ರಾಜ್ಯದ 12 ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ
New Superintendents of Police: ರಾಜ್ಯ ಸರ್ಕಾರ ಹೊಸ ವರ್ಷದ ಹಿಂದಿನ ದಿನ ಡಿಸೆಂಬರ್ 31, 2025ರಂದು ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡಿದೆ. 12 ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ ಮಾಡಿದೆ ಆದೇಶ ಹೊರಡಿಸಿದೆ. ಹಾಗಾದ್ರೆ, ಯಾರು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆಗಾಗ ರಾಜ್ಯ ಸರ್ಕಾರ ಇಂತಹ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಆದರೆ, ಹೊಸ ವರ್ಷದ ಹಿಂದಿನ ದಿನವೇ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವುದೇ ಇದೀಗ ಅಚ್ಚರಿಯ ವಿಚಾರವಾಗಿದೆ. ಅದೇನೇ ಇರಲಿ ಇದೀಗ ಹೊಸದಾಗಿ ಯಾವೆಲ್ಲಾ ಜಿಲ್ಲೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾವೆಲ್ಲಾ ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ?
* ಬೆಂಗಳೂರು ಗ್ರಾಮಾಂತರ - ಚಂದ್ರಕಾಂತ್ ಎಂ.ವಿ
* ಬೆಳಗಾವಿ - ಕೆ. ರಾಮರಾಜನ್
* ಶಿವಮೊಗ್ಗ - ಬಿ ನಿಖಿಲ್
* ರಾಯಚೂರು - ಅರುಣಾಂಶು ಗಿರಿ
* ಹಾಸನ - ಶುಭನ್ವಿತಾ
* ಚಿಕ್ಕಮಗಳೂರು - ಜಿತೇಂದ್ರ ಕುಮಾರ್ ದಯಾಮ್
* ಕೋಲಾರ - ಕನ್ನಿಕಾ ಸಿಕ್ರಿವಾಲ್
* ಕೊಡಗು - ಬಿಂದು ಮಣಿ
* ಮಂಡ್ಯ - ಶೋಭಾ ರಾಣಿ
* ಚಾಮರಾಜನಗರ - ಮುತ್ತುರಾಜು ಎಂ
* ಬಳ್ಳಾರಿ - ಪವನ್ ನೆಜ್ಜೂರ್
* ಮೈಸೂರು - ಮಲ್ಲಿಕಾರ್ಜುನ ಬಾಲದಂಡಿ
ಕೊನೆಗೂ ಸಿಕ್ಕೇಬಿಡ್ತು ಮುಂಬಡ್ತಿ: ರಾಜ್ಯ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಎಡಿಜಿಪಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಇತ್ತೀಚೆಗಷ್ಟೇ ಆದೇಶ ಹೊರಡಿಸಿತ್ತು. ಜೊತೆಗೆ ಮೂರು ಮಂದಿ ಐಎಎಸ್ ಅಧಿಕಾರಿಗನ್ನು ಸಹ ವರ್ಗಾವಣೆ ಮಾಡಿತ್ತು.
ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಕ ಮಾಡಲಾಗಿದೆ. ಅಲೋಕ್ ಕುಮಾರ್ ಅವರು ತಮ್ಮನ್ನು ಕಡೆಗಣಿಸಿ ಇತರರಿಗೆ ಬಡ್ತಿ ನೀಡಲಾಗುತ್ತಿದೆ ಎಂದು ಸಿಎಟಿಗೆ ಅರ್ಜಿ ಸಲ್ಲಿಲೆ ಮಾಡಿದ್ದರು. ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಪಡಿಸಿತ್ತು. ಇದರ ಬೆನ್ನಲ್ಲೇ ಅಲೋಕ್ ಕುಮಾರ್ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಇನ್ನೂ ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿದ್ದ ಬಿ.ದಯಾನಂದ್ ಅವರನ್ನು ಇದೀಗ ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದಕ್ಕೂ ಮುಂಚೆ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications