ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೆ ರಾಜ್ಯದ ವಿವಿಧೆಡೆ ರಥಯಾತ್ರೆ ನಡೆಸಲಿರುವ ಬಿಜೆಪಿ

ಕಾಂಗ್ರೆಸ್ ನಾಯಕರು ಎರಡು ತಮಡಗಳಲ್ಇ ರಾಜ್ಯದಲ್ಲಿ ಚುನಾವಣೆ ಪ್ರಚಾರ ಕೈಗೊಂಡ ಬೆನ್ನಲ್ಲೆ ಬಿಜೆಪಿ ಕೂಡ ಪ್ರಚಾರಕ್ಕೆ ಭರ್ಜರಿ ತಯಾರಿ ನಡೆಸಿದ್ದು, ರಥಯಾತ್ರೆಗೆ ಹೊರಟಿದೆ. ಮುಂದೆ ಓದಿ.

|
Google Oneindia Kannada News

ಬೆಂಗಳೂರು, ಫೆಬ್ರವರಿ. 05: ರಾಜ್ಯ ಚುನಾವಣಾ ಕಣ ರಂಗೇರುತ್ತಿದ್ದು, ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. ಎರಡನೇ ಹಂತದ ಪ್ರಜಾಧ್ವನಿ ಬಸ್ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಎರಡು ದಿಕ್ಕುಗಳಲ್ಲಿ ಹೊರಟಿದ್ದಾರೆ. ಇದರ ಬೆನ್ನಲ್ಲೆ ಬಿಜೆಪಿ ಕೂಡ ಪ್ರಚಾರಕ್ಕೆ ತಯಾರಾಗಿದ್ದು ರಥಯಾತ್ರೆ ನಡೆಸಲು ಮುಂದಾಗಿದೆ.

ಮತ್ತೆ ಅಧಿಕಾರ ಹಿಡಿಯಲು ಬಿಜೆಪಿ ಸರ್ವ ಪ್ರಯತ್ನ ಮಾಡುತ್ತಿದ್ದು, ಚುನಾವಣಾ ಪ್ರಚಾರದ ಭಾಗವಾಗಿ ಬಿಜೆಪಿ ಘಟಕವು ರಾಜ್ಯದ ವಿವಿಧ ಭಾಗಗಳಲ್ಲಿ ರಥಯಾತ್ರೆಗಳನ್ನು ನಡೆಸಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಾಲ್ಕು ತಂಡಗಳಿಂದ ರಾಜ್ಯದ ವಿವಿಧೆಡೆ ರಥಯಾತ್ರೆ ನಡೆಯಲಿದೆ ಎಂದು ಮುಖಂಡರು ತಿಳಿಸಿದ್ದಾರೆ.

Karnataka Assembly Elections 2023: BJP will hold Ratha Yatras in different parts of state

ಇನ್ನು ಕೆಲವೆಡೆ ರಾಷ್ಟ್ರೀಯ ನಾಯಕರು ಮತ್ತು ಕೇಂದ್ರ ಸಚಿವರು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಮತ್ತು ಚುನಾವಣಾ ತಯಾರಿ ಕುರಿತು ಬೆಂಗಳೂರಿನಲ್ಲಿ ಶನಿವಾರ ನಡೆದ ವಿಶೇಷ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅರಮನೆ ಮೈದಾನದಲ್ಲಿ ನಡೆದ ಸಭೆಯಲ್ಲಿ 800ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ನಡೆಯಲಿರುವ ರಥಯಾತ್ರೆ ಫೆಬ್ರವರಿ 26ಕ್ಕೆ ಆರಂಭವಾಗಿ ಮಾರ್ಚ್ 23ಕ್ಕೆ ಮುಕ್ತಾಯವಾಗುವ ಸಾಧ್ಯತೆ ಇದೆ.

Karnataka Assembly Elections 2023: BJP will hold Ratha Yatras in different parts of state

ಬೆಂಗಳೂರಿನ ಕೆಂಪೇಗೌಡ ಪ್ರತಿಮೆ, ಚಾಮರಾಜನಗರದ ಮಹದೇಶ್ವರ ಬೆಟ್ಟ, ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾಗೂ ಬೀದರ್ ಜಿಲ್ಲೆಯ ಬಸವಕಲ್ಯಾಣದ ಅನ್ವಭ ಮಂಟಪದಿಂದ ನಾಲ್ಕು ಯಾತ್ರೆ ಆರಂಭವಾಗಲಿದೆ. ಎಲ್ಲಾ ಯಾತ್ರೆಗಳು ದಾವಣಗೆರೆಯಲ್ಲಿ ಕೊನೆಗೊಳ್ಳಲಿದ್ದು, ಅಲ್ಲಿ ಬೃಹತ್ ಸಮಾವೇಶ ನಡೆಯಲಿದೆ' ಎಂದು ಹಿರಿಯ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

ರಥಯಾತ್ರೆಯ ಹೊರತಾಗಿ ಪ್ರತಿ ಕ್ಷೇತ್ರಕ್ಕೂ ಚುನಾವಣಾ ಉಸ್ತುವಾರಿಗಳನ್ನು ನೇಮಿಸುವ ನಿರ್ಣಯ ಕೈಗೊಳ್ಳಲಾಗಿದೆ. "ಪ್ರತಿಯೊಬ್ಬ ನಾಯಕನಿಗೆ ಅವರ ಜವಾಬ್ದಾರಿಗಳನ್ನು ನೀಡಲಾಗಿದೆ. ಪ್ರತಿ ಕ್ಷೇತ್ರದ ರಾಜಕೀಯ ಚಿತ್ರಣ, ಚುನಾವಣಾ ಪ್ರವೃತ್ತಿ ಮತ್ತು ವಿರೋಧ ಪಕ್ಷಗಳ ಚಟುವಟಿಕೆಗಳ ಬಗ್ಗೆ ವರದಿಯನ್ನು ನೀಡಲು ಕೇಳಲಾಗಿದೆ" ಎಂದು ಹೇಳಿದ್ದಾರೆ.

ಇತ್ತ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ತುಮಕೂರಿನಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ. ರಕ್ಷಣಾ ಸಚಿವಾಲಯವು 615-ಎಕರೆ ಕಾರ್ಖಾನೆಯನ್ನು ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯ ಎಂದು ಹೇಳಿದೆ.

ಬೆಂಗಳೂರಿನಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ತುಮಕೂರಿನ ಈ ಕಾರ್ಖಾನೆಯಿಂದ ಸಿವಿಲ್ ಲೈಟ್ ಯುಟಿಲಿಟಿ ಹೆಲಿಕಾಪ್ಟರ್‌ಗಳ ಸಂಭಾವ್ಯ ರಫ್ತುಗಳನ್ನು ಸಹ ಪೂರೈಸಲಾಗುವುದು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
Karnataka assembly elections 2023: Karnataka Bharatiya Janata Party (BJP) will hold Ratha Yatras in different parts of the state as part of election campaign. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X