ಕರ್ನಾಟಕ ಚುನಾವಣೆ; 10 ಲಕ್ಷಕ್ಕಿಂತ ಹೆಚ್ಚು ಹಣ ಸಿಕ್ಕರೆ ಐಟಿ ತನಿಖೆ
ಬೆಂಗಳೂರು, ಏಪ್ರಿಲ್ 17; ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ಮಾರ್ಚ್ 29ರಂದು ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ಏಪ್ರಿಲ್ 20ರ ತನಕ ನಾಮಪತ್ರ ಸಲ್ಲಿಕೆ ಮಾಡಲು ಅವಕಾಶವಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ರಾಜ್ಯದಲ್ಲಿ ಹಣದ ಹರಿವಿನ ಬಗ್ಗೆ ವಿಶೇಷ ಗಮನ ನೀಡಲಾಗಿದೆ.
ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಅಭ್ಯರ್ಥಿಗಳು, ಅವರ ಬೆಂಬಲಿಗರು ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಚುನಾವಣಾ ವೆಚ್ಚ ವೀಕ್ಷಕರು, ಯಾವುದೇ ಅಕ್ರಮ ನಡೆಯದಂತೆ ಮತ್ತು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿದ್ದಾರೆ.

ಚುನಾವಣಾ ಸಮಯದಲ್ಲಿನ ಹಣ ಹಂಚಿಕೆ, ಹಣ ಸಾಗಣೆ ಮೇಲೆ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ಕಣ್ಗಾವಲು ವಹಿಸಿದ್ದಾರೆ. ಒಂದು ವೇಳೆ 10 ಲಕ್ಷಕ್ಕಿಂತ ಅಧಿಕ ಹಣ ಸಾಗಣೆ ಪ್ರಕರಣಗಳು ಬೆಳಕಿಗೆ ಬಂದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಣದ ಮೂಲದ ಬಗ್ಗೆ ತನಿಖೆ ನಡೆಸಲಿದ್ದಾರೆ.
ಎಷ್ಟು ಹಣ ವಶಕ್ಕೆ?; ಮಾರ್ಚ್ 29ರಂದು ಕರ್ನಾಟಕದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಇಲ್ಲಿಯ ತನಕ ರಾಜ್ಯದಲ್ಲಿ 71.27 ಕೋಟಿ ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 55.11 ಕೋಟಿ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 16.15 ಕೋಟಿ ರೂ. ಹಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಹೆಚ್ಚಿನ ಪ್ರಮಾಣದ ಹಣವನ್ನು ಪೊಲೀಸರು ವಶಕ್ಕೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಲು ತೀರ್ಮಾನಿಸಿದ್ದಾರೆ. ಪೊಲೀಸರು ಇನ್ನು ಮುಂದೆ 10 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ವಶಕ್ಕೆ ಪಡೆದರೆ ಆದಾಯ ತೆರಿಗೆ ಇಲಾಖೆಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು.
ಈ ಕುರಿತು ಕರ್ನಾಟಕದ ಪೊಲೀಸ್ ಇಲಾಖೆಗೆ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ನಿರ್ದೇಶಕ (ಚುನಾವಣಾ ನೋಡೆಲ್ ಅಧಿಕಾರಿ) ಪ್ರಿಯದರ್ಶಿ ಮಿಶ್ರಾ ಲಿಖಿತ ಸೂಚನೆ ನೀಡಿದ್ದಾರೆ. ಪೊಲೀಸರು ವಶಪಡಿಸಿಕೊಳ್ಳುವ ನಗದು ಹಣದ ಕುರಿತು ಮೊದಲು ಕೋರ್ಟ್‌ಗೆ ಮಾಹಿತಿ ನೀಡಬೇಕು. ಬಳಿಕ ಈ ಕುರಿತು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಿದ್ದು, ಅವರು ತನಿಖೆ ನಡೆಸಲಿದ್ದಾರೆ.
ಎಷ್ಟು ಹಣ ಸಾಗಣೆ ಮಾಡಬಹುದು?; ಮಾರ್ಚ್ 29ರಿಂದ ಮೇ 14ರ ತನಕ ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ಈ ಅವಧಿಯಲ್ಲಿ ಎಲ್ಲಾ ಜಿಲ್ಲೆಗಳ ಗಡಿಗಳಲ್ಲಿ ಚೆಕ್‌ಪೋಸ್ಟ್ ತೆರೆದು ವಾಹನಗಳ ತಪಾಸಣೆಯನ್ನು ಚುನಾವಣಾ ಆಯೋಗದ ಸೂಚನೆಯಂತೆ ನಡೆಸಲಾಗುತ್ತಿದೆ.
ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಒಬ್ಬ ವ್ಯಕ್ತಿ ಗರಿಷ್ಠ 50 ಸಾವಿರ ರೂ. ತನಕ ಸಾಗಣೆ ಮಾಡಬಹುದಾಗಿದೆ. ಇದಕ್ಕಿಂತ ಹೆಚ್ಚಿನ ಹಣವನ್ನು ಸಾಗಣೆ ಮಾಡುವಾಗ ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ದಾಖಲೆ ಇಲ್ಲವಾದಲ್ಲಿ ಹಣವನ್ನು ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಳ್ಳಬಹುದು.
ಆಸ್ಪತ್ರೆ, ಶುಭ ಸಮಾರಂಭ ಸೇರಿದಂತೆ ವೈಯಕ್ತಿಕ ವೆಚ್ಚಕ್ಕಾಗಿ ಹಣ ತೆಗೆದುಕೊಂಡು ಹೋಗಲು ಯಾವುದೇ ಅಡ್ಡಿ ಇಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆದರೆ ಅಧಿಕಾರಿಗಳು ಕೇಳಿದಾಗ ಸೂಕ್ತ ದಾಖಲೆಗಳನ್ನು ನೀಡಬೇಕಾಗುತ್ತದೆ. ಚುನಾವಣಾ ಆಯೋಗದ ಸಿಬ್ಬಂದಿ, ಪೊಲೀಸರು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಮಾಡುತ್ತಾರೆ.
ಒಂದು ವೇಳೆ 10 ಲಕ್ಷಕ್ಕಿಂತ ಅಧಿಕ ಹಣ ಪತ್ತೆಯಾದರೆ ಪೊಲೀಸರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಾರೆ. ಆಗ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹಣ ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ವಿಚಾರಣೆಯನ್ನು ಪೊಲೀಸರ ಸಹಕಾರದಲ್ಲೇ ನಡೆಸುತ್ತಾರೆ, ದಾಖಲೆಗಳ ಪರಿಶೀಲನೆ ನಡೆಸುತ್ತಾರೆ. ವ್ಯವಹಾರದ ಉದ್ದೇಶಕ್ಕಾಗಿ ಸಾಗಣೆ ಮಾಡುವ ಹಣವಾದರೆ ವಿನಾಯಿತಿ ಸಿಗಲಿದೆ. ಇಲ್ಲವಾದಲ್ಲಿ ಹೆಚ್ಚುವರಿ ತನಿಖೆಯನ್ನು ಎದುರಿಸಬೇಕಾಗುತ್ತದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ










Click it and Unblock the Notifications