ಕಾಂಗ್ರೆಸ್ ಸೇರಲಿದ್ದಾರೆ ಅರಸೀಕೆರೆಯ ಶಿವಲಿಂಗೇಗೌಡ, ಮುಳುಬಾಗಿಲಿನ ಎಚ್. ನಾಗೇಶ್: ದಿನಾಂಕ, ಮಾಹಿತಿ ತಿಳಿಯಿರಿ
ಬೆಂಗಳೂರು, ಹಾಸನ, ಜನವರಿ 13: ಅರಸೀಕೆರೆಯ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ಮುಳುಬಾಗಿಲಿನ ಪಕ್ಷೇತರ ಶಾಸಕ ಎಚ್. ನಾಗೇಶ್ ಅವರು ಕಾಂಗ್ರೆಸ್ ಸೇರುವುದು ಪಕ್ಕಾ ಆಗಿದೆ. ಎಚ್. ನಾಗೇಶ್ ಅವರು ನಾಳೆ (ಜನವರಿ 14) ರಂದು ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜನವರಿ 21 ರಂದು ಹಾಸನ ನಗರಕ್ಕೆ ಬರಲಿರುವ ಪ್ರಜಾಧ್ವನಿ ಯಾತ್ರೆಯಲ್ಲಿ ಶಿವಲಿಂಗೇಗೌಡರು ಕೈ ಹಿಡಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜೆಡಿಎಸ್‌ನ ಪ್ರಭಾವಿ ಶಾಸಕ ಶಿವಲಿಂಗೇಗೌಡ
ಶಿವಲಿಂಗೇಗೌಡರು ಜೆಡಿಎಸ್‌ನ ಪ್ರಭಾವಿ ಶಾಸಕರಲ್ಲಿ ಒಬ್ಬರು. ಜೆಡಿಎಸ್‌ನ ಭದ್ರಕೋಟೆಯಾದ ಹಾಸನ ಜಿಲ್ಲೆಯವರು. ಅವರು ಜೆಡಿಎಸ್‌ನಿಂದ ಬಹುದಿನಗಳಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಜೆಡಿಎಸ್‌ನ ಯಾವುದೇ ಕಾರ್ಯಕ್ರಮಕ್ಕೆ ಅವರು ಹಾಜರಾಗುತ್ತಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಶಿವಲಿಂಗೇಗೌಡರ ನಡುವೆ ಮುಸುಕಿನ ಗುದ್ದಾಟ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಜೆಡಿಎಸ್ ವರಿಷ್ಠರ ಬಗ್ಗೆ ಅಸಮಾಧಾನ ಇರುವುದಾಗಿ ಸ್ವತಃ ಶಿವಲಿಂಗೇಗೌಡರೇ ಬಹಿರಂಗ ಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ನಿಕಟ ಸಂಪರ್ಕವನ್ನೂ ಶಿವಲಿಂಗೇಗೌಡ ಹೊಂದಿದ್ದಾರೆ.

ಅರಸೀಕೆರೆಯಲ್ಲಿ ಕುಸಿಯುತ್ತಿರುವ ಪ್ರಭಾವ
ಹಾಸನ ಜಿಲ್ಲೆಯು ಜೆಡಿಎಸ್‌ನ ಭದ್ರಕೋಟೆ. ಅಲ್ಲಿ ಜೆಡಿಎಸ್ ತನ್ನದೇ ಆದ ಪ್ರಭಾವ ಹೊಂದಿದೆ. ಆ ಜಿಲ್ಲೆ ಸಂಸದ ಪ್ರಜ್ವಲ್ ರೇವಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ ಹಾಗೂ ಎಚ್.ಡಿ.ರೇವಣ್ಣ ಅವರು ಶಾಸಕರಾಗಿದ್ದಾರೆ. ಈ ಜಿಲ್ಲೆಯ ಮಾಜಿ ಪ್ರಧಾನಿ ಪ್ರಧಾನಿ ದೇವೇಗೌಡರ ವರ್ಚಸ್ಸು ಇನ್ನೂ ಇದೆ. ಆದರೆ, ಅರಸೀಕೆರೆಯಲ್ಲಿ ಜೆಡಿಎಸ್ ಹಾಗೂ ಶಿವಲಿಂಗೇಗೌಡರ ಪ್ರಭಾವ ಕುಸಿಯುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಈ ಬಾರಿ ಶಿವಲಿಂಗೇಗೌಡರು ಜೆಡಿಎಸ್‌ನಿಂದ ಸ್ಪರ್ಧಿಸಿದರೆ, ಗೆಲ್ಲುವುದು ಸರಳವಲ್ಲಿ ಎಂಬ ವಿಶ್ಲೇಷಣೆಗಳು ರಾಜಕೀಯ ವಲಯದಲ್ಲಿ ಓಡಾಡುತ್ತಿವೆ. ಆದ್ದರಿಂದ ಶಿವಲಿಂಗೇಗೌಡರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸುವುದಕ್ಕೆ ನೋಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಾಂಗ್ರೆಸ್ ಸೇರ್ಪಡೆ ಕುರಿತು ಎಚ್. ಡಿ. ರೇವಣ್ಣ ಜೊತೆ ಶಿವಲಿಂಗೇಗೌಡರು ಮಾತುಕತೆ ನಡೆಸಿದ್ದಾರೆ. ರೇವಣ್ಣ ಅವರು ಜನವರಿ 17ರ ವರೆಗೂ ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ.

ಕೈ ಹಿಡಿಯಲಿರುವ ಮುಳುಬಾಗಿಲು ಪಕ್ಷೇತರ ಶಾಸಕ
ಮುಳುಬಾಗಿಲಿನ ಪಕ್ಷೇತರ ಶಾಸಕ ಹಾಗೂ ಮಾಜಿ ಸಚಿವ ಎಚ್. ನಾಗೇಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಅವರು ಜನವರಿ 14 (ಶನಿವಾರ) ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರುವುದು ಬಹುತೇಕ ಪಕ್ಕಾ ಆಗಿದೆ. ಕಳೆದ ವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದ್ದಾರೆ. ಮುಳುಬಾಗಿಲಿನಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿ ನೇಮಗೊಂಡಿದ್ದರು. ಆ ನಂತರ ಬಂದ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿತ್ತು. ಇದು ಎಚ್. ನಾಗೇಶ್ ಅವರಲ್ಲಿ ಅಸಮಾಧಾನ ಉಂಟು ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್ ಸೇರಲು ಇಚ್ಛಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಆದರೆ, ಇನ್ನೊಂದು ಮೂಲದ ಪ್ರಕಾರ, ಈ ಬಾರಿ ಮುಳುಬಾಗಿಲಿನಲ್ಲಿ ಎಚ್. ನಾಗೇಶ್ ಅವರ ಗೆಲುವು ಅಷ್ಟೊಂದು ಸುಲಭವಲ್ಲ. ಈ ಕಾರಣಕ್ಕಾಗಿ ಎಚ್. ನಾಗೇಶ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಹದೇವಪುರದಿಂದ ಎಚ್. ನಾಗೇಶ್ ಸ್ಪರ್ಧೆ?
ಮುಳುಬಾಗಿಲಿನ ಪಕ್ಷೇತರ ಶಾಸಕರಾಗಿರುವ ಎಚ್. ನಾಗೇಶ್ ಕಾಂಗ್ರೆಸ್ ಸೇರಿದ ನಂತರ ಯಾವ ಕ್ಷೇತ್ರದಿಂದ ಟಿಕೆಟ್ ಬಯಸಿದ್ದಾರೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಪ್ರಸ್ತುತ ಮುಳುಬಾಗಿಲಿನ ಪಕ್ಷೇತರ ಶಾಸಕರಾಗಿರುವ ನಾಗೇಶ್, ಬೆಂಗಳೂರಿನ ಮಹದೇವಪುರದಿಂದ ಟಿಕೆಟ್ ಬಯಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ನಾಗೇಶ್ ಅವರು ವೈಟ್ ಫಿಲ್ಡ್‌ನವರು. ಆದ್ದರಿಂದ, ಮಹದೇವಪುರ ಕ್ಷೇತ್ರದಲ್ಲಿ ಹೆಚ್ಚು ಪರಿಚಿತರಾಗಿದ್ದಾರೆ. ಈ ಕಾರಣಕ್ಕಾಗಿ, ಮಹದೇವಪುರ ಕ್ಷೇತ್ರದಿಂದ ಟಿಕೆಟ್ ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಮಹದೇವಪುರ ಕಾಂಗ್ರೆಸ್ ಟಿಕೆಟ್‌ಗಾಗಿ ಹಲವರು ಪ್ರಬಲ ಆಕಾಂಕ್ಷಿಗಳಿದ್ದಾರೆ. ಅವರು ಬಂಡಾಯ ಏಳುವ ಸಾಧ್ಯತೆ ಇದೆ. ನಾಗೇಶ್ ಅವರಿಗೆ ಮಹದೇವಪುರ ಅಷ್ಟು ಸುಲಭದ ಹಾದಿಯಾಗದು ಎಂಬ ವಿಶ್ಲೇಷಣೆಗಳು ಮುನ್ನೆಲೆಗೆ ಬಂದಿವೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications