Get Updates
Get notified of breaking news, exclusive insights, and must-see stories!

ಕರ್ನಾಟಕದ ಈ ರಾಜಕೀಯ ನಾಯಕರಿಗೆ ಇದೇ ಕೊನೆ ಚುನಾವಣೆ: ಯಾರ‍್ಯಾರು ನೋಡಿ? ಕಾರಣವೇನು?

ಬೆಂಗಳೂರು, ಜನವರಿ 17: ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ರಾಜಕಾರಣದ ಹಲವು ದಿಗ್ಗಜರಿಗೆ ಮುಂಬರುವ ವಿಧಾನಸಭಾ ಚುನಾವಣೆಯು ಕೊನೆಯ ಚುನಾವಣೆಯಾಗುವ ಸಾಧ್ಯತೆಯಿದೆ. ಏಕೆಂದರೆ ಅವರು ಇನ್ನು ಐದು ವರ್ಷಗಳ ನಂತರ 80 ವರ್ಷಗಳನ್ನು ಪೂರೈಸುವ ಹೊಸ್ತಿಲಲ್ಲಿದ್ದಾರೆ. ಈ ಹಿರಿಯರಲ್ಲಿ ಹೆಚ್ಚಿನವರು ಆ ವೇಳೆಗೆ ಚುನಾವಣಾ ರಾಜಕೀಯದಿಂದ ನಿವೃತ್ತರಾಗಬಹುದು.

ಕಾಂಗ್ರೆಸ್ ಶಾಸಕರಾದ ಆರ್.ವಿ.ದೇಶಪಾಂಡೆ (75), ಕೆ.ಆರ್.ರಮೇಶ್ ಕುಮಾರ್ (73) ಶಾಮನೂರು ಶಿವಶಂಕರಪ್ಪ (91) ಸೇರಿದಂತೆ ಇತರರಿಗೆ ಇದು ಕೊನೆ ಚುನಾವಣೆ ಆಗಬಹುದು. ಬಿಜೆಪಿ ಶಾಸಕರಾದ ಕೆ.ಎಸ್.ಈಶ್ವರಪ್ಪ (74), ಜಿ.ಎಚ್.ತಿಪ್ಪಾರೆಡ್ಡಿ (77) ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ (71) ಅವರಿಗೆ ಈ ಚುನಾವಣೆಯೇ ಕೊನೆಯಾಗುವ ಸಾಧ್ಯತೆ ಇದೆ. ಈ ಶಾಸಕರಲ್ಲಿ ಅನೇಕರು ಚುನಾವಣಾ ರಾಜಕೀಯವನ್ನು ತ್ಯಜಿಸುವ ತಮ್ಮ ಇಚ್ಛೆಯನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ.

 ಈ ಚುನಾವಣೆಯಲ್ಲಿ ಬಿ ಎಸ್‌ ಯಡಿಯೂರಪ್ಪ ಸ್ಪರ್ಧೆ ಇಲ್ಲ

ಈ ಚುನಾವಣೆಯಲ್ಲಿ ಬಿ ಎಸ್‌ ಯಡಿಯೂರಪ್ಪ ಸ್ಪರ್ಧೆ ಇಲ್ಲ

ಮುಂದಿನ ತಿಂಗಳು 80ನೇ ವರ್ಷಕ್ಕೆ ಕಾಲಿಡಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರವಾದ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

 ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದ ಸಿದ್ದರಾಮಯ್ಯ

ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದ ಸಿದ್ದರಾಮಯ್ಯ

2018ರ ವಿಧಾನಸಭಾ ಚುನಾವಣೆಗೆ ಮುನ್ನ ಸಿದ್ದರಾಮಯ್ಯ ಅವರು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಆದರೆ, 2018 ರಲ್ಲಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ಸಿಗೆ ಹೀನಾಯ ಸೋಲಾಯಿತು. ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂಬ ಅವರ ಮಹತ್ವಾಕಾಂಕ್ಷೆಯು ಅವರ ಮನಸ್ಸನ್ನು ಬದಲಾಯಿಸುವಂತೆ ಮಾಡಿತು ಎಂದು ಹೇಳಲಾಗುತ್ತಿದೆ. ಇದೀಗ 2023ರ ವಿಧಾನಸಭಾ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದು ಹೇಳಿದ್ದಾರೆ.

