NEET: ನೀಟ್ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ರಾಜ್ಯಕ್ಕೆ ನೀಟ್ (NEET) ವ್ಯವಸ್ಥೆ ಬೇಡ ಎಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಶರಣ ಪ್ರಕಾಶ್ ಪಾಟೀಲ್ ಮಂಡಿಸಿದ್ದು, ಸದನದಲ್ಲಿ ಒಪ್ಪಿಗೆ ಸಿಕ್ಕಿದೆ ಎಂದು ಎಎನ್‌ಐ ವರದಿ ಮಾಡಿದೆ.
ಇದಕ್ಕೂ ಮೊದಲು, ಪಶ್ಚಿಮ ಬಂಗಾಳ ವಿಧಾನಸಭೆಯು ಬುಧವಾರ ನೀಟ್ (NEET) ಅನ್ನು ರದ್ದುಗೊಳಿಸಲು ಮತ್ತು ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ತರುವ ನಿರ್ಣಯವನ್ನು ಅಂಗೀಕರಿಸಿತು.

ತಮಿಳುನಾಡು ಕೂಡ ರಾಜ್ಯಕ್ಕೆ ನೀಟ್ ಬೇಡ ಎಂದು ನಿರ್ಣಯ ಅಂಗೀಕರಿಸಿದ ಬಳಿಕ, ಕಾನೂನು ಪ್ರಕಾರ ಹೋರಾಟ ನಡೆಸುತ್ತಿದೆ. ಕರ್ನಾಟಕ, ಪಶ್ಚಿಮ ಬಂಗಾಳ ಕೂಡ ಈಗ ಇದೇ ಹಾದಿ ಹಿಡಿದಿವೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ದೇಶಾದ್ಯಂತ ಭಾರಿ ಕೋಲಾಹಲ ಸೃಷ್ಟಿಸಿದ ಬಳಿಕ, ರಾಜ್ಯ ಸರ್ಕಾರ ಇದರ ವಿರುದ್ಧ ನಿರ್ಣಯ ಮಂಡಿಸಿದೆ. ನೀಟ್ ವ್ಯವಸ್ಥೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.
ನೀಟ್ ಬದಲಾಗಿ ರಾಜ್ಯದ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ರಾಜ್ಯದ್ದೇ ಆದ ಪರೀಕ್ಷಾ ವ್ಯವಸ್ಥೆಯನ್ನು ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೊದಲು ರಾಜ್ಯದಲ್ಲಿ ಸಿಇಟಿ ಮುಖಾಂತರ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದರು.












Click it and Unblock the Notifications