ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಂತ್ರವಿಲ್ಲ; ನಮಗೇ ಬಹುಮತ ಖಚಿತ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮೇ 12: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನದ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಯ ಲೆಕ್ಕಾಚಾರಗಳು ಪ್ರಕಟವಾಗುತ್ತಿವೆ.

ಬಹುತೇಕ ಟಿವಿ ವಾಹಿನಿಗಳು ಮತ್ತು ಸಂಸ್ಥೆಗಳು ಜಂಟಿಯಾಗಿ ನಡೆಸಿರುವ ಸಮೀಕ್ಷೆಗಳ ಅನ್ವಯ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ. ಪ್ರಮುಖ ಎದುರಾಳಿ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೂ ಸ್ಪಷ್ಟ ಬಹುಮತ ಗಳಿಸುವುದಿಲ್ಲ ಎಂದು ಸಮೀಕ್ಷೆಗಳು ಹೇಳಿವೆ.

ಬೇರೆ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ ಸಿದ್ದರಾಮಯ್ಯ, ರಾಮುಲು, ಎಚ್‌ಡಿಕೆ!ಬೇರೆ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ ಸಿದ್ದರಾಮಯ್ಯ, ರಾಮುಲು, ಎಚ್‌ಡಿಕೆ!

ಸರ್ಕಾರ ರಚನೆಗೆ ಬಿಜೆಪಿ ಅಥವಾ ಕಾಂಗ್ರೆಸ್, ಜೆಡಿಎಸ್‌ನ ಬೆಂಬಲ ಪಡೆದುಕೊಳ್ಳುವುದು ಅನಿವಾರ್ಯವಾಗಲಿದೆ.

ಆದರೆ, ಈ ಸಮೀಕ್ಷೆಗಳ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವುದರಲ್ಲಿ ಸಂದೇಹವೇ ಇಲ್ಲ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಸಮೀಕ್ಷೆ ಸರಾಸರಿ : ಬಿಜೆಪಿಗೆ 107, ಅಧಿಕಾರಕ್ಕೆ ಹತ್ತಿರಕರ್ನಾಟಕ ಸಮೀಕ್ಷೆ ಸರಾಸರಿ : ಬಿಜೆಪಿಗೆ 107, ಅಧಿಕಾರಕ್ಕೆ ಹತ್ತಿರ

ಮಂಗಳವಾರ ಫಲಿತಾಂಶ ಹೊರಬೀಳಲಿದ್ದು, ಅಲ್ಲಿಯವರೆಗೂ ಎರಡು ದಿನ ವಿಶ್ರಾಂತಿ ಪಡೆಯುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

karnataka assembly elections 2018 siddaramaiah confident of majority

ಕರ್ನಾಟಕದಲ್ಲಿ ಕಾಂಗ್ರೆಸ್ ಬರವಾದ ಬಲವಾದ ಅಲೆಯಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂಬ ತೀವ್ರ ಆತ್ಮವಿಶ್ವಾಸವಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಂಪೂರ್ಣ ಬಹುಮತ ಪಡೆದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಅಧಿಕ ಮಟ್ಟದಲ್ಲಿದೆ. ಅವಶ್ಯಕತೆ ಇರುವವರಿಗೆ ಸರ್ಕಾರದ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ಸರ್ಕಾರ ರಾಜಕೀಯ ಹಗೆತನದೊಂದಿಗೆ ಕೆಲಸ ಮಾಡಿದೆ. ಅದಕ್ಕೆ ಸರಿಯಾದ ಬೆಲೆ ತೆರಬೇಕಾಗಲಿದೆ ಎಂದು ಯೋಗಿ ಹೇಳಿದರು.

English summary
karnataka assembly elections 2018: Chief minister Siddaramaiah expressed confidence over the congress party will get majority and will form the government
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X