ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು, ಮತದಾನ ಆರಂಭ

ಬೆಂಗಳೂರು, ಡಿ.27: ರಾಜ್ಯದಲ್ಲಿ ಸೋಮವಾರ (ಡಿ.27) ಚುನಾವಣೆಯ ಅಬ್ಬರ ಇದ್ದು, 58 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭವಾಗಿದೆ.
2016ನೇ ಸಾಲಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲಾದ 51 ನಗರ ಸ್ಥಳೀಯ ಸಂಸ್ಥೆಗಳ ಅವಧಿಯು 2021ಗೆ ಮುಕ್ತಾಯಗೊಳ್ಳಲಿದೆ. ಕ್ಷೇತ್ರ ವಿಂಗಡನೆ ಮಾಡಿ, ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಚುನಾವಣೆ ನಡೆಸಲಾಗುತ್ತಿದೆ. ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ಪಾಲನೆ ಮಾಡಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.

ಬೆಳಗ್ಗೆ 7ಕ್ಕೆ ಮತದಾನ ಆರಂಭವಾಗಿದ್ದು, ಸಂಜೆ 5ರರೆಗೂ ನಡೆಯುತ್ತದೆ. ಒಂದು ವೇಳೆ ಮರು ಮತದಾನದ ಅಗತ್ಯ ಇದ್ದಲ್ಲಿ ಡಿ.29ಕ್ಕೆ ನಿಗದಿ ಮಾಡಲಾಗಿದೆ. ಮತ ಎಣಿಕೆ ಕಾರ್ಯ ಡಿಸೆಂಬರ್ 30ರಂದು ನಡೆಯಲಿದೆ ಎಂದು ಚುನಾವಣಾ ಆಯೋಗದ ತಿಳಿಸಿದೆ.

Karnataka 58 Urban Local Body Elections: Voting started on monday

ಬೆಂಗಳೂರಿನಿಂದ ಗ್ರಾಮಗಳಿಗೆ ತೆರಳಿದ ಮತದಾರರು:

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಂದು ಮತವೂ ಸಹ ಮಹತ್ವ ಪಡೆಯುತ್ತದೆ. ಹೀಗಾಗಿ ವಿವಿಧೆಡೆ ವಲಸೆ ಹೋದವರನ್ನು ಚುನಾವಣೆಯ ಕಾರಣಕ್ಕಾಗಿ ಅಭ್ಯರ್ಥಿಗಳು ಮರಳಿ ಊರಿಗೆ ಕರೆತರುತ್ತಾರೆ. ಈ ಕಾರಣದಿಂದ ಎಲ್ಲೆಲ್ಲಿ ಚುನಾವಣೆ ನಡೆಯುತ್ತದೋ ಅಲ್ಲಿನ ಬಹುತೇಕ ಮತದಾರರು ಭಾನುವಾರ ರಾತ್ರಿ ಬೆಂಗಳೂರಿನಿಂದ ಹೊರಟಿದ್ದಾರೆ. ಈ ಕಾರಣದಿಂದಾಗಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಭಾನುವಾರ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದವು. 700-800 ರೂ. ಇದ್ದ ಟಿಕೆಟ್ ದರವನ್ನು ಕೆಲ ಖಾಸಗಿ ಬಸ್‌ಗಳು 1300 ರೂ.ವರೆಗೆ ಹೆಚ್ಚಿಸಿದ್ದವು.

Karnataka 58 Urban Local Body Elections: Voting started on monday

ಎಲ್ಲೆಡೆ ಚುನಾವಣೆಯ ಅಬ್ಬರ:

ಚಿಕ್ಕಮಗಳೂರು, ತುಮಕೂರು ಜಿಲ್ಲೆಯ ಶಿರಾ, ಗದಗ-ಬೆಟಗೇರಿ ಹಾಗೂ ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆಗಳಿಗೆ ಚುನಾವಣೆ ನಡೆಯುತ್ತದೆ. ಬೆಳಗಾವಿ ಜಿಲ್ಲೆಯ ಅಥಣಿ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ಹಾಗೂ ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಸೇರಿ 209 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದೆ.

ಇದಲ್ಲದೆ ವಿವಿಧ ಕಾರಣಗಳಿಂದ ತೆರವಾಗಿರುವ ಚಾಮರಾಜನಗರ ಸಭೆಯ 6, ಹರಿಹರ ನಗರಸಭೆಯ 21, ದಾಂಡೇಲಿ ನಗರಸಭೆಯ 18, ಗೌರಿಬಿದನೂರು ನಗರಸಭೆಯ 10, ಮೂಡಲಗಿ ಪುರಸಭೆಯ 9, ಚಡಚಣ ಪಟ್ಟಣ ಪಂಚಾಯಿತಿಯ 4, ಸೇಡಂ ಪುರಸಭೆಯ 13, ಹಾನಗಲ್ ಪುರಸಭೆಯ 19 ಹಾಗೂ ಜಮಖಂಡಿ ನಗರಸಭೆಯ 9 ಸ್ಥಾನಗಳಿಗೂ ಚುನಾವಣೆ ನಡೆಯುತ್ತಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಸೇರಿ 1185 ವಾರ್ಡ್‌ಗಳಿಗೆ ಮತದಾನ ಆರಂಭವಾಗಿದೆ. ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಸಿಪಿಐ (ಎಂ), ಎಸ್‌ಡಿಪಿಐ, ಅಮ್ ಆದ್ಮಿ ಪಕ್ಷ, ಕೆ.ಆರ್.ಎಸ್. ಸಹಿತ ಹಲವು ಪಕ್ಷಗಳು ಹಾಗೂ ಪಕ್ಷೇತರರು ಸೇರಿ 4,961 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+