ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ರೇಕಿಂಗ್ ನ್ಯೂಸ್: ಬೆಳ್ಳಂಬೆಳಗ್ಗೆ 9 ಭ್ರಷ್ಟರ ಮನೆಗಳ ಮೇಲೆ ಎಸಿಬಿ ದಾಳಿ

|
Google Oneindia Kannada News

ಬೆಂಗಳೂರು, ಜು. 15: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ದಿಢೀರನೇ ಎಸಿಬಿ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧ ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಶೋಧ ಕಾರ್ಯದಲ್ಲಿ ಚಿನ್ನ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು, ಉಡುಪಿ, ಮಂಡ್ಯ, ಬೆಂಗಳೂರು ಸೇರಿದಂತೆ 30ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ಮಂಗಳೂರಿನ ನಗರ ಅಭಿವೃದ್ಧಿ ಘಟಕದ ಇಂಜಿನಿಯರ್ ಜಿ. ಶ್ರೀಧರ್, ಉಡುಪಿಯ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಇಂಜಿನಿಯರ್ ಕೃಷ್ಣ, ಕೆಆರ್ ಡಿಎಲ್ ಅಧಿಕಾರಿ ಆರ್. ಪಿ ಕುಲಕರ್ಣಿ, ಕೋಲಾರದ ಮಾಲೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಾಯಕ ನಿರ್ದೇಶಕ ಎಚ್‌.ಆರ್. ಕೃಷ್ಣಪ್ಪ, ಮಂಡ್ಯದ ಅರಣ್ಯ ಅಧಿಕಾರಿ ವೆಂಕಟೇಶ್, ವಿಜಯಪುರ ಹೆಸ್ಕಾಂ ಇಂಜಿನಿಯರ್ ಸಿದ್ಧರಾಮ ಮಲ್ಲಿಕಾರ್ಜುನ್, ಕೋರಮಂಗಲ ಆರ್‌ಟಿಓ ಅಧಿಕಾರಿ ಕೃಷ್ಣಮೂರ್ತಿ, ಬಳ್ಳಾರಿ ಎಲೆಕ್ರಿಕಲ್ ಇಂಜಿನಿಯರ್ ವಿಜಯ್ ಕುಮಾರ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

Karnataka ACB conducts raids against 9 Officials

Recommended Video

ಇಂಗ್ಲೆಂಡ್ ಟೂರ್ ಯಿಂದ ರಿಷಬ್ ಹೊರಗುಳಿತಾರ ! | Oneindia Kannada

ಗುರುವಾರ ದಾಳಿಗೆ ಒಳಗಾಗಿರುವ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಭ್ರಷ್ಟಾಚಾರ ನಿಯಂತ್ರಣ ಅಧಿಕಾರಿಗಳು ಸಂಗ್ರಹಿಸಿದ ಸೋರ್ಸ್ ವರದಿ ವೇಳೆಯೂ ಆರೋಪಕ್ಕೆ ಪೂರಕ ದಾಖಲೆಗಳು ಸಿಕ್ಕಿದ್ದವು. ಈ ಹಿನ್ನೆಲೆ ರಾಜ್ಯದೆಲ್ಲೆಡೆ ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಎಸಿಬಿ ಅಧಿಕಾರಿಗಳು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಕೊರೊನಾವೈರಸ್ ಲಾಕ್ ಡೌನ್ ಹಿನ್ನೆಲೆ ಸುಮ್ಮನಾಗಿದ್ದ ಎಸಿಬಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ಇದೀಗ ಭ್ರಷ್ಟರಿಗೆ ಶಾಕ್ ನೀಡಿದ್ದಾರೆ.

English summary
Anti Corruption Buaro officials Raid in Karnataka: ACB officials raid the residence of 9 corrupt officials across the State know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X