5 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ : ಯಾರಿಗೆ ಎಷ್ಟು ಮತಗಳು?
ಬೆಂಗಳೂರು, ನವೆಂಬರ್ 06 : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಒಂದು ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದ್ದು, ಉಳಿದ ನಾಲ್ಕು ಸ್ಥಾನ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಪಾಲಾಗಿದೆ.
ಮಂಗಳವಾರ ಐದೂ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ನಡೆಯಿತು. ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಜಯಗಳಿಸಿತು. ಬಳ್ಳಾರಿಯಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಬಿಜೆಪಿ ನಾಯಕರಿಗೆ ನಿರಾಸೆ ಉಂಟಾಯಿತು.
ಶಿವಮೊಗ್ಗ, ಮಂಡ್ಯ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರ, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಯಿತು. ಜಮಖಂಡಿ ಕ್ಷೇತ್ರ ಕಾಂಗ್ರೆಸ್ ಮತ್ತು ರಾಮನಗರ ಕ್ಷೇತ್ರ ಜೆಡಿಎಸ್ ಪಾಲಾಯಿತು.
5 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆದ್ದವರು ಯಾರು?, ಸೋತವರು ಯಾರು?, ಯಾರು ಎಷ್ಟು ಮತ ಪಡೆದರು? ಎಂಬ ಮಾಹಿತಿ ಚಿತ್ರಗಳಲ್ಲಿ ನೋಡಿ....

ಶಿವಮೊಗ್ಗ ಲೋಕಸಭಾ ಕ್ಷೇತ್ರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಜೆಡಿಎಸ್‌ನ ಮಧು ಬಂಗಾರಪ್ಪ ಅವರನ್ನು ಸೋಲಿಸಿ, ಗೆಲುವು ಸಾಧಿಸಿದ್ದಾರೆ.
ಪಡೆದ ಮತಗಳು
* ಬಿ.ವೈ.ರಾಘವೇಂದ್ರ 543306 ಮತ
* ಮಧು ಬಂಗಾರಪ್ಪ 491158 ಮತಗಳು
* ಗೆಲುವಿನ ಅಂತರ 52148

ಬಳ್ಳಾರಿ ಲೋಕಸಭಾ ಕ್ಷೇತ್ರ
ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರು ಬಿಜೆಪಿಯ ಜೆ.ಶಾಂತ ಅವರನ್ನು ಸೋಲಿಸಿದ್ದಾರೆ.
ಪಡೆದ ಮತಗಳು
* ವಿ.ಎಸ್.ಉಗ್ರಪ್ಪ 628365
* ಜೆ. ಶಾಂತ 385204
* ಗೆಲುವಿನ ಅಂತರ 243161

ಮಂಡ್ಯ ಲೋಕಸಭಾ ಕ್ಷೇತ್ರ
ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್‌ನ ಎಲ್.ಆರ್.ಶಿವರಾಮೇಗೌಡ ಅವರು ಬಿಜೆಪಿಯ ಡಾ.ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದಾರೆ.
ಪಡೆದ ಮತಗಳು
* ಎಲ್.ಆರ್.ಶಿವರಾಮೇಗೌಡ 569347
* ಡಾ.ಸಿದ್ದರಾಮಯ್ಯ 244404
* ಗೆಲುವಿನ ಅಂತರ 324943

ಜಮಖಂಡಿ ವಿಧಾನಸಭಾ ಕ್ಷೇತ್ರ
ಬಾಗಲಕೋಟೆಯ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಆನಂದ್ ಸಿದ್ದು ನ್ಯಾಮಗೌಡ ಅವರು ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಅವರನ್ನು ಸೋಲಿಸಿದ್ದಾರೆ.
ಪಡೆದ ಮತಗಳು
* ಆನಂದ್ ನ್ಯಾಮಗೌಡ 97017
* ಶ್ರೀಕಾಂತ್ ಕುಲಕರ್ಣಿ 57537
* ಗೆಲುವಿನ ಅಂತರ 39480

ರಾಮನಗರ ವಿಧಾನಸಭಾ ಕ್ಷೇತ್ರ
ರಾಮನಗರ ವಿಧಾನಸಭಾ ಕ್ಷೇತ್ರ
ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಜಯಗಳಿಸಿದ್ದಾರೆ.
ಪಡೆದ ಮತಗಳು
* ಅನಿತಾ ಕುಮಾರಸ್ವಾಮಿ 125043
* ಎಲ್.ಚಂದ್ರಶೇರ್ 15906
* ಗೆಲುವಿನ ಅಂತರ 109137












Click it and Unblock the Notifications