Karnataka 2nd PUC supplementary result ಪೂರಕ ಫಲಿತಾಂಶ ಸೋಮವಾರ ಪ್ರಕಟ: ಪರಿಶೀಲಿಸುವುದು ಹೇಗೆ?
ಬೆಂಗಳೂರು, ಸೆಪ್ಟಂಬರ್ 11: ಸೋಮವಾರ ಸೆಪ್ಟಂಬರ್ 12ರಂದು ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11ಗಂಟೆ ನಂತರ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಫಲಿತಾಂಶ ಪರಿಶೀಲಿಸಬಹುದು.
ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದ್ದು, ಇಲಾಖೆ ಅಧಿಕೃತ ವೆಬ್‌ಸೈಟ್ (karresults.nic.in) ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ನಾಗೇಶ್ ತಿಳಿಸಿದ್ದಾರೆ. ಆನ್‌ಲೈನ್ ಮೂಲಕ ಹೇಗೆ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ನೋಡಬೇಕು ಎಂದಬುದನ್ನು ಇಲ್ಲಿ ಪರಿಶೀಲಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ಅಥವಾ ಯಾವುದೇ ವಿಷಯದಲ್ಲಿ ಅಂಕಗಳನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪೂರಕ ಪರೀಕ್ಷೆ ವೇಳೆ ಬರೆಯಬಹುದು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಮತ್ತು ಒಟ್ಟಾರೆಯಾಗಿ ಕನಿಷ್ಠ 35 ಪ್ರತಿಶತ ಗಳಿಸಿರುವುದು ಕಡ್ಡಾಯವಾಗಿದೆ.

ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ವೆಬ್‌ಸೈಟ್ karresults.nic.in, pue.karnataka.gov.in ಅಥವಾ pue.kar.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೀಡಬಹುದು. ಮೊದಲು ವೆಬ್‌ಸೈಟ್‌ಗೆ ಭೇಟಿ ನೀಡಿ. ನಂತರ ನೋಂದಣಿ ಸಂಖ್ಯೆ, ಹುಟ್ಟಿದ ದಿನಾಂಕ ಮತ್ತು ವಿಷಯ ಸಂಯೋಜನೆ ವಿವರಗಳನ್ನು ನಿಗದಿತ ಸ್ಥಳದಲ್ಲಿ ಹಾಕಬೇಕು. ಅಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶವು ಎಂದು ತೋರಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು. ಜತೆಗೆ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಲು ಸಹ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ 2ನೇ ಪಿಯುಸಿ ಪೂರಕ ಪರೀಕ್ಷೆಯು ಕಳೆದ ತಿಂಗಳೂ ಆಗಸ್ಟ್ 12 ರಿಂದ 25ರವರೆಗೆ ನಡೆದಿತ್ತು. 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.












Click it and Unblock the Notifications