Karnataka Election 2023 Nominations : ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಸಂಪೂರ್ಣ ಮಾಹಿತಿ ಇಲ್ಲಿದೆ!

ಬೆಂಗಳೂರು, ಏಪ್ರಿಲ್ 12 : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು, ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಇಂದು (ಗುರುವಾರ) ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಇಂದಿನಿಂದ (ಏಪ್ರಿಲ್‌ 13) ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

Karnataka Assembly Election 2023; Nomination Will Begin From Tomorrow

ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.

ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್ 24 ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ.

ನಾಳೆ (ಗುರುವಾರ) ಅಧಿಕೃತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮತದಾನದ ಸಮಯ ಸೇರಿದಂತೆ ಇತರೆ ಪ್ರಮುಖ ವಿಷಯಗಳನ್ನು ಅಧಿಸೂಚನೆ ಒಳಗೊಂಡಿರುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಇನ್ನೂ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆ ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದ್ದು, ಚುನಾವಣೆಗೆ ಸಕಲ ರೀತಿಯಲ್ಲೂ ಸಿದ್ದತೆಯನ್ನ ನಡೆಸಿದೆ. ಏಪ್ರಿಲ್ 13ರ ಗುರುವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಘೋಷಣೆಯಾಗಲಿದೆ. ಅಲ್ಲದೇ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ನಾಮಪತ್ರ ಸ್ವೀಕಾರ ಮಾಡಲು 28 ಕೇಂದ್ರಗಳನ್ನು ತೆರೆಯಲಾಗಿದೆ.

ಗುರುವಾರ (ಏಪ್ರಿಲ್13) ಚುನಾವಣಾ ಅಧಿಸೂಚನೆ ಪ್ರಕಟವಾಗುತ್ತಿದ್ದಂತೆಯೇ ನಾಮಪತ್ರಗಳ ಸಲ್ಲಿಕೆ ಆರಂಭವಾಗಲಿದೆ. ಅಭ್ಯರ್ಥಿಗಳು ನಾಮಪತ್ರವನ್ನು ಆಯಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಲ್ಲಿಕೆ ಮಾಡಬಹುದಾಗಿದ್ದು, ಚುನಾವಣಾ ಆಯೋಗ ಸೂಚನೆಗಳನ್ನ ಪಾಲಿಸಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+