ಬೇಲ್ ಗಾಗಿ ಡೀಲ್ ವಿಡಿಯೋಗೂ ನನಗೂ ಸಂಬಂಧವಿಲ್ಲ : ಶ್ರೀರಾಮುಲು
ಬೆಂಗಳೂರು, ಮೇ 11: ಮಾಜಿ ಸಚಿವ ಬಿ ಶ್ರೀರಾಮುಲು ಅವರು ಗಾಲಿ ರೆಡ್ಡಿ ಸೋದರರಿಗೆ ಜಾಮೀನು ಕೊಡಿಸಲು ಡೀಲ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಈ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಶ್ರೀರಾಮುಲು ಅವರು ಇಂದು ಪ್ರತಿಕ್ರಿಯಿಸಿದ್ದಾರೆ.
ಓಬಳಾಪುರಂ ಮೈನಿಂಗ್ (ಓಎಂಸಿ) ಸಂಸ್ಥೆ ಕುರಿತಂತೆ ಅಂದಿನ ಸಿಜೆಐ ಜತೆ 160 ಕೋಟಿ ಡೀಲ್ ಕುದುರಿಸಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮುಲು ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ಚುನಾವಣೆ ಸ್ಪರ್ಧಿಸದಂತೆ ತಡೆ ಹಿಡಿಯುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ಯಾರ್ಯಾರೋ ಬರ್ತಿರ್ತಾರೆ, ಮಾತನಾಡ್ತಿರ್ತಾರೆ, ಆ ವಿಚಾರಕ್ಕೂ ನನಗೂ ಸಂಬಂಧವಿಲ್ಲ ಎಂದು ಎಂದು ಸ್ಪಷ್ಟನೆ ನೀಡಿದ್ದಾರೆ.
ಮೊಳಕಾಲ್ಮೂರಿನಲ್ಲಿ 2 ಕೋಟಿ ಹಣ ಪತ್ತೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನಗೇನು ಗೊತ್ತಿಲ್ಲ ಎಂದರು. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬಾದಾಮಿಯಲ್ಲಿ ನಡೆಸಿದ ರೋಡ್ ಶೋ ನೋಡಿ ಮೆಚ್ಚಿದ್ದಾರೆ. ನಿನ್ನೆ ಸೇರಿದ ಜನಸ್ತೋಮ ನೋಡಿದರೆ ಇದು ಐತಿಹಾಸಿಕ ಕ್ಷಣ ಎಂದು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಶಕ್ತಿ ಪ್ರದರ್ಶನವಾಗಿದೆ. 140ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುತ್ತೇವೆ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.












Click it and Unblock the Notifications