Breaking: ಮತಾಂತರ ನಿಷೇಧ ಕಾಯ್ದೆ ವಿಧಾನ ಪರಿಷತ್ತಿನಲ್ಲಿ ಧ್ವನಿಮತ ಮೂಲಕ ಅಂಗೀಕಾರ

ಬೆಂಗಳೂರು, ಸೆಪ್ಟೆಂಬರ್ 15: ಮತಾಂತರ ನಿಷೇಧ ಕಾಯ್ದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿನಲ್ಲಿ ಮಂಡನೆಯನ್ನು ಮಾಡಿ ಅಂಗೀಕಾರವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೇ 12, 2022 ರಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಸಮ್ಮತಿಸಲು ಅನುಮೋದನೆ ನೀಡಿತ್ತು. ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಅಂಗೀಕಾರವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು.

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆಯನ್ನು ನೀಡಿದ್ದರು. ಆದರೂ ಸದನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತೀರ್ಮಾನಿಸಿತ್ತು. ಅದರಂತೆ ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ಕಾಯ್ದೆ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯು ಅಂಗೀಕಾರವಾಗಿದೆ.

ಬಿಜೆಪಿಗೆ ವಿಧಾನ ಪರಿಷತ್ತಿನಲ್ಲಿ ಬಹುಮತವನ್ನು ಹೊಂದಿರುವುದರಿಂದ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಬಿಜೆಪಿ ಸರ್ಕಾರ ಸನ್ನದ್ದವಾಗಿತ್ತು. ಇದೀಗ ಮೇಲ್ಮನೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ.

ಮೇಲ್ಮನೆಯಲ್ಲಿ ಮತಾಂತರ ನಿಷೇಧ ಬಿಲ್‌ ಪಾಸ್

ಮೇಲ್ಮನೆಯಲ್ಲಿ ಮತಾಂತರ ನಿಷೇಧ ಬಿಲ್‌ ಪಾಸ್

ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಗುರಿಯಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನ ಜಾರಿಗೆ ತರುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಲ್ ಮೇಲ್ಮನೆಯಲ್ಲಿ ಚರ್ಚೆಗೂ ಬಾರದ ಬಿಲ್ ಅನ್ನ ಸುಗ್ರೀವಾಜ್ಞೆ ಮೂಲಕ ಜಾರಿಗೆ ಅನುಮೋದನೆಯನ್ನು ನೀಡಿತ್ತು. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತಾಂತರ ನಿಷೇಧ ಕಾಯ್ದೆಗೆ ಅಂಗೀಕಾರವನ್ನು ನೀಡಿದ್ದರು. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರಕ್ಕೆ ಕಾರಣವಾಗಿತ್ತು. ಬಿಜೆಪಿ ಮೇಲ್ಮನೆಯಲ್ಲೂ ಬಹುಮತವನ್ನು ಹೊಂದಿರುವುದರಿಂದ ಮತಾಂತರ ನಿಷೇಧ ಬಿಲ್‌ ಅನ್ನು ಮಂಡಿಸಿ ಅಂಗೀಕಾರವನ್ನು ಪಡೆಯಿತು. ಇದೀಗ ಬಿಲ್‌ ಅಧಿಕೃತವಾಗಿ ಜಾರಿಯಾಗಲಿದೆ.

ಮತಾಂತರ ನಿಷೇಧ ಕಾಯ್ದೆ ಏನು ಹೇಳುತ್ತೆ?

ಮತಾಂತರ ನಿಷೇಧ ಕಾಯ್ದೆ ಏನು ಹೇಳುತ್ತೆ?

*ಬಲವಂತ, ವಂಚನೆ, ಒತ್ತಾಯ,ಆಮಿಷದ ಮದುವೆಗೆ ನಿಷೇಧ

*ಬಲವಂತದ ಮತಾಂತರಕ್ಕೆ 3 ರಿಂದ 5 ವರ್ಷ ಜೈಲು,25 ಸಾವಿರ ದಂಡ

*ಅಪ್ರಾಪ್ತರು,ದಲಿತರ ಮತಾಂತರಕ್ಕೆ 3 ರಿಂದ 10 ವರ್ಷ ಶಿಕ್ಷೆ,50 ಸಾವಿರ ದಂಡ

*ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ 5 ಲಕ್ಷ ಪರಿಹಾರ

*ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ದಂಡ

*ಮತಾಂತರದ ಉದ್ದೇಶದಿಂದ ಆದ ವಿವಾಹ ಅನೂರ್ಜಿತ

*ಮತಾಂತರ ಅಪರಾಧ ಜಾಮೀನು ರಹಿತವಾಗಿರಲಿದೆ

* ಮತಾಂತರಕ್ಕೂ ಅವಕಾಶವಿದೆ,30 ದಿನ ಮೊದಲೇ ಡಿಸಿಗೆ ತಿಳಿಸಬೇಕು

* ಮತಾಂತರಗೊಂಡ ವ್ಯಕ್ತಿ 20 ದಿನದೊಳಗೆ ಡಿಸಿ ಮುಂದೆ ಹಾಜರಾಗಬೇಕು

ಮತಾಂತರಕ್ಕಿರುವ ನಿಯಮಗಳೇನು?

