BabuRao Chinchanasur: ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರಿದ ಬಾಬೂರಾವ್ ಚಿಂಚನಸೂರು
ಹೈದರಾಬಾದ್-ಕರ್ನಾಟಕ ಭಾಗದ ಕೋಲಿ ಸಮಾಜಕ್ಕೆ ಸೇರಿದ ಪ್ರಭಾವಿ ನಾಯಕ ಬಾಬೂರಾವ್ ಚಿಂಚನಸೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನನಿತ್ಯ ಬೆಳವಣಿಗೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಹಾಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಾಬೂರಾವ್ ಚಿಂಚನಸೂರ್ ಅವರು ಬಿಜೆಪಿ ಬಿಟ್ಟು ಕೈ ಹಿಡಿದಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ. ಬಿಜೆಪಿ ಎಂಎಲ್ ಸಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಅವರು ಮರಳಿ ಮಾತೃ ಪಕ್ಷಕ್ಕೆ ಸೇರಿದ್ದಾರೆ.
ಈ ಬಗ್ಗೆ ಚಿಂಚನಸೂರ್ ಅವರು ಕೆಪಿಸಿಸಿ ಅಧ್ಯಕ್ಷರು, ಗುರುಮಠಕಲ್ ಹಾಗೂ ಚಿತ್ತಾಪುರ ಕೋಳಿ ಸಮಾಜದ ಮುಖಂಡರ ಮೂಲಕ ಕೈ ನಾಯಕರ ವರಿಷ್ಠರ ಜೊತೆ ಮಾತುಕತೆ ನಡೆದಿತ್ತು. ಈ ವೇಳೆ ಪಕ್ಷ ಸೇರ್ಪಡೆಗೆ ಪ್ರಿಯಾಂಕ್ ಖರ್ಗೆ ಗ್ರೀನ್ ಸಿಗ್ನಲ್ ಕೂಡ ನೀಡಿದ್ದರು.

ಬಿಜೆಪಿಯಲ್ಲಿ ಕಡೆಗಣನೆ ಹಿನ್ನೆಲೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಇತ್ತ ಚಿಂಚನಸೂರ್ ಕೈ ಸೇರ್ಪಡೆಯಾಗುವುದನ್ನು ತಡೆಯಲು ಕಟೀಲ್ ಸೇರಿದಂತೆ ಹಲವು ನಾಯಕರು ಪ್ರಯತ್ನಿಸುತ್ತಿದ್ದಾರೆ. ಆದರೆ ಚಿಂಚನಸೂರ್ ಹಾಗೂ ಅವರ ಗನ್ ಮ್ಯಾನ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರಂತೆ. ಕೈ ಸೇರಿದ ಚಿಂಚನಸೂರ್ ಅವರು ಯಾದಗಿರಿಯ ಗುರುಮಠಕಲ್ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ಇದು ಮಹತ್ವದ ಬೆಳವಣಿಗೆಯಾಗಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಾಬೂರಾವ್ ಚಿಂಚನಸೂರು ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಆದರೀಗ ಬಾಬೂರಾವ್ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಬಾಬೂರಾವ್ ಚಿಂಚನಸೂರು ಬಿಜೆಪಿ ಸೇರಿದಾಗ ಹಿರಿಯ ನಾಯಕನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು ಏಕೆ? ಎಂಬುದು ಹಲವರ ಪ್ರಶ್ನೆಯಾಗಿತ್ತು. ಇದರಿಂದ ಬಿಜೆಪಿ ಆಂತರಿಕ ವಲಯದಲ್ಲಿ ಮನಸ್ತಾಪಗಳಿದ್ದವು. ಇದೇ ಕಿಡಿ ಸದ್ಯ ಬಾಬೂರಾವ್ ಚಿಂಚನಸೂರು ಕಾಂಗ್ರೆಸ್‌ನತ್ತ ಮತ್ತೆ ಮುಖ ಮಾಡುವಂತೆ ಮಾಡಿದೆ ಎನ್ನಲಾಗುತ್ತಿದೆ.
ಕೋಲಿ ಸಮಾಜಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಹೈದರಾಬಾದ್-ಕರ್ನಾಟಕ ಭಾಗದ ಪ್ರಮುಖ ನಾಯಕರು. ಮಾಲೀಕಯ್ಯ ಗುತ್ತೇದಾರ್ ಮತ್ತು ಬಾಬೂರಾವ್ ಚಿಂಚನಸೂರು ಅವರು ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದರು.

2008, 2013ರ ಚುನಾವಣೆಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದಿದ್ದ ಬಾಬೂರಾವ್ ಚಿಂಚನಸೂರು ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು ಆಗಿದ್ದರು. ಆದರೆ, 2018ರ ಚುನಾವಣೆಯಲ್ಲಿನ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಬಾಬೂರಾವ್ ಚಿಂಚನಸೂರು ಅವರು ಆರೋಪ ಮಾಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಬಿಜೆಪಿಗೆ ಚಿಂಚನಸೂರು ಸೇರಿದ್ದೇಕೆ?
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ಮಾತನಾಡಿದ ಬಾಬೂರಾವ್ ಚಿಂಚನಸೂರು ಅವರು, 'ನನ್ನ ಆಸೆ ಎರಡೇ ಒಂದು ಗುರುಮಿಠಕಲ್ ಜನರ ಸೇವೆ ಮಾಡುವುದು, ಮತ್ತೊಂದು ನಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು' ಅದಕ್ಕಾಗಿ ಬಿಜೆಪಿ ಸೇರಿದ್ದೇನೆ' ಎಂದಿದ್ದರು. ಕೋಲಿ ಸಮುದಾಯಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು, ಬಿಜೆಪಿಗೆ ಹೇಗೆ ಸಹಾಯಕವಾಗಲಿದೆ? ಎಂಬ ಪ್ರಶ್ನೆಗೆ ಉತ್ತರ ಕಾಂಗ್ರೆಸ್ ಪ್ರಬಲ ನಾಯಕ ಮಲ್ಲಿಕಾರ್ಜುನ ಖರ್ಗೆ. ಬಾಬೂರಾವ್ ಚಿಂಚನಸೂರು ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ತಂತ್ರ ರೂಪಿಸಿತ್ತು.
ಬಾಬೂರಾವ್ ಚಿಂಚನಸೂರು
ಕೋಲಿ ಸಮಾಜಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿತ್ತು. ಈ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಎಂದು ಹೆಸರುಗಳಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ತಂತ್ರ ರೂಪಿಸಲಾಗಿತ್ತು. ಗುರುಮಿಠಕಲ್, ಚಿತ್ತಾಪುರ ಭಾಗದಲ್ಲಿ ಕೋಲಿ ಸಮುದಾಯದ ಮತಗಳು ಸಾಕಷ್ಟಿವೆ. ಅವುಗಳನ್ನು ಸೆಳೆದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಬೇಕು ಎಂಬುದು ಬಿಜೆಪಿಯ ತಂತ್ರವಾಗಿತ್ತು.
ಮಲ್ಲಿಕಾರ್ಜುನ ಖರ್ಗೆ ಅವರು 9 ಬಾರಿ ವಿಧಾನಸಭೆಗೆ ಮತ್ತು 2 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರೆ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರ ತಂದಂತೆ. ಅಲ್ಲದೇ ಕಾಂಗ್ರೆಸ್‌ನಲ್ಲಿ ರಾಷ್ಟ್ರಮಟ್ಟದ ನಾಯಕನನ್ನು ಸೋಲಿಸಿದಂತೆ ಆಗುತ್ತದೆ. ಆದ್ದರಿಂದ, ಬಾಬೂರಾವ್ ಚಿಂಚನಸೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಖರ್ಗೆ ಸೋಲಿಸಲು ಬಿಜೆಪಿ ತಂತ್ರ ರೂಪಿಸಿತ್ತು.
ಇಬ್ಬರು ಪ್ರಭಾವಿ ನಾಯಕರು ಬಿಜೆಪಿಗೆ ಅಫಜಲಪುರ ಕ್ಷೇತ್ರದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್, ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕ ಬಾಬೂರಾವ್ ಚಿಂಚನಸೂರು ಅವರು ಬಿಜೆಪಿ ಸೇರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಯಿತು. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆ ಉಂಟಾಗಿ ಅದರ ಪ್ರಭಾವ ಬೇರೆ ಜಿಲ್ಲೆಗಳ ಮೇಲೂ ಪರಿಣಾಮ ಬೀರಿತು. ಆದರೀಗ ಬಾಬೂರಾವ್ ಚಿಂಚನಸೂರು ಕಮಲ ತೊರೆದು ಕೈ ಹಿಡಿದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ











Click it and Unblock the Notifications