ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Assembly elections: ಚುನಾವಣೆಯಲ್ಲಿ ಜೆಡಿಎಸ್ 20 ರಿಂದ 22 ಸ್ಥಾನ ಗೆಲ್ಲಬಹುದು; ಸಿದ್ದರಾಮಯ್ಯ ಭವಿಷ್ಯ

ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ನಡೆಸಿದ ಜೆಡಿಎಸ್‌ ಅನ್ನೇ ಸಿದ್ದರಾಮಯ್ಯ ಟೀಕಿಸಿದ್ದು, ಜೆಡಿಎಸ್ ಪಕ್ಷವನ್ನು ನಂಬಬೇಡಿ ಎಂದಿದ್ದಾರೆ.

|
Google Oneindia Kannada News

ಬೆಂಗಳೂರು, ಜನವರಿ. 27: ಜೆಡಿಎಸ್‌ನ ನಂಬಬೇಡಿ, ಮುಂದಿನ ಚುನಾವಣೆಯಲ್ಲಿ ಅವರ ಪಕ್ಷದ 20 ರಿಂದ 22 ಜನ ಗೆದ್ದರೆ ಅದೇ ಹೆಚ್ಚು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, "ಜೆಡಿಎಸ್‌ನ ನಂಬಬೇಡಿ, ಇಲ್ಲಿ ನಮಗೆ ಮತ್ತು ಜೆಡಿಎಸ್‌ಗೆ ಪೈಪೋಟಿಯಿದೆ. ನಾವು ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದೆವು, ಅವರಿಂದ ಶಾಸಕರನ್ನು ಸರಿಯಾಗಿ ನೋಡಿಕೊಳ್ಳಲು ಆಗದೆ ಹೋಗಿದ್ದಕ್ಕೆ 17 ಜನ ಬಿಜೆಪಿಗೆ ಹೋದರು" ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಹಠಕ್ಕೆ ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ: ಸಿದ್ದರಾಮಯ್ಯ ಆಕ್ರೋಶರಾಜ್ಯ ಸರ್ಕಾರ ಹಠಕ್ಕೆ ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ: ಸಿದ್ದರಾಮಯ್ಯ ಆಕ್ರೋಶ

"ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರ ಬೀಳಲು ನಾನು ಕಾರಣ ಎಂದು ಹೇಳುತ್ತಿದ್ದಾರೆ. ನಮ್ಮ ಶಾಸಕರನ್ನು ನಾನು ಕಳಿಸಿದ್ದಾದರೆ, ಜೆಡಿಎಸ್‌ ಶಾಸಕರನ್ನು ಕಳಿಸಿದ್ದು ಯಾರಪ್ಪ..? ನೀವೆ ಕಳಿಸಿದ್ರಾ..? ನೀವು ವೆಸ್ಟೆಂಡ್‌ ಹೋಟೆಲ್‌ನಲ್ಲಿ ಉಳಿದುಕೊಂಡು ಅಧಿಕಾರ ಮಾಡಲು ಆಗುತ್ತಾ..? ಜನರು, ಮಂತ್ರಿಗಳು, ಅಧಿಕಾರಿಗಳು, ಶಾಸಕರನ್ನು ಭೇಟಿ ಮಾಡಿದರೆ ಮಾತ್ರ ಒಳ್ಳೆ ಅಧಿಕಾರ ನೀಡಲು ಸಾಧ್ಯವಾಗುತ್ತದೆ. ಗಾಜಿನ ಮನೆಯಲ್ಲಿ ಕೂತು ಅಧಿಕಾರ ನಡೆಸಲು ಹೊರಟದ್ದೆ ಕುಮಾರಸ್ವಾಮಿ ತಪ್ಪು" ಎ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Karnataka assembly elections 2023: JDS can win max 20 seats: Siddaramaiah

"ನಮ್ಮ ಪಕ್ಷದಿಂದ 80 ಶಾಸಕರು ಆಯ್ಕೆಯಾಗಿದ್ದರೂ, 37 ಜನ ಶಾಸಕರು ಇದ್ದ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದೆವು. ಇದಕ್ಕೆ ಕಾರಣ ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬುದು. ಆದರೆ ಕುಮಾರಸ್ವಾಮಿ ಕೈಲಿ ಅಧಿಕಾರ ಉಳಿಸಿಕೊಳ್ಳಲು ಆಗಲಿಲ್ಲ. ಕೊಟ್ಟ ಕುದುರೆ ಏರಲಾರದವ ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಅಲ್ಲಮಪ್ರಭುಗಳ ಮಾತುಗಳು ಅವರಿಗೆ ಹೊಂದಿಕೆಯಾಗುತ್ತದೆ" ಎಂದು ವ್ಯಂಗ್ಯವಾಡಿದ್ದಾರೆ.

"ಮಾತೆತ್ತಿದರೆ ನಾವು 123 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ಜೆಡಿಎಸ್‌ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಸಾಧ್ಯವೇ ಇಲ್ಲ. ನಾವಿದ್ದಾಗಲೇ 59 ಸ್ಥಾನ ಗೆದ್ದಿತ್ತು, ನಾವು ಬಿಟ್ಟ ಮೇಲೆ 29 ಸ್ಥಾನ ಬಂದಿತ್ತು. ಈ ಬಾರಿ 20 ರಿಂದ 22 ಜನ ಗೆದ್ದರೆ ಅದೇ ಹೆಚ್ಚು. ಇಂಥವರ ಕೈಗೆ ಅಧಿಕಾರ ಕೊಡುತ್ತೀರ..?" ಎಂದು ಮಂಟ್ಯದ ಜನತೆಗೆ ಪ್ರಶ್ನಿಸಿದ್ದಾರೆ.

Karnataka assembly elections 2023: JDS can win max 20 seats: Siddaramaiah

"ಮಂಡ್ಯದಲ್ಲಿ ರಾಜಕೀಯ ಬದಲಾವಣೆ ಆದರೆ ಇಡೀ ರಾಜ್ಯದಲ್ಲಿ ಬದಲಾವಣೆ ಆಗುತ್ತದೆ. ಕಳೆದ ಬಾರಿ 7 ಸ್ಥಾನಗಳಲ್ಲಿ ನಮಗೆ ಒಂದೂ ಸ್ಥಾನ ಸಿಗಲಿಲ್ಲ, ಈ ಬಾರಿ 7 ಸ್ಥಾನಗಳಲ್ಲಿ ಕನಿಷ್ಠ 5 ರಿಂದ 6 ಸ್ಥಾನಗಳನ್ನು ಗೆಲ್ಲಿಸಿಕೊಡುವ ಕೆಲಸ ಮಾಡಿ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ನಾವು ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ, ಇದನ್ನು ನಾನು ನಾಡಿನ ಜನರ ನಾಡಿ ಮಿಡಿತವನ್ನು ನೋಡಿ ಹೇಳುತ್ತಿದ್ದೇನೆ. ನಾವು ಅಧಿಕಾರಕ್ಕೆ ಬಂದ ವೇಳೆ ಈ ಭಾಗದಿಂದಲೂ ಶಾಸಕರು ನಮ್ಮ ಜೊತೆ ಇರಬೇಕು, ನಿಮಗೆ ಯಾವುದೇ ಕಷ್ಟ ಬಂದರೂ ನಾವು ನಿಮ್ಮ ಜೊತೆ ಇರುತ್ತೇವೆ" ಎಂದು ಭರವಸೆ ನೀಡಿದ್ದಾರೆ.

English summary
karnataka assembly elections 2023: Don't trust JD S , they can win max 20 to 22 seats in election says Congress leader Siddaramaiah. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X