ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಒಪ್ಪಿಗೆ ನೀಡದ ಚುನಾವಣಾ ಆಯೋಗ

ಬೆಂಗಳೂರು, ಏಪ್ರಿಲ್ 21; ಚುನಾವಣಾ ದಿನಾಂಕ ಘೋಷಣೆಯಾಗಿದ್ದರೂ ಸಹ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನೀಡಲು ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಕಾಯಬೇಕಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರಂದು ಚುನಾವಣೆ ನಡೆಯಲಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಂತೆ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ತೀರ್ಮಾನಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ಆಯೋಗದ ಒಪ್ಪಿಗೆ ಪಡೆದು ವರ್ಗಾವಣೆ ಆರಂಭಿಸುವ ಭರವಸೆ ನೀಡಿದ್ದರು. ಆದರೆ ಆಯೋಗ ಈಗ ಪ್ರಕ್ರಿಯೆ ಕೈಗೊಳ್ಳಲು ನಿರಾಕರಿಸಿದೆ.

Karnataka Assembly Elections 2023 Election Commission Not Approved For Teachers Transfer

ರಿತೇಶ್ ಕುಮಾರ್ ಸಿಂಗ್ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚುನಾವಣಾ ಆಯೋಗಕ್ಕೆ ಶಿಕ್ಷಕರ ವರ್ಗಾವಣೆಗೆ ಅನುಮೋದನೆ ನೀಡುವ ಕುರಿತು ಪತ್ರವನ್ನು ಬರೆದಿದ್ದರು. ಆದರೆ ಚುನಾವಣಾ ಆಯೋಗ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈಗ ವರ್ಗಾವಣೆ ಪ್ರಕ್ರಿಯೆ ಬೇಡ ಎಂದು ಮೌಖಿಕವಾಗಿ ಸೂಚನೆ ನೀಡಿದೆ.

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ತಮ್ಮ ಪತ್ರದಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳಡಿಯಲ್ಲಿ ವರ್ಗಾವಣೆಗಾಗಿ ಶಿಕ್ಷಕರಿಂದ 88,324 ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿಯನ್ವಯ ಹಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ ಸಾಮಾನ್ಯ ವರ್ಗಾವಣೆ (ಕೌನ್ಸಿಲಿಂಗ್ ಮುಖಾಂತರ ಮಾತ್ರ) ಪ್ರಕ್ರಿಯೆಯನ್ನು ಮುಂದುವರೆಸಲು ಸಕ್ಷಮ ಪ್ರಾಧಿಕಾರ ಅನುಮೋದನೆ ನೀಡಿರುತ್ತದೆ ಎಂದು ಉಲ್ಲೇಖಿಸಿದ್ದರು.

Karnataka Assembly Elections 2023 Election Commission Not Approved For Teachers Transfer

ಶೈಕ್ಷಣಿಕ ವರ್ಷ ಆರಂಭ; ವಿಧಾನಸಭೆ ಚುನಾವಣೆ ಪೂರ್ಣಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವಾಗ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತದೆ. ಆದ್ದರಿಂದ ಈಗ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ವರ್ಗಾವಣೆಗೆ ಅವಕಾಶ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿತ್ತು.

ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ ಶಿಕ್ಷಕರು ವರ್ಗಾವಣೆಗೊಂಡ ಸ್ಥಳಕ್ಕೆ ನೂತನ ಶೈಕ್ಷಣಿಕ ವರ್ಷದ ಆರಂಭದಿಂದ ಅಂದರೆ 1ನೇ ಜೂನ್-2023ರ ನಂತರ ಕರ್ತವ್ಯಕ್ಕೆ ಹಾಜರಾಗುವ ಷರತ್ತಿಗೊಳಪಟ್ಟು ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ 2022-3ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು / ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಸಾಮಾನ್ಯ ವರ್ಗಾವಣೆಗಳನ್ನು (ಕೌನ್ಸಿಲಿಂಗ್ ಮುಖಾಂತರ ಮಾತ್ರ ಮಾಡಲಾಗುವುದು) ಮುಂದುವರೆಸಲು ಅನುಮತಿ ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಕೆ ಮಾಡಿದ್ದ ಶಿಕ್ಷಕರು; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ನೇತೃತ್ವದಲ್ಲಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದರು. ಶಿಕ್ಷಕರ ವರ್ಗಾವಣೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿದ್ದರು. ನೀತಿ ಸಂಹಿತೆ ಜಾರಿಗೆ ಬಂದರೂ ಚುನಾವಣಾ ಆಯೋಗದ ಅನುಮತಿ ಪಡೆದು ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಭರವಸೆ ನೀಡಲಾಗಿತ್ತು.

ಬಳಿಕ ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆಯಲಾಗಿತ್ತು. 26/12/2022ರಂದು 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತ ಪ್ರಾಥಮಿಕ ಶಾಲಾ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಸಾಮಾನ್ಯ ವರ್ಗಾವಣೆಗಳನ್ನು ಕೈಗೊಳ್ಳಲು ಮಾರ್ಗಸೂಚಿ ಸಹಿತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ, ತಾಂತ್ರಿಕ ದೋಷಗಳ ಕಾರಣದಿಂದಾಗಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ನಿರ್ಧರಿಸಲಾಗಿತ್ತು.

ಆದರೆ ವರ್ಗಾವಣೆಗಾಗಿ ಶಿಕ್ಷಕರಿಂದ 88,324 ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿಯನ್ವಯ ಹಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ ಸಾಮಾನ್ಯ ವರ್ಗಾವಣೆ (ಕೌನ್ಸಿಲಿಂಗ್ ಮುಖಾಂತರ ಮಾತ್ರ) ಪ್ರಕ್ರಿಯೆಯನ್ನು ಮುಂದುವರೆಸಲು ಸಕ್ಷಮ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಚುನಾವಣಾ ಆಯೋಗಕ್ಕೆ ಪತ್ರದಲ್ಲಿ ವಿವರಣೆ ನೀಡಲಾಗಿತ್ತು. ಈಗ ವರ್ಗಾವಣೆಗೆ ಒಪ್ಪಿಗೆ ನೀಡಲು ಆಯೋಗ ನಿರಾಕರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+