ಮೇ ಮೊದಲ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ?

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 24 : 2018ರ ಕರ್ನಾಟಕ ವಿಧಾನಸಭೆ ಚುನಾವಣೆ ಮೇ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ. ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲು ಚುನಾವಣಾ ಆಯೋಗ ಚಿಂತನೆ ನಡೆಸಿದೆ.

ಕೇಂದ್ರ ಚುನಾವಣಾ ಆಯೋಗ 2018ರ ಮೇ 2ರಂದು ಚುನಾವಣೆ ನಡೆಸಬಹುದೇ? ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ರಾಜ್ಯ ಸರ್ಕಾರದ ಉತ್ತರದ ಬಳಿಕ ದಿನಾಂಕ ನಿಗದಿ ಬಗ್ಗೆ ತೀರ್ಮಾನಿಸಲಾಗುತ್ತದೆ.

ಡಿಸೆಂಬರ್ 15ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರವಾಸ

 Karnataka assembly elections 2018 on May 2

ಮೇ ಮೊದಲ ವಾರದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಆದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಇನ್ನೂ ಆಯೋಗದ ಪತ್ರಕ್ಕೆ ಉತ್ತರ ನೀಡಿಲ್ಲ.

ಕೈ-ಕಮಲ ಕಿತ್ತಾಟ ಜೆಡಿಎಸ್ ಗೆ ವರದಾನ?

2013ರಲ್ಲಿ ವಿಧಾನಸಭೆ ಚುನಾವಣೆ ಮೇ 5ರಂದು ನಡೆದಿತ್ತು. ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗಿತ್ತು. 2018ರಲ್ಲಿಯೂ ಒಂದೇ ಹಂತದಲ್ಲಿ ಮತದಾನ ನಡೆಸಲು ಆಯೋಗ ಚಿಂತನೆ ನಡೆಸಿದೆ.

ಸತ್ಯದ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣ ಸ್ವೀಕಾರ

2013ರ ಮೇ 13ರಂದು ಕರ್ನಾಟಕ 28ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಸ್ತುತ ಸರ್ಕಾರದ ಅವಧಿ ಮೇ ತಿಂಗಳಿನಲ್ಲಿ ಅಂತ್ಯಗೊಳ್ಳಲಿದೆ.

ಈಗಾಗಲೇ ವಿವಿಧ ರಾಜಕೀಯ ಪಕ್ಷಗಳು ಚುನಾವಣಾ ಸಿದ್ಧತೆಗಳನ್ನು ಆರಂಭಿಸಿವೆ. ಬಿಜೆಪಿ ನವೆಂಬರ್ 2ರಿಂದ ಕರ್ನಾಟಕ ಪ್ರವಾಸ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್‌ನಲ್ಲಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಹ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka Assembly elections 2018 are likely to be held in the first week of May. The Election Commission of India has written to the Chief Secretary of the state seeking to know if polls could be held on May 2.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