ಕರ್ನಾಟಕ ವಿಧಾನಸಭಾ ಚುನಾವಣೆ 2023: ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್, ಬಿಜೆಪಿ ಪರಸ್ಪರ ಅಪಹಾಸ್ಯ
ಬೆಂಗಳೂರು ಏಪ್ರಿಲ್ 8: ಟಿಕೆಟ್ ಹಂಚಿಕೆ ಮತ್ತು ತಮ್ಮ ಪಕ್ಷಗಳ ಪ್ರಮುಖ ನಾಯಕರಿಗೆ ಸೀಟು ಹಂಚಿಕೆಯಲ್ಲಿನ ಆಂತರಿಕ ಗೊಂದಲಗಳ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಅಪಹಾಸ್ಯ ಮಾಡುತ್ತಿವೆ. ಕಾಂಗ್ರೆಸ್ ಈವರೆಗೆ 166 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಆದರೆ ಬಿಜೆಪಿ ಮಾತ್ರ ಇನ್ನೂ ಮೊದಲ ಪಟ್ಟಿಯನ್ನು ಹೊರತಂದಿಲ್ಲ.
ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ, 'ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಹಿರಿಯ ಸಚಿವರು ಅಧಿಕಾರ ವಿರೋಧಿಯನ್ನು ತಡೆಹಿಡಿಯಲು ಲಾಬಿ ನಡೆಸುತ್ತಿದ್ದಾರೆ' ಎಂದು ಹೇಳಿದ್ದಾರೆ.

ಸುರ್ಜೆವಾಲಾಗೆ ತಿರುಗೇಟು ನೀಡಿದ ಬಿಜೆಪಿ ರಾಜ್ಯಸಭಾ ಸಂಸದ ಲಹರ್ ಸಿಂಗ್ ಸಿರೋಯಾ ಅವರು ಟ್ವಿಟರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನಗಳ ಗೊಂದಲದ ಬಗ್ಗೆ ಟೀಕಿಸಿದ್ದಾರೆ.
Can you first explain why @siddaramaiah has run away from Badami, Chamundeshwari and Kolar? He is your ‘mass leader’ without a constituency. Why did @RahulGandhi run away to Wayanad? Can you name the constituency you lost in Haryana? @rssurjewala @INCIndia @INCKarnataka
— Lahar Singh Siroya (@LaharSingh_MP) April 7, 2023
1/2 https://t.co/RcAyG6hedE
ತಮ್ಮ ಟ್ವೀಟ್‌ನಲ್ಲಿ ಸುರ್ಜೆವಾಲಾ ಅವರ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ಲಹರ್ ಸಿಂಗ್ ಸಿರೋಯಾ, 'ಸಿದ್ದರಾಮಯ್ಯ ಅವರು 2018 ರಲ್ಲಿ ಗೆದ್ದ ಬಾದಾಮಿ ಕ್ಷೇತ್ರದಿಂದ ಮತ್ತು ಅದೇ ಚುನಾವಣೆಯಲ್ಲಿ ಜನತಾ ದಳ (ಜಾತ್ಯತೀತ) ಗೆ ಸೋತ ಚಾಮುಂಡೇಶ್ವರಿ ಕ್ಷೇತ್ರದಿಂದ "ಓಡಿ ಹೋಗುತ್ತಿದ್ದಾರೆ" ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಮತ್ತು ಸುರ್ಜೆವಾಲಾ ಅವರನ್ನೂ ಗುರಿಯಾಗಿಸಿಕೊಂಡು ಲಹರ್ ಸಿಂಗ್ ಸಿರೋಯಾ ಅವರು ವಾಗ್ದಾಳಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಸ್ಥಾನ ನೀಡುವಂತೆ ಬೇಡಿಕೆ ಇಡುತ್ತಿರುವುದರಿಂದ ಸಿದ್ದರಾಮಯ್ಯ ಅವರಿಗೆ ಸ್ಥಾನಗಳ ಆಯ್ಕೆಯು ಪಕ್ಷಕ್ಕೆ ಸೂಕ್ಷ್ಮ ವಿಷಯವಾಗಿದೆ. ಮೊದಲಿಗೆ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದ ಸಿದ್ದರಾಮಯ್ಯ ಅವರು ನಂತರ ವರುಣಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದರು. ಈಗ ಅವರು ಕೋಲಾರದಿಂದಲೂ ಸ್ಪರ್ಧಿಸಲು ಬಯಸಿದ್ದಾರೆ, ಆದರೆ ಪಕ್ಷವು ಪ್ರತಿ ಅಭ್ಯರ್ಥಿಗೆ ಒಂದು ಸ್ಥಾನವನ್ನು ನೀಡಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಹೆಸರುಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದ್ದರೆ, ಪಕ್ಷದ ನಾಯಕರ ಪ್ರಕಾರ ಇನ್ನೆರಡು ದಿನಗಳಲ್ಲಿ ಬಿಜೆಪಿಯ ಮೊದಲ ಪಟ್ಟಿಯನ್ನು ನಿರೀಕ್ಷಿಸಲಾಗಿದೆ. ಆಡಳಿತ ಪಕ್ಷದಲ್ಲಿ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆದಿದೆ.

ಬಿಜೆಪಿ ನಕಲಿ ಅಭ್ಯರ್ಥಿಗಳ ಪಟ್ಟಿ ವೈರಲ್
ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳವಾರ ವೈರಲ್ ಆಗಿತ್ತು. ಒಟ್ಟು 100 ಕ್ಷೇತ್ರಗಳ ಅಭ್ಯರ್ಥಿಗಳನ್ನು ಈ ಪಟ್ಟಿಯಲ್ಲಿ ಘೋಷಿಸಲಾಗಿತ್ತು. ಆದರೆ, ಈ ಪಟ್ಟಿಯನ್ನು ಸುಳ್ಳು ಎಂದಿರುವ ಬಿಜೆಪಿ ನಾಯಕರು ಬಿಜೆಪಿಯಿಂದ ಯಾವುದೇ ಪಟ್ಟಿ ಬಿಡುಗಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾತಂತ್ರವೆಂದರೆ ಏನೆಂದು ತಿಳಿಯದ ಗುಲಾಮಿ ಮನಸ್ಥಿತಿಯ ಕಾಂಗ್ರೆಸ್ ಸುಳ್ಳು ಸುದ್ದಿಯನ್ನು ಹರಡುವುದೇ ರಾಜಕೀಯ ಎಂದುಕೊಂಡಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ, ಈಗ ಹರಿದಾಡುತ್ತಿರುವುದು ನಕಲಿ ಪಟ್ಟಿ ಎಂದು ಸಿಟಿ ರವಿ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ.
ಚುನಾವಣೆ ದಿನಾಂಕ ಮತ್ತು ಮತ ಎಣಿಕೆ
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದರು.












Click it and Unblock the Notifications