ಕರ್ನಾಟಕ ಬಿಜೆಪಿಯಿಂದ ಸಿದ್ದವಾಗಿದೆ ಚುನಾವಣಾ ಪ್ರಚಾರದ ರೋಡ್ ಮ್ಯಾಪ್

ನವದೆಹಲಿ, ಏಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು, ಪ್ರಚಾರದ ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನವದೆಹಲಿಯಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅತ್ಯಗತ್ಯ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ ಸಭೆಯಲ್ಲೂ ಸಹ ಭಾಗಿಯಾಗಿದ್ದಾರೆ.

Karnataka Assembly Elections 2023: BJP Prepares Election Campaign Road Map: CM Bommai

ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟಿಲ್ ಅವರು ಸಹ ಭೇಟಿಯಾಗಿ ಟಿಕೆಟ್ ವಿಚಾರದಲ್ಲಿ ತಮ್ಮ ವೈಯಕ್ತಿಕ ಅಭಿಪ್ರಾಯ ನೀಡಿದ್ದಾರೆ. ನಾವು ಸುದೀರ್ಘವಾದ ಚರ್ಚೆ ಮಾಡಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.

ಹತ್ತಿರವಾಗುತ್ತಿರುವ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಹೇಗೆಲ್ಲ ಕಾರ್ಯ ನಿರ್ವಹಿಸಬೇಕು ಎಂದು ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂದ ಮೇಲೆ ನಾಳೆ (ಮಂಗಳವಾರ) ತಡ ರಾತ್ರಿ ಅಥವಾ ಬುಧವಾರ ಏಪ್ರಿಲ್ 12ರಂದು ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

ನಾನು ಸ್ವ ಕ್ಷೇತ್ರ ಶಿಗ್ಗಾವಿಯಿಂದ ಸ್ಪರ್ಧೆ ಮಾಡಲಿದ್ದೇನೆ. ಬೇರೆ ಕ್ಷೇತ್ರಕ್ಕೆ ಹೋಗೋ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಅಲ್ಲದೇ ಹಾಲಿ ಶಾಸಕರಿಗೆ ಕೊಕ್ ನೀಡಲಾಗುತ್ತದೆ ಅನ್ನುವುದು ಉಹಾಪೂಹಾ. ನಮ್ಮ ಬಿಜೆಪಿಯಲ್ಲಿ ಕೆಲವು ಮಾನದಂಡಗಳಿವೆ. ಅದೇ ಪ್ರಕಾರ ನಾವು ಕೆಲಸ ಮಾಡುತ್ತೇವೆ.

ಭ್ರಷ್ಟಾಚಾರ ಆರೋಪಿಗಳಿಗೆ, ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡವರಿಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಕೆಲವು ವಿಷಯಗಳ ಬಗ್ಗೆ ಸ್ಪಷ್ಟತೆ ಇದೆ. ಅದರ ರೀತಿಯಲ್ಲೇ ಟಿಕೆಟ್ ಅಂತಿಮ ಆಗುತ್ತದೆ. ಎಲ್ಲ ಮಾನದಂಡದ ಬಗ್ಗೆ ಚರ್ಚೆ ಆಗಿದೆ ಎಂದು ಟಿಕೆಟ್ ವಿಚಾರದಲ್ಲಿ ಯಾವುದೇ ಗುಟ್ಟು ಬಿಟ್ಟುಕೊಡದೇ ಅವರು ಮಾತನಾಡಿದರು.

Karnataka Assembly Elections 2023: BJP Prepares Election Campaign Road Map: CM Bommai

ಬಿಜೆಪಿ ಪಟ್ಟಿ ಬಗ್ಗೆ ಸಿಎಂ ಪ್ರತಿಕ್ರಿಯೆ

ಎಲ್ಲ ಪಕ್ಷಗಳ ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾಗುತ್ತಿದೆ. ಆದರೆ ಆಡಳಿತಾರೂಢ ಬಿಜೆಪಿಯಿಂದ ಒಂದೇ ಒಂದು ಪಟ್ಟಿ ಸಹ ಘೋಷಣೆಯಾಗಿಲ್ಲ. ಈ ಸಂಬಂಧ ವಿಪಕ್ಷಗಳ ಟಿಕೆಗಳನ್ನು ಬಿಜೆಪಿ ಎದುರಿಸುವಂತಾಗಿದೆ. ಈ ಸಂಬಂಧ ಉತ್ತರಿಸಿದ ಮುಖ್ಯಮಂತ್ರಿಗಳು ಹೆಚ್ಚಿನ ಚರ್ಚೆ ಹಿನ್ನೆಲೆ ತಡವಾಗಿದೆ. ಮಂಗಳವಾರ ಇಲ್ಲವೇ ಏಪ್ರಿಲ್ 12ರಂದು ಪಟ್ಟಿ ಬಿಡುಗಡೆ ಆಗಲಿದೆ ಎಂದು ಹೇಳಿದರು.

90 ಅಲ್ಲ 170 ಅಭ್ಯರ್ಥಿಗಳ ಮೊದಲ ಪಟ್ಟಿ

ಮೊದಲು 90 ಮಂದಿ ಅಭ್ಯರ್ಥಿಗಳ ಪಟ್ಟಿ ಎಂದಿದ್ದ ಬಿಜೆಪಿ ಇದೀಗ 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ದಗೊಂಡಿದೆ ಎಂದು ತಿಳಿಸಿದೆ. ಟಿಕೆಟ್ ನೀಡುತ್ತಿರುವ ಪಕ್ಷದ ಕೆಲ ಅಭ್ಯರ್ಥಿಗಳ ಬಗ್ಗೆ ಹೆಚ್ಚಿನ ಗ್ರೌಂಡ್ ರಿಪೋರ್ಟ್ ನಡೆಸಿ ಅದರ ಆಧಾರದಡಿ ಚರ್ಚಿಸಬೇಕಾಗಿದೆ. ಮುಖ್ಯವಾಗಿ ಇಲ್ಲಿ ಹೊಸ ಅಭ್ಯರ್ಥಿಗಳ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಕಳೆದ ಒಂದು ವಾರದಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಬಿಜೆಪಿ ನಾಯಕರು ಒಂದಲ್ಲ ಒಂದು ಕಾರಣದಿಂದ ಮುಂದೂಡುತ್ತಾ ಬಂದಿದ್ದಾರೆ. ಮುಂದಿನ 48ಗಂಟೆಯಲ್ಲಿ ಬಿಜೆಪಿ ಟಿಕೆಟ್ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ 224 ಕ್ಷೇತ್ರಗಳ ಪೈಕಿ ಸುಮಾರು 170 ರಿಂದ 180 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಮೊದಲ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+