Next CM of Karnataka : ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕು ಎಂಬ ಟ್ವಿಟರ್ ಸಮೀಕ್ಷೆಯಲ್ಲಿ ಅಚ್ಚರಿಯ ಫಲಿತಾಂಶ
ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಗುಂಪೊಂದು ಟ್ವಿಟರ್ ಸಮೀಕ್ಷೆ ನಡೆಸಿದ್ದು, ಫಲಿತಾಂಶ ಅಚ್ಚರಿಯಾಗಿದೆ.
ಬೆಂಗಳೂರು, ಫೆಬ್ರವರಿ. 14: ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅನೇಕ ಸಂಘಟನೆಗಳು ಸಮೀಕ್ಷೆಗಳನ್ನು ನಡೆಸುತ್ತಿವೆ. ಇದರಲ್ಲೇ ಮುಂದಿನ ಸಿಎಂ ಯಾರು ಎಂಬ ಬಗ್ಗೆ ಟ್ವಿಟರ್ ಸಮೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಅಚ್ಚರಿಯಾಗಿದೆ.
ಈ ತಿಂಗಳ ಆರಂಭದಲ್ಲಿ ನಡೆಸಲಾಗಿರುವ ಟ್ವಿಟರ್ ಸಮೀಕ್ಷೆಯಲ್ಲಿ ರಾಜ್ಯದ ಮತದಾರರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್‌ನಲ್ಲಿ 10,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಪಿಎಲ್‌ಇ ಕರ್ನಾಟಕ ಎಂಬ ಟ್ವಿಟರ್ ಗುಂಪು ನೆಟ್ಟಿಗರಿಂದ ಸಮೀಕ್ಷೆ ನಡೆಸಿದ್ದು, ಫೆಬ್ರವರಿ 3 ರಂದು ಸಮೀಕ್ಷೆಯ ಫಲಿತಾಂಶವನ್ನು ಹಂಚಿಕೊಳ್ಳಲಾಗಿದ್ದು, 2,000 ಕ್ಕೂ ಹೆಚ್ಚು ಜನರು ಮತ ಚಲಾಯಿಸಿದ್ದಾರೆ.

"ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು..? ಎಂಬ ಪ್ರಶ್ನೆಯನ್ನು ನೀಡಿ ಕರ್ನಾಟಕ ರಾಷ್ಟ್ರ ಸಮಿತಿ, ಜಾತ್ಯತೀತ ಜನತಾ ದಳ, ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಟ್ಯಾಗ್ ಮಾಡಲಾಗಿದೆ. ಇದರಲ್ಲಿ ನಾಲ್ಕು ಮಂದಿಯನ್ನು ಆಯ್ಕೆಗಳಲ್ಲಿ ಒದಗಿಸಲಾಗಿದೆ.
1. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರವಿಕೃಷ್ಣಾ ರೆಡ್ಡಿ
2. ಪ್ರಾದೇಶಿಕ ಪಕ್ಷದ ಜಾತ್ಯತೀತ ಜನತಾ ದಳದಿಂದ ಎಚ್ ಡಿ ಕುಮಾರಸ್ವಾಮಿ
3. ಕಾಂಗ್ರೆಸ್‌ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

4. ಬಿಜೆಪಿಯಿಂದ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ?@krs_party @JanataDal_S @INCKarnataka @BJP4Karnataka #KarnatakaElections2023
— PLE Karnataka (@PLEKarnataka) February 3, 2023
ಇದರಲ್ಲಿ ರವಿಕೃಷ್ಣಾ ರೆಡ್ಡಿಗೆ ಶೇಕಡಾ 26.5, ಎಚ್ ಡಿ ಕುಮಾರಸ್ವಾಮಿಗೆ ಶೇಕಡಾ 29.5, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೇಕಡಾ 35.4 ಮತ್ತು ಹಾಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಶೇಕಡಾ 8.6 ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಇದರ ಮೂಲಕ ಸಿದ್ದರಾಮಯ್ಯ ಅವರನ್ನು ಹೆಚ್ಚಿನ ಜನ ಆಯ್ಕೆ ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅತಿ ಕಡಿಮೆ ಮತ ಪಡೆದಿದ್ದಾರೆ.

ರಾಜ್ಯದಲ್ಲಿ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎಲ್ಲಾ ಪ್ರಮುಖ ಪಕ್ಷಗಳು ಪ್ರಚಾರ ಕಾರ್ಯಕ್ರಮಗಳು ಮತ್ತು ಅಭಿಯಾನಗಳನ್ನು ನಡೆಸುತ್ತಿವೆ. ಚುನಾವಣೆಯ ನಿಖರವಾದ ದಿನಾಂಕವನ್ನು ಇನ್ನೂ ಆಯೋಗ ಘೋಷಿಸಿಲ್ಲ. ಆದರೂ ಮೇ ತಿಂಗಳಿನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಇನ್ನು, ಇತ್ತೀಚಿನ ರಾಜಕೀಯ ಬೆಳವಣಿಗೆಯನ್ನು ಗಮನಿಸುವುದಾದರೇ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕರ್ನಾಟಕದಲ್ಲಿ 100 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ವಿಧಾನಸಭಾ ಚುನಾವಣೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಬಿಜೆಪಿ ಉಸ್ತುವಾರಿಯಾಗಿ ನೇಮಿಸಿದೆ.

ಹಿರಿಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಕೋಲಾರದಲ್ಲಿ ಮತ ಬೇಟೆ ಆರಂಭಿಸಿದ್ದಾರೆ. ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಘೋಷಿಸಿದ ಒಂದು ತಿಂಗಳ ನಂತರ ಮತ್ತೆ ರಣರಂಗಕ್ಕೆ ಮರಳಿದ್ದಾರೆ. ಅವರ ಪತ್ನಿ ಅರುಣಾ ಲಕ್ಷ್ಮಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಇತ್ತ, ಎಚ್.ಡಿ. ಕುಮಾರಸ್ವಾಮಿಯವರ ಅಣ್ಣ ಎಚ್.ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಹಾಸನದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸುತ್ತಿದ್ದಾರೆ. ಆದರೆ ಜೆಡಿಎಸ್ ಪಕ್ಷದಲ್ಲಿನ ಕೆಲವು ಆಂತರಿಕ ಕಲಹಗಳು ಕಂಡುಬಂದರೂ, ಮತ್ತೆ ಎಲ್ಲವೂ ಸರಿಯಾಗಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications