ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಿಂದ ಕರ್ನಾಟಕಕ್ಕೆ ಬರಲು ಮಾರ್ಗಸೂಚಿ

|
Google Oneindia Kannada News

ಬೆಂಗಳೂರು, ಜನವರಿ 06; ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಸಹ ಸೋಂಕು ಹೆಚ್ಚಾಗುತ್ತಿದ್ದು, ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ಬರಲು ಮಾರ್ಗಸೂಚಿ ಪ್ರಕಟಿಸಲಾಗಿದೆ.

ಕರ್ನಾಟಕ ಸರ್ಕಾರ ಕೋವಿಡ್ ಹರಡುವಿಕೆ ತಡೆಯಲು ಹಲವಾರು ನಿರ್ಬಂಧಗಳನ್ನು ಘೋಷಣೆ ಮಾಡಿದೆ. ಸರ್ಕಾರದ ಹೊಸ ಮಾರ್ಗಸೂಚಿ ಬುಧವಾರ ರಾತ್ರಿ 10 ಗಂಟೆಯಿಂದ ಜಾರಿಗೆ ಬಂದಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವಾರಾಂತ್ಯ ಕರ್ಫ್ಯೂ ಸಹ ಜಾರಿಗೆ ಬರುತ್ತಿದೆ.

ವೀಕೆಂಡ್ ಕರ್ಫ್ಯೂ; ಕೆಎಸ್ಆರ್‌ಟಿಸಿ ಬಸ್ ಸಂಚಾರ ಮಾರ್ಗಸೂಚಿ ವೀಕೆಂಡ್ ಕರ್ಫ್ಯೂ; ಕೆಎಸ್ಆರ್‌ಟಿಸಿ ಬಸ್ ಸಂಚಾರ ಮಾರ್ಗಸೂಚಿ

ಗೋವಾದಿಂದ ಕರ್ನಾಟಕಕ್ಕೆ ಆಗಮಿಸುವವರ ಮೇಲೆ ಸಹ ಸರ್ಕಾರ ನಿಗಾವಹಿಸಿದೆ. ಗೋವಾ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣಾ ಚಟುವಟಿಕೆಗಳು ಎಂದು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಹೋಮ್ ಐಸೋಲೇಷನ್ ಮಾರ್ಗಸೂಚಿ ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಹೋಮ್ ಐಸೋಲೇಷನ್ ಮಾರ್ಗಸೂಚಿ

Karnataka Announces Special Surveillance Measures For Arrivals From Goa

ಮಾರ್ಗಸೂಚಿಗಳು

* ವಿಮಾನ, ರೈಲು, ರಸ್ತೆ (ಬಸ್ & ಸ್ವಂತ ವಾಹನಗಳ ಮೂಲಕ) ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದುವುದು ಕಡ್ಡಾಯ. ಗೋವಾದಿಂದ ಕನೆಕ್ಟಿಂಗ್ ಫ್ಲೈಟ್ ಮೂಲಕ ಆಗಮಿಸುವವರಿಗೂ ಇದು ಅನ್ವಯ.

ಕೋವಿಡ್; ವಿಧಾನಸೌಧ ಉದ್ಯೋಗಿಗಳಿಗೆ ಮಾರ್ಗಸೂಚಿ ಕೋವಿಡ್; ವಿಧಾನಸೌಧ ಉದ್ಯೋಗಿಗಳಿಗೆ ಮಾರ್ಗಸೂಚಿ

* 72 ಗಂಟೆಗಳ ಒಳಗಿನ ಆರ್‌ಟಿಪಿಸಿಆರ್ ವರದಿಯನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರ ವಿಮಾನಯಾನ ಸಂಸ್ಥೆಗಳು ಬೋರ್ಡಿಂಗ್ ಪಾಸ್ ನೀಡಬೇಕು.

* ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳುವುದು ರೈಲ್ವೆ ಪ್ರಾಧಿಕಾರದ ಜವಾಬ್ದಾರಿಯಾಗಿದೆ.

