Karnataka Assembly Elections 2023: ಕಾಂಗ್ರೆಸ್ ಟಿಕೆಟ್‌ಗಾಗಿ ತೀವ್ರಗೊಂಡ ಲಾಬಿ- ಇಲ್ಲಿದೆ ಇನ್‌ಸೈಡ್ ಸ್ಟೋರಿ
ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ತಮ್ಮನ್ನು ಕಡೆಗಣಿಸಿರುವ ಬಗ್ಗೆ ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ಪಕ್ಷದ ಹೈಕಮಾಂಡ್‌ಗೆ ದೂರು ನೀಡಿದ್ದಾರೆ. ಇಲ್ಲಿದೆ ಇನ್‌ಸೈಡ್ ಸ್ಟೋರಿ
ಬೆಂಗಳೂರು, ಮಾರ್ಚ್ 14: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ತಮ್ಮನ್ನು ಕಡೆಗಣಿಸಿರುವ ಬಗ್ಗೆ ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ಪಕ್ಷದ ಹೈಕಮಾಂಡ್‌ಗೆ ದೂರು ನೀಡಿದ್ದಾರೆ. ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಯುಗಾದಿಯೊಳಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಲಿದೆ ಎಂದು ಹಿರಿಯ ನಾಯಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹಿರಿಯ ಮುಖಂಡರಿಂದ ಖರ್ಗೆ ಭೇಟಿ
ಹಿರಿಯ ಮುಖಂಡರಾದ ಕೆ ಎಚ್ ಮುನಿಯಪ್ಪ, ಎಚ್ ಕೆ ಪಾಟೀಲ್ ಮತ್ತು ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.
ಸೋಮವಾರದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಲು ಎಲ್ಲ ನಾಯಕರು ನಿರಾಕರಿಸಿದರು. ಪಕ್ಷದ ಟಿಕೆಟ್ ಹಂಚಿಕೆ ಮಾಡುವಾಗ ಕಾಂಗ್ರೆಸ್ಸಿನ ನಿಷ್ಠಾವಂತ ನಾಯಕರನ್ನು ಕಡೆಗಣಿಸಬೇಡಿ ಎಂದು ಈ ನಾಯಕರು ಖರ್ಗೆ ಅವರನ್ನು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.

ಹಿರಿಯ ನಾಯಕರ ಸಲಹೆ ಪಡೆದಿಲ್ಲ
ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಪಕ್ಷದ ಹಲವು ಹಿರಿಯ ನಾಯಕರ ಸಲಹೆ ಪಡೆದಿಲ್ಲ ಎಂದು ಖರ್ಗೆ ಅವರಿಗೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಬ್ಬರೂ ಅಭ್ಯರ್ಥಿಗಳನ್ನು ನಿರ್ಧರಿಸುತ್ತಿದ್ದಾರೆ. ಇವರಿಬ್ಬರೂ ಇತರರನ್ನು ಸರಿಯಾಗಿ ಸಮಾಲೋಚಿಸಲಿಲ್ಲ ಎಂಬ ಆರೋಪಗಳನ್ನು ಖರ್ಗೆ ಅವರೊಂದಿಗೆ ಹಂಚಿಕೊಂಡಿದ್ದಾರೆ.
ಬೇರೆ ಪಕ್ಷಗಳಿಂದ ಹೆಚ್ಚಿನ ಸಂಖ್ಯೆಯ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗಬಹುದು. ಅವರು ಟಿಕೆಟ್ ಬಯಸಿ ಕಾಂಗ್ರೆಸ್‌ಗೆ ಬರುವ ಸಾಧ್ಯತೆ ಇದೆ. ಟಿಕೆಟ್ ನೀಡುವಾಗ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಬಾರದು ಎಂದು ಸಲಹೆ ನೀಡಿದರು.

ಎಂ ಬಿ ಪಾಟೀಲ್ ಅಸಮಾಧಾನ
ಪ್ರತ್ಯೇಕವಾಗಿ, ಹಿರಿಯ ಲಿಂಗಾಯತ ನಾಯಕ ಮತ್ತು ಮಾಜಿ ಸಚಿವ ಎಂ ಬಿ ಪಾಟೀಲ್ ಕೂಡ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷದ ಟಿಕೆಟ್ ನಿರ್ಧರಿಸುವಾಗ ತಮ್ಮನ್ನು ಕಡೆಗಣಿಸಲಾಗಿದೆ ಎಂದು ದೂರಿದರು. ಪಕ್ಷದ ಅಭ್ಯರ್ಥಿಗಳನ್ನು ನಿರ್ಧರಿಸಲು ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಜ್ಯ ಪ್ರಚಾರ ಸಮಿತಿಯ ಸಂಚಾಲಕ ಹಾಗೂ ಸ್ಕ್ರೀನಿಂಗ್ ಕಮಿಟಿ ಸದಸ್ಯರೂ ಆಗಿರುವ ಪಾಟೀಲ್, ಸ್ಕ್ರೀನಿಂಗ್ ಕಮಿಟಿಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚಿಸುವಾಗ ಸರಿಯಾಗಿ ಸಮಾಲೋಚನೆ ನಡೆಸಿಲ್ಲ ಎಂದು ಹೇಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ವೀರಶೈವ ಲಿಂಗಾಯತ ಸಮುದಾಯಕ್ಕೆ ಕನಿಷ್ಠ 65 ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ ಪಾಟೀಲ್, ಪಕ್ಷದಲ್ಲಿ ಲಿಂಗಾಯತ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಖರ್ಗೆ ಅವರನ್ನು ಒತ್ತಾಯಿಸಿದರು.
ಏತನ್ಮಧ್ಯೆ, ಮತ್ತೊಬ್ಬ ಹಿರಿಯ ಲಿಂಗಾಯತ ನಾಯಕ ಶಾಮನೂರು ಶಿವಶಂಕರಪ್ಪ ಕೂಡ ದೆಹಲಿಗೆ ಭೇಟಿ ನೀಡಿ ಖರ್ಗೆ ಅವರನ್ನು ಭೇಟಿ ಮಾಡಿ ಶೀಘ್ರದಲ್ಲೇ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ನೀಡಬೇಕೆಂಬ ಬೇಡಿಕೆಯನ್ನು ಇಡುವ ಸಾಧ್ಯತೆಯಿದೆ.

ಶಿವಕುಮಾರ್ ಹೇಳಿದ್ದೇನು?
ಪಕ್ಷವು ಆರು ತಿಂಗಳ ಮುಂಚಿತವಾಗಿ ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಭರವಸೆ ನೀಡಿತ್ತು. 224 ಸ್ಥಾನಗಳ ಪೈಕಿ 170 ಸ್ಥಾನಗಳಿಗೆ ಕಾಂಗ್ರೆಸ್ ಹೆಸರನ್ನು ಅಂತಿಮಗೊಳಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ. 'ಈ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ (ಸಿಇಸಿ) ಕಳುಹಿಸಲಾಗುತ್ತಿದೆ. ಅವರು ಶೀಘ್ರದಲ್ಲೇ ಮೊದಲ ಪಟ್ಟಿಯನ್ನು ಪ್ರಕಟಿಸುತ್ತಾರೆ. ನಾವು ಇನ್ನೂ ಚರ್ಚೆ ನಡೆಸುತ್ತಿದ್ದೇವೆ. ಉಳಿದ ಅಭ್ಯರ್ಥಿಗಳ ಕುರಿತು ಒಮ್ಮತವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ' ಎಂದು ಶಿವಕುಮಾರ್ ಹೇಳಿದ್ದಾರೆ.

ಜಟಿಲಗೊಂಡ ಆಯ್ಕೆ ಪ್ರಕ್ರಿಯೆ
60-65 ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷವು ತೀವ್ರ ತೊಂದರೆ ಎದುರಿಸುತ್ತಿದೆ ಎಂದು ತಿಳಿದುಬಂದಿದೆ. ಪಕ್ಷವು ತನ್ನ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಿದೆ. ಒಮ್ಮತವನ್ನು ಖಾತ್ರಿಪಡಿಸಿಕೊಂಡು ಮುಂದಿನ ಹೆಜ್ಜೆ ಇಡಬೇಕಿದೆ. ಹೀಗೆ ಆದಾಗ ಮಾತ್ರ, ಬಿಜೆಪಿ ಮತ್ತು ಜೆಡಿಎಸ್‌ಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಬಹುದೆಂದು ತಜ್ಞರು ಹೇಳಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications