Lokpoll Opinion Survey; ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಬಿಜೆಪಿಗೆ ಆಘಾತ

ಬೆಂಗಳೂರು, ಏಪ್ರಿಲ್‌ 18; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ. ಕಾಂಗ್ರೆಸ್ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

LokPoll ಮಾರ್ಚ್‌ ತಿಂಗಳಿನಲ್ಲಿ ರಾಜ್ಯದಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಸಮೀಕ್ಷೆಯ ವರದಿ ಪ್ರಕಾರ ಕಾಂಗ್ರೆಸ್ ಪಕ್ಷ 128-131 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 113.

Karnataka Assembly Elections 2023 LokPoll Mega Survey

ಸಮೀಕ್ಷೆಯ ಪ್ರಕಾರ ರಾಜ್ಯ ಆಡಳಿತ ಪಕ್ಷ ಬಿಜೆಪಿ 66-69 ಸ್ಥಾನಗಳಲ್ಲಿ ಜಯಗಳಿಸಲಿದೆ. LokPoll ಫೆಬ್ರವರಿ ತಿಂಗಳಿನಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಬಿಜೆಪಿ 77-83 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವರದಿ ಬಂದಿತ್ತು. ಇದಕ್ಕೆ ಹೋಲಿಕೆ ಮಾಡಿದರೆ ಪಕ್ಷ ಮಾರ್ಚ್ ತಿಂಗಳ ಸಮೀಕ್ಷೆಯಲ್ಲಿ ಸ್ಥಾನಗಳನ್ನು ಕಳೆದುಕೊಂಡಿದೆ.

ಜೆಡಿಎಸ್‌ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 21-25 ಸೀಟು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. ಫೆಬ್ರವರಿಯ ಸಮೀಕ್ಷೆಯಲ್ಲಿ ಜೆಡಿಎಸ್ 21-27 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ವರದಿ ಬಂದಿತ್ತು. ಪಕ್ಷ ಶೇ 15-18ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಪಡೆಯಲಿದೆ.

lok-pall-numbers

LokPoll ಸಮೀಕ್ಷೆ ಪ್ರಕಾರ ಇತರರು ಈ ಬಾರಿಯ ಚುನಾವಣೆಯಲ್ಲಿ 0-2 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ. ಶೇ 6-9ರಷ್ಟು ಮತಗಳನ್ನು ಪಡೆಯಲಿದ್ದಾರೆ. ಫೆಬ್ರವರಿಯಲ್ಲಿ ನಡೆದ ಸಮೀಕ್ಷೆಯಲ್ಲಿ ಇತರರು 1-4 ಸ್ಥಾನ ಗೆಲ್ಲಬಹುದು ಎಂದು ಅಂದಾಜಿಸಲಾಗಿತ್ತು.

ಫೆಬ್ರವರಿ ತಿಂಗಳ ಸಮೀಕ್ಷೆ; LokPoll ಫೆಬ್ರವರಿ ತಿಂಗಳಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿ 77-83, ಕಾಂಗ್ರೆಸ್ 116-122, ಜೆಡಿಎಸ್ 21-27 ಮತ್ತು ಇತರರು 1-4 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ ಎಂದು ವರದಿ ಬಂದಿತ್ತು. ಆದರೆ ಮಾರ್ಚ್ ತಿಂಗಳ ಸಮೀಕ್ಷೆಯಲ್ಲಿ ಚುನಾವಣಾ ಚಿತ್ರಣವೇ ಬದಲಾಗಿದೆ. ಏಪ್ರಿಲ್ 20ರ ನಾಮಪತ್ರ ಸಲ್ಲಿಕೆ ಬಳಿಕ ಚುನಾವಣಾ ಕಣ ಮತ್ತಷ್ಟು ರಂಗೇರಲಿದ್ದು, ಏಪ್ರಿಲ್ ತಿಂಗಳ ಸಮೀಕ್ಷೆಯ ಚುನಾವಣಾ ಚಿತ್ರಣ ಕುತೂಹಲಕ್ಕೆ ಕಾರಣವಾಗಿದೆ.

LokPoll ಮಾರ್ಚ್‌ ತಿಂಗಳ ಸಮೀಕ್ಷೆ ಪ್ರಕಾರ ಬಿಜೆಪಿ ಶೇ 30-33ರಷ್ಟು ಮತಗಳನ್ನು ಪಡೆಯಲಿದೆ. ಕಾಂಗ್ರೆಸ್‌ ಪಕ್ಷ ಶೇ 42-45ರಷ್ಟು ಮತಗಳನ್ನು ಗಳಿಸಲಿದೆ. ಜೆಡಿಎಸ್ ಪಕ್ಷವು ಶೇ 15ರಿಂದ 18 ಮತಗಳನ್ನು ಪಡೆಯಲಿದೆ. ಇತರರು ಶೇ 6 ರಿಂದ 9ರಷ್ಟು ಮತಗಳಿಸಲಿದೆ.

ಸಮೀಕ್ಷೆಯ ಪ್ರಕಾರ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ 5-6, ಕಾಂಗ್ರೆಸ್ 27-30 ಮತ್ತು ಜೆಡಿಎಸ್ 20-22 ಸ್ಥಾನದಲ್ಲಿ ಜಯಗಳಿಸಲಿದೆ, ಇತರರು ಯಾವುದೇ ಸ್ಥಾನದಲ್ಲಿ ಜಯಗಳಿಸಲ್ಲ. ಬೆಂಗಳೂರು ನಗರದಲ್ಲಿ ಬಿಜೆಪಿ 9-11, ಕಾಂಗ್ರೆಸ್ 22-24, ಜೆಡಿಎಸ್‌ 1-04 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಮತ್ತು ಇತರರು ಯಾವುದೇ ಸ್ಥಾನ ಗೆಲ್ಲುವುದಿಲ್ಲ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ 8-11, ಕಾಂಗ್ರೆಸ್ 27-30, ಜೆಡಿಎಸ್ 0-02 ಮತ್ತು ಇತರರು 2 ಸ್ಥಾನದಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ 21-23, ಕಾಂಗ್ರೆಸ್ 26-28, ಜೆಡಿಎಸ್ 01-01 ಸೀಟುಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ.

ಕರಾವಳಿ ಕರ್ನಾಟಕ ಭಾಗದಲ್ಲಿ ಬಿಜೆಪಿ 14-16, 8-10, ಜೆಡಿಎಸ್ 0-01 ಸ್ಥಾನಗಳಲ್ಲಿ ಜಯಸಾಧಿಸಲಿದೆ. ಮಧ್ಯ ಕರ್ನಾಟಕದಲ್ಲಿ ಬಿಜೆಪಿ 10-12, ಕಾಂಗ್ರೆಸ್ 09-11 ಮತ್ತು ಜೆಡಿಎಸ್ 1 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಯ ವರದಿ ತಿಳಿಸಿದೆ.

Disclaimer: Article written based on LokPoll survey report

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+