Karnataka Assembly Elections 2023: ಮಾರ್ಚ್ 17 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ- ಸಿದ್ದರಾಮಯ್ಯ ಮಾಹಿತಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 17 ರಂದು ಪ್ರಕಟಿಸುವ ಸಾಧ್ಯತೆಯಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು.
ದಾವಣಗೆರೆ, ಮಾರ್ಚ್ 13: ಕರ್ನಾಟಕ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 17 ರಂದು ಪ್ರಕಟಿಸುವ ಸಾಧ್ಯತೆಯಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು. ಮೇ ವೇಳೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು. ಟಿಕೆಟ್ ಹಂಚಿಕೆಗೆ ಇದೇ ಪ್ರಮುಖ ಮಾನದಂಡವಾಗಿದೆ ಎಂದು ಅವರು ತಿಳಿಸಿದರು.
'ಮಾರ್ಚ್ 17 ರಂದು ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬೀಳಲಿದೆ. ಏಕೆಂದರೆ ಅಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ಇದೆ. ಆಗ ಮೊದಲ ಪಟ್ಟಿಯನ್ನು ಅಂತಿಮಗೊಳಿಸಬಹುದು' ಎಂದು ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಗೆಲುವೇ ಮಾನದಂಡವಾಗಿದೆ. ಸಮೀಕ್ಷೆಗಳಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಅಂತವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದೇವೆ' ಎಂದರು.
'ಪಕ್ಷದ ಸ್ಕ್ರೀನಿಂಗ್ ಸಮಿತಿಯು ಆಕಾಂಕ್ಷಿಗಳ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿದ್ದು, ಸ್ಕ್ರೀನಿಂಗ್ ಸಮಿತಿಯ ಅಭಿಪ್ರಾಯವನ್ನು ಅಂತಿಮ ಪರಿಶೀಲನೆಗಾಗಿ ಎಐಸಿಸಿಯ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುವುದು' ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು.
ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ.

ಕಾಂಗ್ರೆಸ್ ರಾಜ್ಯ ನಾಯಕರು ಮತ್ತು ಸ್ಕ್ರೀನಿಂಗ್ ಕಮಿಟಿ ಸದಸ್ಯರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಳೆದ ವಾರ ಸಮಾಲೋಚನೆ ನಡೆಸಿದ್ದಾರೆ. ಅಂತಿಮಗೊಂಡ ನಂತರ, ಅಭ್ಯರ್ಥಿಗಳ ಹೆಸರನ್ನು ಅಂತಿಮ ಅನುಮೋದನೆಗಾಗಿ ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗುತ್ತದೆ ಎಂದು ಕೈ ನಾಯಕರು ಮಾಹಿತಿ ನೀಡಿದ್ದಾರೆ.
ಸರಣಿ ಸಭೆಗಳ ನಂತರ ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಸದಸ್ಯರು ಕಳೆದ ಮಂಗಳವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದ್ದರು. ಮಂಗಳವಾರ ಮಧ್ಯಾಹ್ನ ಆರಂಭವಾದ ಸಭೆ ರಾತ್ರಿ 10ರವರೆಗೆ ನಡೆದಿತ್ತು.
ಕಾಂಗ್ರೆಸ್ ಮೂಲಗಳ ಪ್ರಕಾರ, ಮೊದಲ ಪಟ್ಟಿಯಲ್ಲಿ 120 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಪಕ್ಷವು ಯೋಜಿಸುತ್ತಿದೆ. ಅದರಲ್ಲಿ ಸುಮಾರು 90 ಹೆಸರುಗಳನ್ನು ಮೊದಲೇ ಅಂತಿಮಗೊಳಿಸಲಾಗಿತ್ತು. ಉಳಿದ ಸ್ಥಾನಗಳಿಗೆ ಚರ್ಚೆ ನಡೆದಿತ್ತು.
ಸ್ಕ್ರೀನಿಂಗ್ ಸಮಿತಿಯ ಅಧ್ಯಕ್ಷ ಮೋಹನ್ ಪ್ರಕಾಶ್ ನಂತರ ಅನುಮೋದನೆಗಾಗಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಗೆ ಪಟ್ಟಿಯನ್ನು ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.
'ನಾವು ಮಂಗಳವಾರ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿದ್ದೇವೆ. 75 ರಷ್ಟು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಉಳಿದವುಗಳನ್ನು ನಾವು ಅಂತಿಮಗೊಳಿಸುತ್ತಿದ್ದೇವೆ' ಎಂದು ಶಿವಕುಮಾರ್ ಹೇಳಿದ್ದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65ಕ್ಕಿಂತ ಹೆಚ್ಚು ಸ್ಥಾನಗಳನ್ನು ದಾಟುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದರು.
ವಿಧಾನಸಭೆ ಚುನಾವಣೆಗೆ ಜೆಡಿಎಸ್ ಈಗಾಗಲೇ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications