MB Patil Profile: ಹ್ಯಾಟ್ರಿಕ್ ವಿಜಯ ಸಾಧಿಸಿದ ಕಾಂಗ್ರೆಸ್‌ನ ಎಂ.ಬಿ.ಪಾಟೀಲರ ಜೀವನ, ಪರಿಚಯ
ವಿಜಯಪುರ, ಮಾರ್ಚ್ 29: ಕರ್ನಾಟಕ ವಿಧಾನಸಭಾ ಚುನಾವಣೆ ಬುಧವಾರ ಮಾರ್ಚ್ 29ರಂದು ಘೋಷಣೆಯಾಗಿದ್ದು, ಮೇ 10ರಂದು ಚುನಾವಣೆ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವರು ಶಾಸಕರಾದ ಎಂ.ಬಿ.ಪಾಟೀಲ್ ಅವರೇ ಕಣಕ್ಕಿಳಿಯುವುದು ನಿಶ್ಚಿತವಾಗಿದೆ.
ಕಾಂಗ್ರೆಸ್ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಎಂ.ಬಿ.ಪಾಟೀಲ್ ಅವರ ಪೂರ್ಣ ಹೆಸರು ಮಲ್ಲನಗೌಡ ಬಸವನಗೌಡ ಪಾಟೀಲ. ಉದ್ಯಮಿಗಳು ಆಗಿರುವ ಇವರು ಬಿಎಲ್‌ಇಡಿ ಸಂಸ್ಥೆಯ ಅಧ್ಯಕರಾಗಿದ್ದಾರೆ. ಇವರ ಸಂಪೂರ್ಣ ಪರಿಚಯ, ಮಾಹಿತಿ ಇಲ್ಲಿ ತಿಳಿಯೋಣ.

ಬಬಲೇಶ್ವರ ಕ್ಷೇತ್ರದಲ್ಲಿ ಪ್ರಬಲ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳನ್ನು ಎದುರಿಸುವಲ್ಲಿ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಯಶಸ್ವಿಯಾಗಿದ್ದಾರೆ. ಈ ಬಾರಿ ಅಂತದ್ದೇ ಕಸರತ್ತು ನಡೆಸುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ತಮ್ಮದಾಗಿಸಿಕೊಳ್ಳಲು, ಕ್ಷೇತ್ರದಲ್ಲಿನ ತಮ್ಮ ಹಿಡಿತ ಕೈ ತಪ್ಪದಂತೆ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.
ಅಂದಿನ ಬಿಜಾಪುರ ಇಂದಿನ ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ಅವರು ಜನಿಸಿದ ಅವರು, ಬೆಂಗಳೂರಿನ ಪೂಣಪ್ರಜ್ಞ ಶಾಲೆಯಲ್ಲಿ ಪ್ರಾಥಮಿಕ ಹಾಗೂ ವಿಜಯಪುರದ ಶಾಲೆಯಲ್ಲಿ ಪ್ರೌಢ ವಿದ್ಯಾಭ್ಯಾಸ ಮುಗಿಸಿದರು. ಉತ್ತಮ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಪಡೆದು ಬಾಲ್ಯ ಕಳೆದ ಅವರು ಮುಂದೆ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿದರು.
27ನೇ ವಯಸ್ಸಿನಲ್ಲಿ ರಾಜಕೀಯ ಪ್ರವೇಶ
ಇದಾಗಿ ಕೆಲವು ವರ್ಷಗಳ ಬಳಿಕ ಬಿ.ಎಂ.ಪಾಟೀಲರು ನಿಧನರಾಗಿ 1991ರಲ್ಲಿ ತೆರವಾದ ಸ್ಥಾನದಿಂದ ಎಂ.ಬಿ.ಪಾಟೀಲರು ಕಣಕ್ಕಿಳಿದರು. ತಮ್ಮ 27 ವಯಸ್ಸಿನಲ್ಲಿ ತಿಕೋಟಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾದರು. ಬಳಿಕ 1994ರಲ್ಲಿ ನಡೆದ ಮತ್ತದೇ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಪಾಟೀಲರು ಪರಾಭವಗೊಂಡರು. ಹೀಗೆ ಅವರ ರಾಜಕೀಯ ಜೀವ ಏರಿಳಿತದಿಂದ ಕೂಡಿತ್ತು.

