ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿ ಭೇಟಿ ಮಾಡಿದ ರಾಜ್ಯದ ಸರ್ವಪಕ್ಷ ನಿಯೋಗ

|
Google Oneindia Kannada News

ನವದೆಹಲಿ, ಆಗಸ್ಟ್.24: ಕಳಸಾ ಬಂಡೂರಿ, ಮಹದಾಯಿ ಯೋಜನೆ ಕುರಿತಂತೆ ರಾಜ್ಯದ ಸರ್ವಪಕ್ಷ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಯೋಜನೆಗಳ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ, ಮಹಾರಾಷ್ಟ್ರ ನಾಯಕರನ್ನು ಕರೆತನ್ನಿ. ಮೂರು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದರೆ ಅಂತಿಮ ತೀರ್ಮಾನಕ್ಕೆ ಬರಬಹುದು ಎಂದು ಪ್ರಧಾನಿ ಸರ್ವಪಕ್ಷ ನಿಯೋಗಕ್ಕೆ ತಿಳಿಸಿದರು.

ಜನರಿಗೆ ಅನುಕೂಲ ಮಾಡಿವ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರ ಸಿದ್ಧವಿದ್ದು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಮೇಕೆದಾಟು ಯೋಜನೆಯನ್ನು ಅನುಷ್ಠಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದರು.[ಕಳಸಾ-ಬಂಡೂರಿ: ಸೆಪ್ಟೆಂಬರ್ 26 ಕರ್ನಾಟಕ ಬಂದ್]

karnataka

ಪ್ರಧಾನಿ ಮೋದಿ ರಾಜ್ಯದ ನಾಯಕರ ಅಹವಾಲು ಸ್ವೀಕರಿಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೇ ಸಮಸ್ಯೆ ಪರಿಹಾರೋಪಾಯದ ಬಗ್ಗೆಯೂ ಸಲಹೆ ನೀಡಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ, ಬಿಜೆಪಿ ಮುಖಂಡ ಅನಂತ ಕುಮಾರ್ ಹೇಳಿದ್ದಾರೆ. ಪ್ರಧಾನಿ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಭೇಟಿ ನಿರಾಶಾದಾಯಕವಾಗಿದೆ ಎಂದು ಜೆಡಿಎಸ್ ಮುಖಂಡ ಹೊರಟ್ಟಿ ತಿಳಿಸಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಎಚ್.ಡಿ ರೇವಣ್ಣ, ಶ್ರೀನಿವಾಸ್ ಪ್ರಸಾದ್ ಮತ್ತು ಮಠಾಧೀಶರು ನಿಯೋಗದಲ್ಲಿದ್ದರು.

English summary
An all-party delegation led by Karnataka Chief Minister Siddaramaiah met Prime Minister Narendra Modi on Monday for a drinking water canal project in the state's northern region.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X