ವಜುಭಾಯಿ ವಾಲಾರಿಂದ ಗಣರಾಜ್ಯೋತ್ಸವಕ್ಕೆ ಚಾಲನೆ
68ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ಮಾಡಿದರು.
ಬೆಂಗಳೂರು, ಜನವರಿ 26: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗುರುವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ಮಾಡಿ 68ನೇ ಗಣರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದರು.
ನಂತರ ನೆರೆದಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಿದ ವಜುಭಾಯಿ ವಾಲಾ, ಕರ್ನಾಟಕದ ಜನರು ರಾಜ್ಯದ ಅಭಿವೃದ್ಧಿಗೆ ಅನುಕೂಲಕರ ವಾತಾವರಣ ನಿರ್ಮಿಸಿದ್ದಾರೆ.ರಾಜ್ಯ ಸರ್ಕಾರದ ಹಲವು ಯೋಜನೆಗಳು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿವೆ ಎಂದರು.[ಗ್ಯಾಲರಿ: ದೇಶದೆಲ್ಲೆಡೆ 68ನೇ ಗಣತಂತ್ರ ಸಂಭ್ರಮ]













Click it and Unblock the Notifications