1998ರಲ್ಲಿ ಅವರು ಲೋಕಸಭಾ ಸದಸ್ಯರಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದರು. ಬಳಿಕ 2004ರಲ್ಲಿ ಮತ್ತೆ ರಾಜ್ಯ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆ ಇಳಿದರು. ತಿಕೋಟಾದಿಂದ ವಿಧಾನಸಭೆ ಸದಸ್ಯರಾಗಿ ಚುನಾಯಿತರಾದರು.
ಬಬಲೇಶ್ವರ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಬಾರಿಸಿದ ಪಾಟೀಲ್
ಕೆಲವು ರಾಜಕೀಯ ಕಾರಣಗಳಿಂದ ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸಿದ ಅವರು 2008, 2013 ಮತ್ತು 2018ರಲ್ಲಿ ನಿರಂತರವಾಗಿ ಹ್ಯಾಟ್ರಿಕ್ ಬಾರಿಸಿದರು. ಅಲ್ಲಿಂದ ಮೂರು ಬಾರಿ ಶಾಸಕರಾಗಿ ಅವರು ಆಯ್ಕೆಯಾದರು. 2013ರಲ್ಲಿ ಈಗಿನವ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಅಂದು ಮುಖ್ಯಮಂತ್ರಿ ಯಾಗಿದ್ದರು. ಅವರ ಸಂಪುಟದಲ್ಲಿ ಎಂ.ಬಿ.ಪಾಟೀಲ್ ಅವರು ಜಲಸಂಪನ್ಮೂಲ ಸಚಿವರಾಗಿದ್ದರು. ಈ ಮೂಲಕ ಸಚಿವರಾಗಿಯು ಅವರು ಅನುಭವ ಪಡೆದರು.
ಅದಲ್ಲದೇ 2018ರಲ್ಲಿ ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಮೈತ್ರಿ ಸರ್ಕಾರ ರಚನೆ ಆಯಿತು. ಈ ವೇಳೆ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರು. ಅವರ ನೇತೃತ್ವದ ಸಂಪುಟದಲ್ಲಿ ಎಂ.ಬಿ.ಪಾಟೀಲ್ ಅವರು ಗೃಹ ಸಚಿವರಾಗಿ, ಎಐಸಿಸಿ, ಕೆಪಿಸಿಸಿ ಸಮನ್ವಯ ಸಮಿತಿ ಸದಸ್ಯರಾಗಿ ಸೇವೆ ನೀಡಿದರು.
ಇನ್ನೂ 1990 ರಿಂದ 2005 ರವರೆಗೆ ಬಿಎಲ್‌ಡಿಇ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹುದ್ದೆಗೆ 2005ರಿಂದ ಬಿಎಲ್ ಡಿಇ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಅವರು ಕಾರ್ಯ ನಿರ್ವಹಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಂಬಂಧ ಇತ್ತೀಚೆಗಷ್ಟೇ ಕಾಂಗ್ರೆಸ್ ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅದರಲ್ಲಿ ಎಂ.ಬಿ.ಪಾಟೀಲರು ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಚುನಾವಣೆ ದಿನಾಂಕ ಪ್ರಕಟವಾದ ನಂತರ ಬಿಜೆಪಿ ತ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೇ, ಈ ವಾರ ಬಿಜೆಪಿ ಪಟ್ಟಿ ನಿರೀಕ್ಷಿಸಲಾಗುತ್ತಿದೆ. ಈ ಸಲ ಬಿಜೆಪಿಯಿಂದ ವಿಜುಗೌಡ ಪಾಟೀಲ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್‌ನಿಂದ ಪಟ್ಟಿ ಪ್ರಕಟವಾಗಬೇಕಿದೆ.
ಬಬಲೇಶ್ವರ ವಿಧಾನ ಸಭಾ ಕ್ಷೇತ್ರ
ಒಟ್ಟು ಮತದಾರರು - 2,08,903
ಪುರುಷರು- 1,06,256
ಮಹಿಳೆಯರು - 1,02,647
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications