ನಗರದ ಬಡ ಕುಟುಂಬಗಳಿಗೆ ಹೆಚ್ಚುವರಿ ಸಿಲಿಂಡರ್
ಬೆಂಗಳೂರು, ಜುಲೈ, 20: ನಗರದ ಬಡ ಕುಟುಂಬಗಳ ಗೃಹಿಣಿಯರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದೆ. ನಗರ ವ್ಯಾಪ್ತಿಯ ಬಡ ಕುಟುಂಬಗಳಿಗೆ ಉಚಿತವಾಗಿ ಹೆಚ್ಚುವರಿ ಎಲ್ ಪಿಜಿ ಸಿಲಿಂಡರ್ ಒದಗಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ.
ಹೆಚ್ಚುವರಿ ಸಿಲಿಂಡರ್ ನೀಡಿಕೆ ಸಂಬಂಧ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ ಸೀಮೆಎಣ್ಣೆ ನೀಡುವುದನ್ನು ನಿಲ್ಲಿಸಿದ ಮೇಲೆ ಕುಟುಂಬಗಳು ತೀವ್ರ ಸಮಸ್ಯೆಗೆ ಒಳಗಾಗಿದ್ದವು. ಅದರ ಪರಿಹಾರಕ್ಕೆ ಇಂಥ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.[ಶಾಶ್ವತ ಅಂಗವೈಕಲ್ಯ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್]

ಮುಕ್ತ ಮಾರುಕಟ್ಟೆಯಲ್ಲಿ ಸೀಮೆಎಣ್ಣೆ ಲಭ್ಯವಾಗುವಂತೆ ಮಾಡುವ ಯೋಚನೆಯೂ ಸರ್ಕಾರದ ಮುಂದಿದೆ ಎಂದು ಸಚಿವರು ತಿಳಿಸಿದ್ದಾರೆ.[ತೊಗರಿ ಬೇಳೆ ದಾಸ್ತಾನಿಗೆ ಸರ್ಕಾರದ ಕಡಿವಾಣ]
ಶಾಶ್ವತ ಅಂಗವೈಕಲ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದರು. ಕುಷ್ಠರೋಗ, ಅಂಗವೈಕಲ್ಯ, ಕುರುಡು, ಕಿವುಡು, ಬುದ್ಧಿಮಾಂದ್ಯತೆಯಂಥಹ ಸಮಸ್ಯೆ ಹೊಂದಿರುವವರಿಗೆ ಬಿಪಿಎಲ್ ಪಡಿತರ ಚೀಟಿ ನೀಡಲಾಗುವುದು ಎಂದು ಸಚಿವರು ಹೇಳಿದ್ದರು.












Click it and Unblock the Notifications