ಎಂಟು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಸೆಪ್ಟೆಂಬರ್ 29 : ಕರ್ನಾಟಕ ಸರ್ಕಾರ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸರ್ವಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕರಾಗಿದ್ದ ಪಿ.ಸಿ.ಜಾಫರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಗುರುವಾರ ಸಂಜೆ ಕರ್ನಾಟಕ ಸರ್ಕಾರ ಎಂಟು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಕರ್ನಾಟಕ ಗೃಹ ಮಂಡಳಿ ಕಾರ್ಯದರ್ಶಿಯಾಗಿದ್ದ ಎಂ.ಬಿ.ರಾಜೇಶ್ ಗೌಡ ಕೆಎಎಸ್ (ಹಿರಿಯ ಶ್ರೇಣಿ) ಅವರನ್ನು ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳು
* ವಿ.ಅನ್ಬುಕುಮಾರ್ - ವ್ಯವಸ್ಥಾಪಕ ನಿರ್ದೇಶಕರು, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ
* ಎನ್.ವಿ.ಪ್ರಸಾದ್ - ಆಯುಕ್ತರು, ಹಿಂದುಳಿದ ಅಭಿವೃದ್ಧಿ ಇಲಾಖೆ
* ಟಿ.ಎಂ.ರೇಜು - ಯೋಜನಾ ನಿರ್ದೇಶಕರು, ಸರ್ವ ಶಿಕ್ಷಣ ಅಭಿಯಾನ
* ಜಿ.ಎನ್.ಶಿವಮೂರ್ತಿ - ಆಯುಕ್ತರು, ಕರ್ನಾಟಕ ಗೃಹ ಮಂಡಳಿ
* ಮನೀಶ್ ಮೌದ್ಗಿಲ್ - ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)
* ಎ.ಬಿ.ಇಬ್ರಾಹಿಂ - ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ












Click it and Unblock the Notifications