 ಆರ್‌ ವಿ ದೇಶಪಾಂಡೆ ನಿವೃತ್ತಿ ಘೋಷಣೆ?

ಆರ್‌ ವಿ ದೇಶಪಾಂಡೆ ನಿವೃತ್ತಿ ಘೋಷಣೆ?

ಮಾಜಿ ಸಚಿವ ಆರ್‌ ವಿ ದೇಶಪಾಂಡೆ ಅವರು ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದ ನಂತರ ವಿಧಾನಸಭೆಯಲ್ಲಿ ಮಾತನಾಡಿದರು. ಈ ವಿಧಾನಸಭಾ ಚುನಾವಣೆಯ ನಂತರ ನಿವೃತ್ತಿ ಹೊಂದುವುದಾಗಿ ಹೇಳಿದರು. 'ದೇಶಪಾಂಡೆ ಅವರು ಚುನಾವಣೆಗೂ ಮುನ್ನವೇ ನಿವೃತ್ತಿ ಹೊಂದಲು ಬಯಸಿದ್ದರು. ಆದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಾನು ಅವರನ್ನು ಮನವೊಲಿಸಿದೆ' ಎಂದು ಸಿದ್ದರಾಮಯ್ಯ ಹೇಳಿದರು.

 ಶಾಮನೂರು ಶಿವಶಂಕರಪ್ಪ ನಿವೃತ್ತಿ?

ಶಾಮನೂರು ಶಿವಶಂಕರಪ್ಪ ನಿವೃತ್ತಿ?

ಹಾಲಿ ವಿಧಾನಸಭೆಯ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವಂತೆ ಕಾಂಗ್ರೆಸ್‌ ಈಗಾಗಲೇ ಕೇಳಿಕೊಂಡಿದೆ ಎಂದು ಹೇಳಲಾಗುತ್ತಿದೆ. ಅವರ ಕುಟುಂಬದ ಒಬ್ಬರು ಅವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

 ಕೆ ಎಸ್‌ ಈಶ್ವರಪ್ಪ ನಿರ್ಧಾರವೇನು?

ಕೆ ಎಸ್‌ ಈಶ್ವರಪ್ಪ ನಿರ್ಧಾರವೇನು?

ಸಂಪುಟಕ್ಕೆ ಮರಳಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವ ಈಶ್ವರಪ್ಪ ವಿಧಾನಸಭೆ ಚುನಾವಣೆ ಬಳಿಕ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಪಕ್ಷಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ಅದೇ ಆಧಾರದ ಮೇಲೆ ಅವರು ಸಂಪುಟಕ್ಕೆ ಸೇರ್ಪಡೆಗೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಚುನಾವಣೆಗೆ ಟಿಕೆಟ್ ನಿರಾಕರಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಪಕ್ಷದ ನಾಯಕರೇ ತಿಳಿಸಿದ್ದಾರೆ.

 ಮೂರು ತಿಂಗಳಲ್ಲಿ ಬರಲಿದೆ ಚುನಾವಣೆ

ಮೂರು ತಿಂಗಳಲ್ಲಿ ಬರಲಿದೆ ಚುನಾವಣೆ

ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಮೂರು ತಿಂಗಳಲ್ಲಿ ಬರಲಿದೆ. ಆಡಳಿತಾರೂಢ ಬಿಜೆಪಿ ಸರ್ಕಾರ ವಿಜಯ ಸಂಕಲ್ಪ ಯಾತ್ರೆಗೆ ಅಣಿಯಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ರಾಜ್ಯದಾದ್ಯಂತ ಬಸ್‌ ಯಾತ್ರೆ ಕೈಗೊಂಡಿದೆ. ಎಚ್‌ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಪಂಚರತ್ನ ಯಾತ್ರೆ ಕೈಗೊಂಡಿದೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ ಪ್ರಾಬಲ್ಯ ಹೊಂದಿದೆ. ಕರಾವಳಿ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+