ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2018ರ ಚುನಾವಣೆಯಲ್ಲಿ ಜೆಡಿಎಸ್‌ ನಿರ್ಣಾಯಕ, ಹೇಗೆ?

By ವಿಕಾಸ್ ನಂಜಪ್ಪ
|
Google Oneindia Kannada News

Recommended Video

ಕರ್ನಾಟಕ ಚುನಾವಣೆ 2018 : ಕರ್ನಾಟಕವನ್ನ ಆಳೋಕೆ ಹೊರಟಿದ್ಯಾ ಜೆಡಿಎಸ್?

ಬೆಂಗಳೂರು, ಡಿಸೆಂಬರ್ 21 : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದ್ದಂತೆ ಸಮ್ಮಿಶ್ರ ಸರ್ಕಾರದ ಬಗ್ಗೆ ಚರ್ಚೆ ಆರಂಭವಾಗಿದೆ. ಇದುವರೆಗೂ ನಡೆದ ಸಮೀಕ್ಷೆಗಳು ಸಹ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಹೇಳಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಸದ್ಯದ ಪ್ರಶ್ನೆ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಗಂಭೀರವಾಗಿ ಪರಿಗಣಿಸಬೇಕೆ?.

ಜ್ಯೋತಿಷ್ಯ: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರ, ಎಚ್ ಡಿಕೆ ಸಿಎಂಜ್ಯೋತಿಷ್ಯ: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರ, ಎಚ್ ಡಿಕೆ ಸಿಎಂ

ರಾಜ್ಯದ ಸದ್ಯದ ರಾಜಕೀಯ ಚಿತ್ರಣವನ್ನು ನೋಡಿದರೆ 2018ರ ಚುನಾವಣೆ ಬಳಿಕ ಸರ್ಕಾರ ರಚನೆ ಮಾಡುವಲ್ಲಿ ಜೆಡಿಎಸ್ ಮಹತ್ವದ ಪಾತ್ರವನ್ನು ವಹಿಸಲಿದೆ. ಸಮೀಕ್ಷೆಯಲ್ಲಿ ಹೇಳಿರುವುದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಪಕ್ಷಗಳಿಸಲಿದೆ ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ.

AZ ಸಮೀಕ್ಷೆ: ರಾಜ್ಯದಲ್ಲಿ ದೋಸ್ತಿ ಸರ್ಕಾರ, JDS ಕಿಂಗ್ ಮೇಕರ್AZ ಸಮೀಕ್ಷೆ: ರಾಜ್ಯದಲ್ಲಿ ದೋಸ್ತಿ ಸರ್ಕಾರ, JDS ಕಿಂಗ್ ಮೇಕರ್

ವಿಧಾನಸಭೆ ಚುನಾವಣಗೆ ಜೆಡಿಎಸ್ ಪಕ್ಷ ಭರ್ಜರಿಯಾಗಿ ಪ್ರಚಾರ ಆರಂಭಿಸಿದೆ. ಪಕ್ಷದ ಹಿಡಿತ ಹೆಚ್ಚಾಗಿರುವ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಭಾಗದತ್ತ ಪಕ್ಷ ಹೆಚ್ಚಿನ ಗಮನವನ್ನು ಹರಿಸಿದೆ....

ಇದೇನಿದು ಕುಮಾರಸ್ವಾಮಿ ಹೇಳಿಕೆ: ಬದಲಾಯಿತೇ ರಾಜಕೀಯ ಲೆಕ್ಕಾಚಾರ?ಇದೇನಿದು ಕುಮಾರಸ್ವಾಮಿ ಹೇಳಿಕೆ: ಬದಲಾಯಿತೇ ರಾಜಕೀಯ ಲೆಕ್ಕಾಚಾರ?

ಸುವರ್ಣ ನ್ಯೂಸ್ ಸಮೀಕ್ಷೆ

ಸುವರ್ಣ ನ್ಯೂಸ್ ಸಮೀಕ್ಷೆ

ರಾಜ್ಯದ 224 ಕ್ಷೇತ್ರಗಳಲ್ಲಿ ಸುವರ್ಣ ನ್ಯೂಸ್ ನಡೆಸಿದ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 88, ಬಿಜೆಪಿ 82, ಜೆಡಿಎಸ್ 43 ಸ್ಥಾನಗಳಲ್ಲಿ ಜಯಗಳಿಸಲಿದೆ. ಸಮೀಕ್ಷೆ ಪ್ರಕಾರ ಜೆಡಿಎಸ್ ಹೆಚ್ಚು ಸ್ಥಾನ ಪಡೆಯಲಿದೆ.

ನಮ್ಮ ಬೆಂಬಲ ಅನಿವಾರ್ಯ

ನಮ್ಮ ಬೆಂಬಲ ಅನಿವಾರ್ಯ

ಜೆಡಿಎಸ್‌ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಏರಲಿದ್ದೇವೆ ಎಂದು ಹೇಳುತ್ತಿದೆ. ಸಮೀಕ್ಷೆಗಳಲ್ಲಿ ಹೇಳಿದ್ದಕ್ಕೀಂತ ಹೆಚ್ಚು ಸ್ಥಾನ ದೊರೆಯಲಿದೆ. ಪಕ್ಷಕ್ಕೆ ಬಹುಮತ ಬಾರದಿದ್ದರೆ ಸರ್ಕಾರ ರಚನೆ ಮಾಡಲು ನಮ್ಮ ಬೆಂಬಲ ಅನಿವಾರ್ಯ ಎಂಬುದು ನಾಯಕರ ವಾದ.

20ರಷ್ಟು ಮತಗಳು

20ರಷ್ಟು ಮತಗಳು

ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಜೆಡಿಎಸ್ ಶೇ 20ರಷ್ಟು ಮತ ಪಡೆಯಲಿದೆ. ಇದರಿಂದ ಪಕ್ಷ ಕಿಂಗ್ ಮೇಕರ್ ಆಗಲಿದೆ. ಸರ್ಕಾರ ರಚನೆ ಮಾಡುವಾಗ ಪಕ್ಷವನ್ನು ಪರಿಗಣಿಸುವುದು ಅನಿವಾರ್ಯವಾಗಿದೆ.

ಸರಿಯಾದ ಸಮಯವಲ್ಲ

ಸರಿಯಾದ ಸಮಯವಲ್ಲ

ರಾಜಕೀಯ ಪಂಡಿತರ ಲೆಕ್ಕಾಚಾರದ ಪ್ರಕಾರ ರಾಜ್ಯದ ಮುಂದಿನ ಸರ್ಕಾರದ ಬಗ್ಗೆ ನಿರ್ಧರಿಸಲು ಇದು ಸಕಾಲವಲ್ಲ. ಯಾವುದೇ ರಾಜಕೀಯ ಪಕ್ಷಗಳ ತಂತ್ರ ಇನ್ನೂ ಸರಿಯಾಗಿ ತಿಳಿಯುತ್ತಿಲ್ಲ. ಜನವರಿ ತಿಂಗಳಿನಲ್ಲಿ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ.

ಕುಮಾರಸ್ವಾಮಿ ಹೇಳುವುದೇನು?

ಕುಮಾರಸ್ವಾಮಿ ಹೇಳುವುದೇನು?

ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, 'ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ' ಎಂದು ಹೇಳಿದ್ದಾರೆ.

English summary
As the election heat in Karnataka is gradually building up, there is already talk on a coalition government. Several surveys have predicted a hung assembly. The big question is can the JD(S) be ignored?. There is a clear indication that the JD(S) will be a major player in the formation of the next Karnataka government in 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X