ಮತಾಂತರಕ್ಕಿರುವ ನಿಯಮಗಳೇನು?

*ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಅರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆೆ ತಿಳಿಸಬೇಕು.

*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆೆ ಜಿಲ್ಲಾಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆೆ ಮಾಹಿತಿ ಕೊಡಬೇಕು.

* ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆೆ30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.

*ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

*ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.

*ಅಪರಾಧಕ್ಕೆೆ ನೆರವು ಹಾಗೂ ಪ್ರೇರಣೆ ನೀಡಿದ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.

*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಮಾಹಿತಿ ಕೊಡಬೇಕು.

*ವಿಚಾರಣೆಯ ಸಂದರ್ಭದಲ್ಲಿ ತಪ್ಪುು ಕಂಡುಬಂದಲ್ಲಿ ಜಿಲ್ಲಾಾ ದಂಡಾಧಿಕಾರಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

ಮುಂಗಾರು ಅಧಿವೇಶನದಲ್ಲಿ ಮೇಲ್ಮನೆಯಲ್ಲಿ ಬಿಲ್ ಪಾಸ್

ಮುಂಗಾರು ಅಧಿವೇಶನದಲ್ಲಿ ಮೇಲ್ಮನೆಯಲ್ಲಿ ಬಿಲ್ ಪಾಸ್

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಧಾರ್ಮಿಕ ಸ್ವಾತಂತ್ರ್ಯ ರಕ್ಷಣೆ ಹೆಸರಿನಲ್ಲಿ ವಿಧೇಯಕವನ್ನ ಮಂಡಿಸಲಾಗಿತ್ತು. ಪ್ರತಿಪಕ್ಷ ಕಾಂಗ್ರೆಸ್ ತೀರ್ವ ವಿರೋಧದ ನಡುವೆಯೂ ಕೆಳಮನೆಯಲ್ಲಿ ಬಿಲ್ ಪಾಸಾಗಿತ್ತು. ಮೇಲ್ಮನೆಯಲ್ಲೂ ಮಂಡನೆಗೆ ಪ್ರಯತ್ನ ನಡೆಸಲಾಯ್ತು, ಆದರೆ ಬಹುಮತದ ಕೊರೆತೆಯಿಂದಾಗಿ ಸರ್ಕಾರ ಮಂಡನೆಯನ್ನೇ ಮಾಡಲಿಲ್ಲ. ಆನಂತರ ಬೆಂಗಳೂರಿನಲ್ಲಿ ನಡೆದ ಜಂಟಿ‌ ಅಧಿವೇಶನದಲ್ಲಿ ಮಂಡನೆ ಮಾಡಿದರು ಚರ್ಚೆಗೆ ಕೈಗೆತ್ತಿಕೊಳ್ಳಲಿಲ್ಲ. ಲಖನ್ ಜಾರಕಿಹೊಳಿ ಸೇರಿ ನಾಲ್ವರು ಸದಸ್ಯರು ಗೈರಾಗಿದ್ದರಿಂದ ಮತ್ತೆ ನೆನೆಗುದಿಗೆ ಬಿದ್ದಿತ್ತು. ಕಾಯ್ದೆ ಜಾರಿಗೆ ಆರ್‌ಎಸ್‌ಎಸ್‌ನಿಂದ ನಿರಂತರ ಒತ್ತಡ ಬಂದಿದ್ದರಿಂದ ಸಂಪುಟ ಸಭೆಯಲ್ಲಿ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಮತಾಂತರ ನಿಷೇದ ಕಾಯ್ದೆ ಜಾರಿ ಅನುಮೋದನೆಯನ್ನು ನೀಡಿತ್ತು. ಸರ್ಕಾರ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಬೇಕಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ತರತುರಿಯಲ್ಲಿ ಸುಗ್ರಿವಾಜ್ಞೆಯ ಮೂಲಕ ಅಂಗೀಕರಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲ ತಾವರ್ ಚೆಂದ್ ಗೆಹ್ಲೋಟ್ ಮತಾಂತರ ನಿಷೇಧಕ್ಕೆ ಅನುಮೋಧನೆಯನ್ನು ನೀಡಿದ್ದರು. ಆದರೂ ಈ ವಿಚಾರದಲ್ಲಿ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಮೇಲ್ಮನೆಯಲ್ಲಿ ಬಹುಮತ ಪಡೆದ ಬಳಿಕ ಬಿಜೆಪಿ ಸರ್ಕಾರ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿನಲ್ಲಿ ಬಿಲ್ ಮಂಡಿಸಿ ಪಾಸ್‌ ಮಾಡಲು ಯಶಸ್ವಿಯಾಗಿದ್ದರೆ. ಆ ಮೂಲಕ ಕರ್ನಾಟಕದಲ್ಲಿ ಮತಾಂತರ ನಿಷೇಧಕ್ಕೆ ಅಧಿಕೃತ ಮುದ್ರೆ ಬಿದ್ದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+