ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾನ ದಿನದ ಒನ್ಇಂಡಿಯಾದಲ್ಲಿ ನೇರ ಅಪ್ಡೇಟ್ಸ್ ಪಡೆಯಿರಿ

By Mahesh
|
Google Oneindia Kannada News

ಬೆಂಗಳೂರು, ಮೇ 11: ರಾಜ್ಯದ 15ನೇ ವಿಧಾನಸಭಾ ಚುನಾವಣೆಗೆ ವಿವಿಧ ಜಿಲ್ಲೆಗಳಲ್ಲಿ ಮತದಾನ ಮಹಾಹಬ್ಬಕ್ಕೆ ಮತಗಟ್ಟೆಗಳು ಸಜ್ಜಾಗಿವೆ. ಮುಂದಿನ ಐದು ವರ್ಷಗಳ ಕಾಲ ರಾಜ್ಯದ ಆಡಳಿತ ಯಾರು ನಡೆಸಬೇಕು ಎಂದು ನಿರ್ಣಯಿಸುವ ಕಾಲ ಬಂದಿದೆ. ಈ ಸಂದರ್ಭದಲ್ಲಿ ಮತದಾನ ದಿನದ ಕ್ಷಣ ಕ್ಷಣದ ಅಪ್ಡೇಟ್ ಗಳನ್ನು ಒನ್ಇಂಡಿಯಾ ಕನ್ನಡ ತಂಡವು ನಿಮಗಾಗಿ ನೀಡಲಿದೆ.

ಐದು ವರ್ಷಗಳಿಗೊಮ್ಮೆ ಸಿಗುವ ಈ ಅವಕಾಶ ಬಳಸಿಕೊಂಡು ಪ್ರಜಾಪ್ರಭುತ್ವ ನೀಡಿರುವ ಹಕ್ಕನ್ನು ಚಲಾಯಿಸಿ ಎಂದು ಒನ್ಇಂಡಿಯಾ ಕನ್ನಡ ಮನವಿ ಮಾಡುತ್ತದೆ.

ಚುನಾವಣೆ 2018: ಕಣದಲ್ಲಿರುವ ಅಭ್ಯರ್ಥಿಗಳ ಸಮಗ್ರ ಪಟ್ಟಿಚುನಾವಣೆ 2018: ಕಣದಲ್ಲಿರುವ ಅಭ್ಯರ್ಥಿಗಳ ಸಮಗ್ರ ಪಟ್ಟಿ

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ.

ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ. ಜತೆಗೆ ರಾಜರಾಜೇಶ್ವರಿ ನಗರದಲ್ಲಿ ಚುನಾವಣೆ ಅಕ್ರಮ ಪತ್ತೆಯಾಗಿದ್ದರಿಂದ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. ಮೇ 31ರಂದು ಫಲಿತಾಂಶ ಹೊರ ಬರಲಿದೆ.

Karnataka Assembly Elections 2018 : Get Voting Live updates on Oneindia Kannada

ಹೀಗಾಗಿ, 224ಕ್ಷೇತ್ರಗಳ ಬದಲಿಗೆ 222 ಕ್ಷೇತ್ರಗಳಲ್ಲಿ ಮಾತ್ರ ಮತದಾನ ನಡೆಯಲಿದೆ. ಮೇ 15ರಂದು ಬಹು ನಿರೀಕ್ಷಿತ ಕರ್ನಾಟಕ ಚುನಾವಣಾ ಕದನದ ಫಲಿತಾಂಶ ಹೊರ ಬೀಳಲಿದೆ.

2018 ಚುನಾವಣೆ ಕಣದಲ್ಲಿರುವ ರಾಜಕೀಯ ಪಕ್ಷಗಳ ಪಟ್ಟಿ2018 ಚುನಾವಣೆ ಕಣದಲ್ಲಿರುವ ರಾಜಕೀಯ ಪಕ್ಷಗಳ ಪಟ್ಟಿ

ರಾಜ್ಯದಲ್ಲಿ ಒಟ್ಟು 58,008 ಮತಗಟ್ಟೆಗಳಿವೆ. ಇವುಗಳಲ್ಲಿ ಶೇಕಡಾ 20 ಸೂಕ್ಷ್ಮ ಮತಗಟ್ಟೆಗಳಾಗಿವೆ. ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಈ ಬಾರಿ ಕರ್ನಾಟಕದಲ್ಲಿ ಮತದಾನ ನಡೆಯಲಿದೆ.

ಈ ಬಾರಿ ರಾಜ್ಯದಲ್ಲಿ ಒಟ್ಟು 5,06,90,538 (5.06 ಕೋಟಿ) ಮತದಾರರಿದ್ದಾರೆ. ಇದರಲ್ಲಿ 2,56,75,579 ಪುರುಷ ಮತದಾರರಾದರೆ, ಮಹಿಳಾ ಮತದಾರರ ಸಂಖ್ಯೆ 2,50,09,904. ಇನ್ನು 5,055 ತೃತೀಯ ಲಿಂಗಿ ಮತದಾರರೂ ರಾಜ್ಯದಲ್ಲಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಚುನಾವಣೆ ಮುಂದೂಡಿಕೆಬೆಂಗಳೂರಿನ ರಾಜರಾಜೇಶ್ವರಿ ನಗರ ಚುನಾವಣೆ ಮುಂದೂಡಿಕೆ

ಈ ಬಾರಿ ಹೊಸದಾಗಿ 12,92,881 ಜನರು ಮತದಾರರ ಪಟ್ಟಿಗೆ ಹೆಸರು ನೋಂದಾವಣೆ ಮಾಡಿಕೊಂಡಿದ್ದಾರೆ. ಇವರೆಲ್ಲಾ ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬರೋಬ್ಬರಿ 6,03,678 ಮತದಾರರಿದ್ದರೆ, ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದಲ್ಲಿ ರಾಜ್ಯದಲ್ಲೇ ಕನಿಷ್ಠ 1,66,026 ಜನರು ಮತದಾನ ಮಾಡುವ ಹಕ್ಕು ಹೊಂದಿದ್ದಾರೆ.

English summary
Karnataka Assembly Elections 2018 : Get Voting Live updates here. Voting will be held for 223 constituencies amid tight security on May 12 (From 7 AM to 6 PM). Oneindia-Kannada urges the voters to use this opportunity and vote without fail
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X