"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್
ಬೆಂಗಳೂರು: ಸಭಾಧ್ಯಕ್ಷ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಆರಂಭವಾದ ವಿಧಾನಸಭೆ ಅಧಿವೇಶನವು ತೀವ್ರ ಗದ್ದಲ ಹಾಗೂ ಗೊಂದಲಕ್ಕೆ ಸಾಕ್ಷಿಯಾಗಿದ್ದು, ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಂಬಂಧಪಟ್ಟ ಸಚಿವರಿಂದ ಸಮರ್ಪಕವಾದ ಉತ್ತರ ಸಿಗದ ಹಿನ್ನೆಲೆಯಲ್ಲಿ ಸದನದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಈ ಬೆಳವಣಿಗೆಯಿಂದಾಗಿ ಸಭಾಧ್ಯಕ್ಷರು ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಿದ್ದು, ಇದು ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.
ಪ್ರತಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತ ವೈಫಲ್ಯ ಮತ್ತು ಸಚಿವರ ನಿರ್ಲಕ್ಷ್ಯವೇ ಈ ಎಲ್ಲಾ ಗೊಂದಲಗಳಿಗೆ ಕಾರಣ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ, ಸ್ವತಃ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರು ಅಸಹಾಯಕರಾಗಿ ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಬೇಕಾಯಿತು. ಇದಕ್ಕೆ ಕಾರಣ?
@INCKarnataka ಸರ್ಕಾರದ ಸಚಿವರ ಅಹಂಕಾರ ಮತ್ತು ಬೇಜವಾಬ್ದಾರಿ.
ಶಾಸಕರು ಕೇಳಿದ ಪ್ರಶ್ನೆಗಳಿಗೆ ಕನಿಷ್ಠ ಲಿಖಿತ ಉತ್ತರ ನೀಡಲೂ ಯೋಗ್ಯತೆ ಇಲ್ಲದ ಈ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ?
ಕರ್ನಾಟಕದ ವಿಧಾನಸಭೆಯಲ್ಲಿ ಇಂದು ನಡೆದ ಘಟನೆ ಕೇವಲ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಜನಾದೇಶಕ್ಕೆ ಮಾಡಿದ ಘೋರ ಅಪಚಾರ.
ದೆಹಲಿಯಲ್ಲಿ "ಸಂವಿಧಾನ ಉಳಿಸಿ" ಎಂದು ಬೊಬ್ಬೆ ಹೊಡೆಯುವ @RahulGandhi ಅವರೇ, ಕರ್ನಾಟಕದಲ್ಲಿ ನಿಮ್ಮದೇ @INCKarnataka ಪಕ್ಷದ ಸಚಿವರು ವಿಧಾನಸಭೆಯ ಘನತೆಯನ್ನು ಕುಗ್ಗಿಸುತ್ತಿರುವುದು ನಿಮಗೆ ಕಾಣಿಸುತ್ತಿಲ್ಲವೇ?
ಶಾಸಕರ ಪ್ರಶ್ನೆಗಳಿಗೆ ಉತ್ತರಿಸುವ ಸೌಜನ್ಯ, ವ್ಯವಧಾನ ಇಲ್ಲದ ಅಸಮರ್ಥ ಮತ್ತು ಬೇಜವಾಬ್ದಾರಿ ಸಚಿವರು ಸಿದ್ದರಾಮಯ್ಯನವರ ಸಂಪುಟದಲ್ಲಿ ಇದ್ದಾರೆ. ಇದು ಕೇವಲ ಆಡಳಿತಾತ್ಮಕ ವೈಫಲ್ಯವಲ್ಲ. ಇದು ಸಿಎಂ
@siddaramaiah ನವರಿಗೆ ಸಚಿವರ ಮೇಲೆ, ಅಧಿಕಾರಶಾಹಿ ಮೇಲೆ, ರಾಜ್ಯದ ಆಡಳಿತದ ಮೇಲೆ ಹಿಡಿತ ತಪ್ಪಿರುವುದಕ್ಕೆ ಸಾಕ್ಷಿ. ಸಚಿವರು, ಅಧಿಕಾರಿಗಳು ಶಾಸಕಾಂಗವನ್ನೇ ನಿರ್ಲಕ್ಷಿಸುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದರ್ಥ.
ಚುನಾಯಿತ ಜನಪ್ರತಿನಿಧಿಗಳಾದ ಶಾಸಕರ ಪ್ರಶ್ನೆ ಕೇಳುವ ಧ್ವನಿಯನ್ನು ಅಡಗಿಸುವುದು, ಸದನಕ್ಕೆ ಗೌರವ ನೀಡದಿರುವುದು - ಇದೇನಾ ಕಾಂಗ್ರೆಸ್ ಪಕ್ಷದ "ಕರ್ನಾಟಕ ಮಾಡೆಲ್'?
ಸಂವಿಧಾನದ ಬಗ್ಗೆ ಪಾಠ ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖವಾಡ ಇವತ್ತು ಕರ್ನಾಟಕದಲ್ಲಿ ಕಳಚಿ ಬಿದ್ದಿದೆ.
ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!
— R. Ashoka (@RAshokaBJP) March 16, 2026
ಇತಿಹಾಸದಲ್ಲೇ ಮೊದಲ ಬಾರಿಗೆ, ಸ್ವತಃ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರು ಅಸಹಾಯಕರಾಗಿ ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಬೇಕಾಯಿತು. ಇದಕ್ಕೆ ಕಾರಣ? @INCKarnataka ಸರ್ಕಾರದ ಸಚಿವರ ಅಹಂಕಾರ ಮತ್ತು ಬೇಜವಾಬ್ದಾರಿ.
ಶಾಸಕರು… pic.twitter.com/u1jfvxMl1l












Click it and Unblock the Notifications