ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ನ.9ರಂದು ಕರ್ನಾಟಕ ಮತದಾರರ ಕರಡು ಪಟ್ಟಿ ಪ್ರಕಟ

|
Google Oneindia Kannada News

ಬೆಂಗಳೂರು, ನವೆಂಬರ್, 08: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 224 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಕರಡುಪಟ್ಟಿಯನ್ನು ನವೆಂಬರ್ 09ರಂದು ಬುಧವಾರ ಪ್ರಕಟಿಸಲಿದೆ.

ರಾಜ್ಯ ಚುನಾವಣಾ ಆಯೋಗವು ಬಿಡುಗಡೆ ಮಾಡಲಿರುವ ಈ ಕರಡು ಮತದಾರರು ಪಟ್ಟಿಯನ್ನು ಸಾರ್ವಜನಿಕರು ಸರ್ಕಾರದ ಅಧಿಕೃತ ವೆಬ್‌ಸೈಟ್ https://www.ceokarnataka.kar.nice.in/ ನಲ್ಲಿ ಇಲ್ಲವೇ ಜಿಲ್ಲಾಧಿಕಾರಿಗಳು ಕಚೇರಿ, ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ, ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ 2023ರ ಮೇ ತಿಂಗಳ ಆಸುಪಾಸಿಗೆ ವಿಧಾನಸಭಾ ಚುನಾವಣೆ ನಡೆಯಲಿರುವ. ಈ ಸಂಬಂಧ ಮತದಾರರ ಪಟ್ಟಿ ಅಂತಿಮಗೊಳಿಸಿರುವ ರಾಜ್ಯ ಚುನಾವಣಾ ಆಯೋಗ ಮೊದಲಿಗೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

Karnataka Assembly election 2023: Voters list draft will be released on November 9th

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ನಮೂನೆ 6, ಹೆಸರು ತೆಗೆದುಹಾಕಲು ನಮೂನೆ 7ರಲ್ಲಿ, ವಿಧಾನಸಭಾ ಕ್ಷೇತ್ರದ ಹೊರಗೆ ಮತ್ತು ಒಳಗೆ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಬದಲಾವಣೆ, ಅಸ್ಪಷ್ಟ ಭಾವಚಿತ್ರ ಇದ್ದಲ್ಲಿ ಅದನ್ನು ಬದಲಿಸು, ಅಂಗವೈಕಲ್ಯ ಹೊಂದಿರುವ ವ್ಯಕ್ತಿಯ ಗುರುತು ಮಾಡುವ ಸಲುವಾಗಿ ನಮೂನೆ- 8ರಲ್ಲಿ ಮತದಾರರು ನೋಂದಣಾಧಿಕಾರಿ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿ ಅವರಿಗೆ ಅಗತ್ಯ ದಾಖಲೆ ಸಹಿ ಅರ್ಜಿ ಸಲ್ಲಿಸಬಹುದು.

ಇಲ್ಲವೇ https://www.nvsp.in/ ಮತ್ತು ವೋಟರ್‌ ಹೆಲ್ಪ್ ಲೈನ್‌ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಿ ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದು. ಈ ಕರಡು ಮತದಾರರ ಪಟ್ಟಿ ಬಿಡುಗಡೆ ಸಂಬಂಧ ಆಯೋಗದ ಮುಖ್ಯ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಳಗ್ಗೆ 7 ಗಂಟೆಗೆ ಕಬ್ಬನ್ ಉದ್ಯಾನದಿಂದ ಕಾಲ್ನಡಿಗೆ ನಂತರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಯಲಿದೆ ಎಂದು ಆಯೋಗವು ತಿಳಿಸಿದೆ.

English summary
Karnataka Assembly election 2023: Voters list draft will be released on November 9th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X