ABP-CVoter survey: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಬಿಜೆಪಿಗೆ ಮುಖಭಂಗ!
ಬೆಂಗಳೂರು, ಮೇ. 06: ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10ರ ಬುಧವಾರ ಮತದಾನ ನಡೆಯಲಿದೆ. ಮತದಾನಕ್ಕೆ 4 ದಿನಗಳ ಮೊದಲು ABP-CVoter ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ ಎಂದು ಸಮೀಕ್ಷೆಯ ವರದಿ ತಿಳಿಸಿದೆ.
ನಿರ್ಣಾಯಕ ಕರ್ನಾಟಕ ಚುನಾವಣೆಗೆ ಕೆಲವೇ ದಿನಗಳಿರುವಾಗ, ಎಬಿಪಿ ನ್ಯೂಸ್ ಸಿವೋಟರ್ ಸಹಯೋಗದೊಂದಿಗೆ ಮತದಾರನ ಮನಸ್ಥಿತಿಯನ್ನು ಅಳೆಯಲು ಅಂತಿಮ ಅಭಿಪ್ರಾಯ ಸಂಗ್ರಹವನ್ನು ನಡೆಸಿದೆ. ಸಮೀಕ್ಷೆಯ ಫಲಿತಾಂಶಗಳನ್ನು ಭಾನುವಾರ ಬಿಡುಗಡೆ ಮಾಡಿದೆ.

ಸದ್ಯ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಬಸವರಾಜ ಬೊಮ್ಮಾಯಿ ಸರ್ಕಾರ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಕೂಡ ಸರ್ಕಾರ ರಚಿಸುವ ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ ಮತ್ತು ಚುನಾವಣಾ ಭವಿಷ್ಯವು ತಮ್ಮ ಪರವಾಗಿರಲಿದೆ ಎಂದು ಹೇಳಿದೆ. ಜೆಡಿಎಸ್ ಕೂಡ ಸರ್ಕಾರ ರಚನೆ ಮಾಡುವ ವಿಶ್ವಾಸ ತೋರಿಸುತ್ತಿದೆ.
ರಾಜ್ಯವು 224 ಸದಸ್ಯರ ವಿಧಾನಸಭೆಯನ್ನು ಹೊಂದಿದೆ. ಜಾತ್ಯತೀತ ಜನತಾ ದಳ ಮೂರನೇ ಪ್ರಮುಖ ರಾಜಕೀಯ ಪಕ್ಷವಾಗಿದ್ದು, 28 ಶಾಸಕರನ್ನು ಹೊಂದಿದೆ. ಬಿಜೆಪಿ ಪ್ರಸ್ತುತ 119 ಸ್ಥಾನಗಳನ್ನು ಹೊಂದಿದೆ, ಕಾಂಗ್ರೆಸ್ 75 ಸ್ಥಾನಗಳೊಂದಿಗೆ ಈ ಬಾರಿಯ ಚುನಾವಣೆಯಲ್ಲಿ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ. ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಉಳಿದಿವೆ. ರಾಜ್ಯದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ಎಬಿಪಿ ನ್ಯೂಸ್ - ಸಿವೋಟರ್ ಸಮೀಕ್ಷೆ ಫಲಿತಾಂಶ
ಕರ್ನಾಟಕ ವಿಧಾನಸಭೆಯ ಒಟ್ಟು 224 ಸ್ಥಾನಗಳಲ್ಲಿ, ಎಬಿಪಿ-ಸಿವೋಟರ್ ಸಮೀಕ್ಷೆಯ ಫಲಿತಾಂಶಗಳು ಆಡಳಿತರೂಢ ಬಿಜೆಪಿ 73 ರಿಂದ 85 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆಯಿದೆ ಎಂದು ತೋರಿಸಿದೆ. ಪ್ರತಿಪಕ್ಷ ಕಾಂಗ್ರೆಸ್ 110 ರಿಂದ 122 ಸ್ಥಾನಗಳನ್ನು ಗಳಿಸಲಿದೆ ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್ 21 ರಿಂದ 29 ಸ್ಥಾನಗಳನ್ನು ಗೆಲ್ಲಲಿದೆ ಎಂದು ವರದಿ ಹೇಳಿದೆ.

ಈ ಮೂಲಕ ಭಾನುವಾರ ಸಂಜೆ ಬಿಡುಗಡೆಯಾದ ಲೋಕ್‌ಪೋಲ್ ಸಮೀಕ್ಷೆಯ ಫಲಿತಾಂಶದಂತೆಯೇ ಕಾಂಗ್ರೆಸ್ ಈ ಬಾರಿ ರಾಜ್ಯದಲ್ಲಿ ಬಹುಮತದಿಂದ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದೆ. LokPoll ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿ 59 ರಿಂದ 65 ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ಕಾಂಗ್ರೆಸ್ 129 ರಿಂದ 134 ಸ್ಥಾನಗಳಲ್ಲಿ ಜಯಗಳಿಸಲಿದೆ. ಜೆಡಿಎಸ್ ಪಕ್ಷ 23 ರಿಂದ 28 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಇತರರು 2 ಸ್ಥಾನಗಳಲ್ಲಿ ಜಯ ಗಳಿಸಲಿದ್ದಾರೆ ಎಂದು ಸಮೀಕ್ಷೆಯ ಅಂತಿಮ ವರದಿ ಅಂದಾಜಿಸಿದೆ.












Click it and Unblock the Notifications