2018ರ ಚುನಾವಣೆ : 3 ಕ್ಷೇತ್ರಕ್ಕೆ ಎಎಪಿ ಅಭ್ಯರ್ಥಿಗಳು ಘೋಷಣೆ
ಬೆಂಗಳೂರು, ಡಿಸೆಂಬರ್ 22 : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಮೂರು ಕ್ಷೇತ್ರಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್ ಗುಪ್ತ, 'ರಾಜ್ಯದಲ್ಲಿ ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗಿವೆ. ಮುಂದಿನ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಎಎಪಿ ತಯಾರಿ ನಡೆಸಿದೆ' ಎಂದು ಹೇಳಿದರು.
'ರಾಷ್ಟ್ರೀಯ ಪಕ್ಷಗಳು ಜನರ ಸಮಸ್ಯೆ ಬಿಟ್ಟು ಮಂದಿರ, ಮಸೀದಿ, ಜಾತಿ, ಧರ್ಮ, ಪಾಕಿಸ್ತಾನದ ಹೆಸರಿನಲ್ಲಿ ಒಡಕು ಮೂಡಿಸಿ ಪ್ರಚಾರ ನಡೆಸುತ್ತಿವೆ. ಗುಜರಾತ್‌ನಲ್ಲಿ ಬಿಜೆಪಿಗೆ ಗೆದ್ದಿದೆ, ಪ್ರಜಾಪ್ರಭುತ್ವ ಸೋತಿದೆ' ಎಂದು ಆರೋಪಿಸಿದರು.

ಎಎಪಿ ಅಭ್ಯರ್ಥಿಗಳ ಪಟ್ಟಿ
* ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಏರೋನಾಟಿಕಲ್ ಇಂಜಿನಿಯರ್ ಸಂತೋಷ ನರಗುಂದ ಸ್ಪರ್ಧೆ ಮಾಡಲಿದ್ದಾರೆ. ಕ್ಷೇತ್ರದ ಹಾಲಿ ಶಾಸಕರು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್.
* ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದಿಂದ ಯೋಜನಾ ತಜ್ಞ ಅಶ್ವಿನ್ ಮಹೇಶ್ ಸ್ಪರ್ಧಿಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಲೋಕಸತ್ತಾ ಪಕ್ಷದ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು 11,200 ಮತ ಪಡೆದಿದ್ದರು. ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಸತೀಶ್ ರೆಡ್ಡಿ.
* ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದಿಂದ ಗ್ರಾಮ ಪಂಚಾಯಿತಿ ಸದಸ್ಯ, ಉದ್ಯಮಿ ಲಿಂಗರಾಜ್ ಅರಸ್ ಸ್ಪರ್ಧಿಸಲಿದ್ದಾರೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಬೈರತಿ ಬಸವರಾಜ್.












Click it and Unblock the Notifications