* ಬಸ್ ಮೂಲಕ ಪ್ರಯಾಣಿಸುವವರು ಆರ್‌ಟಿಪಿಸಿಆರ್ ನೆಗೆಟಿವ್ ಟೆಸ್ಟ್ ವರದಿಯನ್ನು ಹೊಂದುವುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಆಯಾ ಬಸ್ ನಿರ್ವಾಹಕರದ್ದು.

* ಗೋವಾ ರಾಜ್ಯಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಾದ ಬೆಳಗಾವಿ ಹಾಗೂ ಉತ್ತರ ಕನ್ನಡದ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳಿಗೆ (ಚಾಲಕರು/ ಸಹಾಯಕರು/ ಪ್ರಯಾಣಿಕರು) ತಪಾಸಣೆ ನಡೆಸಲು ಚೆಕ್ ಪೋಸ್ಟ್ ಸ್ಥಾಪನೆ ಮಾಡುವುದು. ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಿ ಸೂಕ್ತ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದು.

* ಶಾಲಾ-ಕಾಲೇಜು, ಕಚೇರಿ ಕೆಲಸ, ವ್ಯಾಪಾರ ಸೇರಿದಂತೆ ಇತರ ಕಾರಣಗಳಿಗೆ ಪ್ರತಿದಿನ ಗೋವಾ ಮತ್ತು ಕರ್ನಾಟಕ ನಡುವೆ ಸಂಚಾರ ನಡೆಸುವವರು 15 ದಿನಕ್ಕೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಾಗಿದೆ.

ಯಾರಿಗೆ ವಿನಾಯಿತಿ ಇದೆ

* ಸಾಂವಿಧಾನಿಕ ಕಾರ್ಯಕಾರಿಗಳು ಮತ್ತು ವೈದ್ಯ/ ವೈದ್ಯಕೀಯ ಸಿಬ್ಬಂದಿಗಳು

* 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು

* ತುರ್ತು ಸಂದರ್ಭಗಳಲ್ಲಿ (ಕುಟುಂಬದಲ್ಲಿ ಮರಣ, ವೈದ್ಯಕೀಯ ಚಿಕಿತ್ಸೆ ಇತ್ಯಾದಿ) ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಮಾದರಿಗಳನ್ನು ಕರ್ನಾಟಕದಲ್ಲಿ ಪರೀಕ್ಷೆಗಾಗಿ ಸಂಗ್ರಹ ಮಾಡಲಾಗುತ್ತದೆ.

* ಸದರಿ ಪ್ರಯಾಣಿಕರು ಹೆಸರು, ವಿಳಾಸ, ಸಂಪರ್ಕ ಸಂಖ್ಯೆ ಇತ್ಯಾದಿ ಪೂರ್ಣ ವಿವರಗಳನ್ನು ಗುರುತಿನ ಚೀಟಿ ಅನ್ವಯ ಪಡೆಯಬೇಕು. ಆರ್‌ಟಿಪಿಸಿಆರ್ ಪರೀಕ್ಷೆಯ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಿಷ್ಟಾಚಾರದಂತೆ ಕ್ರಮ ಕೈಗೊಳ್ಳಬೇಕು.

ಗೋವಾ ಸರ್ಕಾರ ಹೊಸ ವರ್ಷಾಚರಣೆಗೆ ಅನುಮತಿ ನೀಡಿತ್ತು. ಬಳಿಕ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ವಿವಿಧ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.

ಕರ್ನಾಟಕದಲ್ಲಿ ಕಠಿಣ ನಿಯಮಗಳು; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದ್ದರು. ರಾಜ್ಯದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ರಾಜ್ಯದಲ್ಲಿ ಜಾರಿಯಲ್ಲಿರುವ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ವಾರಾಂತ್ಯದ ಕರ್ಫ್ಯೂ ಜಾರಿಯಾಗಲಿದೆ. ಗುರುವಾರದಿಂದ ಬೆಂಗಳೂರಿನಲ್ಲಿ ಶಾಲೆಗಳ ಭೌತಿಕ ತರಗತಿ ಬಂದ್ ಆಗಿದೆ.

ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ. ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 4246 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 17,414 ಆಗಿದೆ.

Recommended Video

ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಸಲ್ಲಾ - ಸಿದ್ದು | Oneindia Kannada

English summary
Due to rise in new Covid cases Karnataka government announced special surveillance measures for people who will come to state from Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X