಬುದನ್ನು ಇಲ್ಲಿ ಪರಿಶೀಲಿಸಬಹುದು.

Karnataka 2nd PUC Supplementary Result 2022 released, How to Check

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 2022 ಏಪ್ರಿಲ್‌ನಲ್ಲಿ ಉತ್ತೀರ್ಣರಾಗಲು ವಿಫಲರಾದ ಅಥವಾ ಯಾವುದೇ ವಿಷಯದಲ್ಲಿ ಅಂಕಗಳನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪೂರಕ ಪರೀಕ್ಷೆ ವೇಳೆ ಬರೆಯಬಹುದು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಮತ್ತು ಒಟ್ಟಾರೆಯಾಗಿ ಕನಿಷ್ಠ 35 ಪ್ರತಿಶತ ಗಳಿಸಿರುವುದು ಕಡ್ಡಾಯವಾಗಿದೆ.

Karnataka 2nd PUC Supplementary Result 2022 released, How to Check

ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ವೆಬ್‌ಸೈಟ್ karresults.nic.in, pue.karnataka.gov.in ಅಥವಾ pue.kar.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೀಡಬಹುದು. ಮೊದಲು ವೆಬ್‌ಸೈಟ್‌ಗೆ ಭೇಟಿ ನೀಡಿ. ನಂತರ ನೋಂದಣಿ ಸಂಖ್ಯೆ, ಹುಟ್ಟಿದ ದಿನಾಂಕ ಮತ್ತು ವಿಷಯ ಸಂಯೋಜನೆ ವಿವರಗಳನ್ನು ನಿಗದಿತ ಸ್ಥಳದಲ್ಲಿ ಹಾಕಬೇಕು. ಅಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶವು ಎಂದು ತೋರಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಬಹದು. ಜತೆಗೆ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಲು ಸಹ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

English summary
Karnataka 2nd PUC Supplementary Result 2022 released, How to Check. 37.8 percent students have passed. Students can get the result at karresults.nic.in website, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X