Karnataka Elections: ಬಿಜೆಪಿ ಮೊದಲ ಪಟ್ಟಿ ಬಗ್ಗೆ ಹೆಚ್ಚು ಚರ್ಚಿತವಾಗುತ್ತಿರುವ ಹತ್ತು ವಿಚಾರಗಳು- ಮಾಹಿತಿ, ವಿವರ, ವಿಶ್ಲೇಷಣೆ
ಬೆಂಗಳೂರು, ಏಪ್ರಿಲ್ 12: ಮೇ 10 ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ( Karnataka Assembly Elections 2023 ) ನಡೆಯಲಿದೆ. ಬಿಜೆಪಿ ( BJP ) ಮಂಗಳವಾರ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದ ಕುತೂಹಲಕ್ಕೆ ಬಿಜೆಪಿ ತೆರೆ ಎಳೆದಿದೆ. ಈ ಪಟ್ಟಿಯಲ್ಲಿ ಬಿಜೆಪಿ ಹಲವು ಅಚ್ಚರಿಯ ಸಂಗತಿಗಳನ್ನು ಒಳಗೊಂಡಿದೆ. ಈ ಅಚ್ಚರಿಯ ಅಂಶಗಳು ರಾಜ್ಯದಾದ್ಯಂತ ಹೆಚ್ಚು ಚರ್ಚಿತವಾಗುತ್ತಿವೆ. ಈ ಅಂಶಗಳನ್ನು ಇಲ್ಲಿ ಗಮನಿಸಬಹುದು.

1- 2018 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 75 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬದಲಾಯಿಸಿದೆ.
2- 189 ಅಭ್ಯರ್ಥಿಗಳ ಪಟ್ಟಿಯಲ್ಲಿ 8 ಹಾಲಿ ಶಾಸಕರಿಗೆ ಕೇಸರಿ ಪಕ್ಷ ಟಿಕೆಟ್ ನಿರಾಕರಿಸಿದೆ
3- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ( Jagadish Shettar ) ಬಿಜೆಪಿ ಟಿಕೆಟ್ ಘೋಷಣೆ ಮಾಡಿಲ್ಲ
4. ಕನಕಪುರದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ( Congress ) ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಅವರನ್ನು ಎದುರಿಸಲು ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಅವರು ಬೆಂಗಳೂರಿನ ಪದ್ಮನಾಭನಗರ ಹಾಗೂ ಕನಕಪುರದಲ್ಲಿ ಸ್ಪರ್ಧಿಸಲಿದ್ದಾರೆ.
5. ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ( Siddaramaiah ) ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ( V Somanna ) ಕಣಕ್ಕಿಳಿಯಲಿದ್ದಾರೆ. ಸೋಮಣ್ಣ ಚಾಮರಾಜನಗರದಿಂದಲೂ ಸ್ಪರ್ಧಿಸಲಿದ್ದಾರೆ.
6. ಇಬ್ಬರು ಎಂಎಲ್ಸಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಚನ್ನಪಟ್ಟಣದಿಂದ ಸಿಪಿ ಯೋಗೇಶ್ವರ್ ( CP Yogeshwar ) ಮತ್ತು ಹೊಸಕೋಟೆಯಿಂದ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ನೀಡಿದೆ.
7. ರಮೇಶ್ ಜಾರಕಿಹೊಳಿ ಬೆಳಗಾವಿ ( Belagavi ) ಜಿಲ್ಲೆಯಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ
8. ಬಿಎಸ್ ಯಡಿಯೂರಪ್ಪ ( BS Yediyurappa ) ಪುತ್ರ ಬಿವೈ ವಿಜಯೇಂದ್ರಗೆ ಶಿಕಾರಿಪುರದಿಂದ ಟಿಕೆಟ್ ಸಿಕ್ಕಿದೆ
9. ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದಾರೆ
10. ಬಿಜೆಪಿ ಮೊದಲ ಪಟ್ಟಿಯಲ್ಲಿ 52 ಚೊಚ್ಚಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಇತ್ತೀಚೆಗಷ್ಟೇ ಪ್ರಕಟಿಸಲಾದ ಮೀಸಲಾತಿ ನೀತಿಯ ಬಗ್ಗೆಯೂ ಗಮನ ಹರಿಸಿರುವ ಪಕ್ಷವು ಎಸ್‌ಸಿಗಳಿಂದ 30, ಎಸ್‌ಟಿಗಳಿಂದ 16 ಮತ್ತು ಒಬಿಸಿಯಿಂದ 32 ಜನರನ್ನು ಕಣಕ್ಕಿಳಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಿಂದ ಮರು ಆಯ್ಕೆ ಬಯಸಿದ್ದಾರೆ. ಪಕ್ಷದ ಲಿಂಗಾಯತ ಪ್ರಬಲ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ.
ಮೀನುಗಾರಿಕಾ ಸಚಿವ ಹಾಗೂ ಏಳು ಬಾರಿ ಶಾಸಕರಾಗಿದ್ದ ಎಸ್.ಅಂಗಾರ ಅವರನ್ನು ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಒಟ್ಟಾರೆಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐವರು ಹಾಲಿ ಶಾಸಕರನ್ನು ಕೈಬಿಡಲಾಗಿದೆ.
ಇತ್ತೀಚೆಗಷ್ಟೇ ಎಎಪಿಯಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಬೆಂಗಳೂರಿನ ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದಾರೆ. ಅವರು ಕಾಂಗ್ರೆಸ್‌ನ ಜಮೀರ್ ಅಹ್ಮದ್ ಖಾನ್ ಅವರನ್ನು ಎದುರಿಸಲಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾಜಿ ಡಿಸಿಎಂ ಜಿ ಪರಮೇಶ್ವರ ವಿರುದ್ಧ ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಸ್ಪರ್ಧಿಸಲಿದ್ದಾರೆ. 2019 ರಲ್ಲಿ ಬಿಜೆಪಿ ತನ್ನ ಸರ್ಕಾರವನ್ನು ರಚಿಸಲು ಸಹಾಯ ಮಾಡಿದ ನಾಯಕರಿಗೆ ಕೇಸರಿ ಪಕ್ಷ ಮಣೆ ಹಾಕಿದೆ. ಅಧಿಕಾರ ವಿರೋಧಿ ಅಲೆಯನ್ನು ಎದುರಿಸಲು ಪಕ್ಷವು 52 ಹೊಸ ಮುಖಗಳನ್ನು ಕಣಕ್ಕಿಳಿಸಿದೆ ಎಂದು ಹೇಳಲಾಗುತ್ತಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications