Karnataka: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟರು; ಇವರೂ ರಾಜೀನಾಮೆ ಕೊಡಲಿ ಎಂದ ಆರ್. ಅಶೋಕ್

Karnataka: ಕೇಂದ್ರದಲ್ಲಿ NEET ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಆಡಳಿತಾತ್ಮಕ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಟ್ಟಿದ್ದಾರೆ. ಹಾಗಾದರೆ ಕರ್ನಾಟಕದಲ್ಲಿ ನಡೆದ ಗಂಭೀರ ಘಟನೆಗಳಿಗೆ ನೈತಿಕ ಮತ್ತು ಆಡಳಿತಾತ್ಮಕ ಹೊಣೆ ಯಾರು ಹೊರುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಆರ್. ಅಶೋಕ್ ಅವರು, KPSC ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಒಂದು ಹುದ್ದೆಗೆ ₹80 ಲಕ್ಷ ಡೀಲ್ ನಡೆದಿರುವ ಆರೋಪದ ಆಡಿಯೋ ಬಹಿರಂಗವಾಗಿದೆ. ಈ ಆರೋಪಗಳ ಕುರಿತು ಸಮಗ್ರ, ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ಯಾವಾಗ? ಇದರ ಹೊಣೆ ಯಾರು ಹೊರುತ್ತಾರೆ? ಯಾರು ರಾಜೀನಾಮೆ ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಮುಂದುವರಿದು ಐಪಿಎಲ್ ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ 11 ಅಮಾಯಕ ಜೀವಗಳು ಬಲಿಯಾದವು. ಆ ದುರಂತಕ್ಕೆ ನೈತಿಕ ಮತ್ತು ಆಡಳಿತಾತ್ಮಕ ಹೊಣೆ ಯಾರು ಹೊರುತ್ತಾರೆ, ನೊಂದ ಕುಟುಂಬಗಳಿಗೆ ಸಂಪೂರ್ಣ ನ್ಯಾಯ ಯಾವಾಗ ದೊರೆಯುತ್ತದೆ? ಇದರ ಹೊಣೆ ಯಾರು ಹೊರುತ್ತಾರೆ, ಯಾರ ರಾಜೀನಾಮೆ ನೀಡುತ್ತಾರೆ ಎಂದಿದ್ದಾರೆ.

Karnataka

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ ಮೂರು ವರ್ಷಗಳಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲಾರದೆ ನೂರಾರು ಬಡವ ಸಾಲಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇದಕ್ಕೆಲ್ಲ ಯಾರು ಹೊಣೆ, ಯಾರು ರಾಜೀನಾಮೆ ಕೊಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಎಂದರೆ ಕೇವಲ ಹುದ್ದೆಯಲ್ಲ; ಅದರೊಂದಿಗೆ ಜವಾಬ್ದಾರಿಯೂ ಇರುತ್ತದೆ. ತಪ್ಪುಗಳು ನಡೆದಾಗ ಅಧಿಕಾರಿಗಳ ಮೇಲೆ ಗೂಬೆ ಕೂರಿಸದೆ, ನಾಮಕಾವಸ್ತೆ ತನಿಖೆಗಳ ಹೆಸರಿನಲ್ಲಿ ತಪ್ಪಿಸಿಕೊಳ್ಳದೆ ಉತ್ತರದಾಯಿತ್ವ ಸ್ವೀಕರಿಸಬೇಕು. ಪ್ರತಿಯೊಂದು ಪ್ರಕರಣದಲ್ಲೂ ಸತ್ಯ ಹೊರಬರಬೇಕು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗಬೇಕು ಹಾಗೂ ಜನರ ವಿಶ್ವಾಸವನ್ನು ಮರುಸ್ಥಾಪಿಸುವ ಕಾರ್ಯ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ರೈಲ್ವೆ ಅಭಿವೃದ್ಧಿಗೆ ಮಹತ್ವದ ಕೊಡುಗೆ

ಕೇಂದ್ರ ಸಚಿವ ಸಂಪುಟವು ₹1,264 ಕೋಟಿ ವೆಚ್ಚದ ಬಳ್ಳಾರಿ-ಗುಂಟಕಲ್ 3ನೇ ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡಿರುವುದು ಕರ್ನಾಟಕದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ. 2028-29ರ ವೇಳೆಗೆ 46 ಕಿ.ಮೀ. ಹೊಸ ರೈಲು ಮಾರ್ಗ ನಿರ್ಮಾಣವಾಗಲಿದ್ದು, 99 ಹಳ್ಳಿಗಳಿಗೆ ಸಂಪರ್ಕ, 7 ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲ ಹಾಗೂ ವಾರ್ಷಿಕ 16.22 MTPA ಸರಕು ಸಾಗಣೆ ಸಾಮರ್ಥ್ಯ ಹೆಚ್ಚಳಕ್ಕೆ ಕಾರಣವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ, ಕರ್ನಾಟಕದ ಅಭಿವೃದ್ಧಿಗೆ ನಿರಂತರವಾಗಿ ಬದ್ಧವಾಗಿದೆ ಎಂಬುದಕ್ಕೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿ ಎಂದೂ ಅವರು ಹೇಳಿದ್ದಾರೆ.

ಎಸ್‌ಐಆರ್ ಬಗ್ಗೆ ಆರ್. ಅಶೋಕ್ ಹೇಳಿದ್ದೇನು

ದೋಷರಹಿತ ಮತದಾರರ ಪಟ್ಟಿಯೇ ಸದೃಢ ಪ್ರಜಾಪ್ರಭುತ್ವದ ಭದ್ರ ಅಡಿಪಾಯ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ. 'SIR ಮಹಾಸಂಪರ್ಕ ಅಭಿಯಾನ'ದ ಎರಡನೇ ದಿನವೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಜಾಗೃತಿ ಮೂಡಿಸಿ, ಅರ್ಹ ಮತದಾರರಿಗೆ Enumeration Form ಭರ್ತಿ ಮಾಡಲು ನೆರವು ನೀಡುವ ಕಾರ್ಯವನ್ನು ಮುಂದುವರಿಸಲಾಗಿದೆ ಎಂದಿದ್ದಾರೆ.

ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ನಿಖರವಾಗಿ ದಾಖಲಾಗುವಂತೆ ಮಾಡುವ ಮೂಲಕ ಈ ಅಭಿಯಾನದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸೋಣ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+