ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Amit Shah Hubballi Visit : ಮತ್ತೆ ರಾಜ್ಯಕ್ಕೆ ಅಮಿತ್ ಶಾ, ಮತ ಬೇಟೆಗೆ ಕುಂದಗೋಳದಲ್ಲಿ ಬೃಹತ್ ಸಾರ್ವಜನಿಕ ಸಭೆ

ರಾಜಕೀಯ ಚಾಣಕ್ಷ್ಯ ಎನಿಸಿಕೊಂಡಿರುವ ಗೃಹ ಸಚಿವ ಅಮಿತ್ ಶಾ ಮತ್ತೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಚುನಾವಣೆಗೆ ರೆಡಿಯಾಗುತ್ತಿರುವ ರಾಜ್ಯದಲ್ಲಿ ಮತಬೇಟೆಗೆ ಹೊರಟಿರವ ಅಮಿತ್ ಶಾ ಅವರ ಕಾರ್ಯಕ್ರಮಗಳ ವಿವರಕ್ಕಾಗಿ ಮುಂದೆ ಓದಿ.

|
Google Oneindia Kannada News

ಬೆಂಗಳೂರು, ಜನವರಿ. 27: ಚುನಾವಣೆಯ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿವೆ. ಮತ್ತೆ ಅಧಿಕಾರವನ್ನು ಪಡೆಯುವ ಹಂಬಲದಲ್ಲಿರುವ ಬಿಜೆಪಿ ರಣತಂತ್ರಗಳನ್ನೇ ಹೂಡುತ್ತಿದೆ. ಪಕ್ಷದ ರಾಷ್ಟ್ರೀಯ ನಾಯಕರು ಉತ್ತರ ಕರ್ನಾಟಕವನ್ನು ಗುರಿಯಾಗಿಸಿಕೊಂಡಿದ್ದು, ಸತತವಾಗಿ ಕಾರ್ಯಕ್ರಮಗಳನ್ನು ಮಾಡುತ್ತಾ ಭೇಟಿ ನೀಡುತ್ತಿದ್ದಾರೆ.

ಇದೇ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಒಂದು ತಿಂಗಳಲ್ಲೇ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಅಮಿತ್ ಶಾ ರಾಜ್ಯ ಪ್ರವಾಸ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳೇ ಟಾರ್ಗೆಟ್!ಅಮಿತ್ ಶಾ ರಾಜ್ಯ ಪ್ರವಾಸ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳೇ ಟಾರ್ಗೆಟ್!

ರಾಜ್ಯದಲ್ಲಿ ಏಪ್ರಿಲ್ ಮಧ್ಯದಲ್ಲಿ ಅಥವಾ ಮೇ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Karnataka assembly elections 2023: Amit Shah will visit Hubballi - Dharwad tomorrow

ಕಳೆದ ವರ್ಷ ಡಿಸೆಂಬರ್ 30 ಮತ್ತು 31 ರಂದು ಅಮಿತ್ ಶಾ ಮಂಡ್ಯ ಜಿಲ್ಲೆ ಮತ್ತು ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ಬಾರಿ ಕಿತ್ತೂರು ಕರ್ನಾಟಕ ಪ್ರದೇಶ ಎಂದೂ ಕರೆಯಲ್ಪಡುವ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.

27 ರಂದು ರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮಿಸಲಿದ್ದು, 28 ರಂದು ಬೆಳಗ್ಗೆ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿವಿಬಿ ಕಾಲೇಜಿನ 75ನೇ ವಾರ್ಷಿಕೋತ್ಸವ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆಯ ಎರಡು ಕಾರ್ಯಕ್ರಮಗಳಲ್ಲಿ ಹಾಜರಾಗಲಿದ್ದಾರೆ.

ಕುಂದಗೋಳದ ನಡೆಯುವ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸಿ ನಗರದ ಶಂಬುಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ವಾರ್ಡ ನಂ. 7 ರ ಮತಗಟ್ಟೆ ಸಂಖ್ಯೆ 50 ರಲ್ಲಿ ವಾಲ್ ಪೇಂಟಿಂಗ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Karnataka assembly elections 2023: Amit Shah will visit Hubballi - Dharwad tomorrow

ನಂತರ ಧಾರವಾಡ ಗ್ರಾಮಾಂತರ ವ್ಯಾಪ್ತಿಗೆ ಬರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಭಾಗದಲ್ಲಿ ಸುಮಾರು 1.5 ಕಿ.ಮೀ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ 57 ಎಕರೆ ಜಾಗದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಭೂಮಿ ಪೂಜೆ ಹಾಗೂ ಶಂಕು ಸ್ಥಾಪನೆಯನ್ನು ಅಮಿತ್‌ ಶಾ ನೆರವೇರಿಸಲಿದ್ದಾರೆ.

ಬಳಿಕ ಬಿಜೆಪಿಯ ಜನಸಂಕಲ್ಪ ಯಾತ್ರೆಯ ಭಾಗವಾಗಿರುವ ರ್ಯಾಲಿಯಲ್ಲಿ ಭಾಗವಹಿಸಲು ಕುಂದಗೋಳದಿಂದ ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿಯ ಎಂಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ.

ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಖಾನಾಪುರ ಮತ್ತು ಬೈಲಹೊಂಗಲ ವಿಧಾನಸಭಾ ಕ್ಷೇತ್ರಗಳಿಗೂ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುವ ನಿರೀಕ್ಷೆಯಿದೆ. ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಬೆಳಗಾವಿಯಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಜನವರಿ 28ರಂದು ಸಂಜೆ 6.30 ರಿಂದ 10 ಗಂಟೆಯ ತನಕ ಬೆಳಗಾವಿಯಲ್ಲಿ ಅಮಿತ್ ಶಾ ಸರಣಿ ಸಭೆಗಳನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

English summary
karnataka assembly elections 2023: Union Home Minister Amit Shah will visit Hubballi - Dharwad. he will attend road show, public meeting. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X