Karnataka 7th Pay Commission; ಸರ್ಕಾರಿ ನೌಕರರಿಗೆ ಹೊಸ ಮಾಹಿತಿ
ಬೆಂಗಳೂರು, ಮೇ 05; ಕರ್ನಾಟಕ ಸರ್ಕಾರ ಸುಧಾಕರ್ ರಾವ್ ಅಧ್ಯಕ್ಷತೆಯ ಕರ್ನಾಟಕ ರಾಜ್ಯ 7ನೇ ವೇತನ ಆಯೋಗ ರಚನೆ ಮಾಡಿದೆ. 7ನೇ ರಾಜ್ಯ ವೇತನ ಆಯೋಗ ತನ್ನ ಪರಿಶೀಲನಾ ಅಂಶಗಳ ಹಿನ್ನಲೆಯಲ್ಲಿ ಪ್ರಶ್ನಾವಳಿ ಕುರಿತು ಸಭೆಯನ್ನು ಆಯೋಜನೆ ಮಾಡಿದೆ.
ಸಭೆಯ ಕುರಿತು ಪ್ರಕಣೆಯನ್ನು ಹೊರಡಿಸಲಾಗಿದೆ. 7ನೇ ಕರ್ನಾಟಕ ರಾಜ್ಯ ವೇತನ ಆಯೋಗದ ಸಂಬಂಧ ಪ್ರವಳಿಗಳ ಬಗ್ಗೆ ಸಭೆಯನ್ನು ಆಯೋಚಿಸುವ ಕುರಿತು ಎಂದು ಪ್ರಕಟಣೆಯಲ್ಲಿ ವಿಷಯವನ್ನು ಪ್ರಸ್ತಾಪಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 7ನೇ ಕರ್ನಾಟಕ ರಾಜ್ಯ ವೇತನ ಆಯೋಗದ ಸಂಬಂಧ ಪ್ರಶ್ನಾವಳಿಗಳ ಬಗ್ಗೆ, ಸಭೆಯನ್ನು ದಿನಾಂಕ 5/5/2023ರಂದು ಮಧ್ಯಾಹ್ನ 3.30 ಗಂಟೆಗೆ ಆಯೋಜನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಈ ಸಭೆ ಕೊಠಡಿ ಸಂಖ್ಯೆ 253, 2ನೇ ಗೇಟ್, 2ನೇ ಹಂತ, ಬಹುಮಹಡಿ ಕಟ್ಟಡ ಇಲ್ಲಿ ಆಯೋಜಿಸಲಾಗಿದೆ. ಸದರಿ ಸಭೆಗೆ 7ನೇ ಕರ್ನಾಟಕ ರಾಜ್ಯ ವೇತನ ಪರಿಷ್ಕರಣೆ ಸಂಬಂಧ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಲು ಕೋರಿದೆ ಎಂದು ಮಾಹಿತಿ ನೀಡಲಾಗಿದೆ.

ಮಧ್ಯಂತರ ವರದಿ ಬರಲಿಲ್ಲ; ಸರ್ಕಾರ ರಾಜ್ಯ 7ನೇ ವೇತನ ಆಯೋಗ ರಚನೆ ಮಾಡಿದಾಗಲೇ ಸರ್ಕಾರಿ ನೌಕರರು ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆದ್ದರಿಂದ ಮಧ್ಯಂತರ ವರದಿ ನೀಡಬೇಕು ಎಂದು ಒತ್ತಾಯಿಸಿದ್ದರು. ಆದರೆ ರಾಜ್ಯ ಬಜೆಟ್ ಮಂಡನೆಯಾಗಿ, ಮಾರ್ಚ್ 29ರಂದು ಚುನಾವಣಾ ವೇಳಾಪಟ್ಟಿ ಪ್ರಕಟವಾಯಿತು. ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿತು.
7ನೇ ರಾಜ್ಯ ವೇತನ ಆಯೋಗ ತನ್ನ ಪರಿಶೀಲನಾ ಅಂಶಗಳ ಹಿನ್ನಲೆಯಲ್ಲಿ ಪ್ರಶ್ನಾವಳಿಯನ್ನು ಹಿಂದೆ ಬಿಡುಗಡೆ ಮಾಡಿತ್ತು. ಸರ್ಕಾರಿ ನೌಕರರು, ಜನರು ಈ ಪ್ರಶ್ನಾವಳಿಗಳಿಗೆ ಉತ್ತರಗಳನ್ನು ನೀಡಲು ಸಹ ಅವಕಾಶ ನೀಡಿತ್ತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಗದ ಪ್ರಶ್ನಾವಳಿಗೆ ಉತ್ತರವನ್ನು ಸಲ್ಲಿಕೆ ಮಾಡಿತ್ತು.
ವೇತನ ಏರಿಕೆ, ವಿವಿಧ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಕೇಂದ್ರ ಸರ್ಕಾರದ ಮಾದರಿಯಲ್ಲಿ ಮನೆ ಬಾಡಿಗೆ ಭತ್ಯೆ ಸೇರಿದಂತೆ ಹಲವಾರು ಅಂಶಗಳ ಬಗ್ಗೆ ಆಯೋಗ ಪ್ರಶ್ನಾವಳಿಯಲ್ಲಿ ವಿವರಗಳನ್ನು ಸಂಗ್ರಹ ಮಾಡಿತ್ತು. ಆಯೋಗ ಸರ್ಕಾರಕ್ಕೆ ಈ ಉತ್ತರಗಳ ಆಧಾರದ ಮೇಲೆ ಶಿಫಾರಸುಗಳನ್ನು ಮಾಡಲಿದೆ.
ರಾಜ್ಯದ ಸರ್ಕಾರಿ ನೌಕರರು 7ನೇ ವೇತನ ಆಯೋಗದ ಮಧ್ಯಂತರ ವರದಿ ಬಾರದ ಕಾರಣ, ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 1ರಂದು ಮುಷ್ಕರ ಆರಂಭಿಸಿದರು. ಆಗ ಸರ್ಕಾರ ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನವನ್ನು ಘೋಷಣೆ ಮಾಡಿತು.
ಈ ವೇತನ ಹೆಚ್ಚಳದ ಆದೇಶದಲ್ಲಿ ಸರ್ಕಾರ ದಿನಾಂಕ 19/11/2022ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ ಎಂದು ಹೇಳಿತ್ತು.
ಅಲ್ಲದೇ ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ ಎಂದು ತಿಳಿಸಿತ್ತು.












Click it and Unblock the Notifications